ನವದೆಹಲಿ: ಮನಿ ಲಾಂಡರಿಂಗ್ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಕಾಂಗ್ರೆಸ್ ಮುಖಂಡ ಡಿಕೆ.ಶಿವಕುಮಾರ್  ಜಾಮೀನು ಅರ್ಜಿಯನ್ನು ದೆಹಲಿ ವಿಶೇಷ ನ್ಯಾಯಾಲಯ ವಜಾಗೊಳಿಸಿದೆ.


COMMERCIAL BREAK
SCROLL TO CONTINUE READING

ಮನಿ ಲಾಂಡರಿಂಗ್ ಪ್ರಕರಣದ ವಿಚಾರವಾಗಿ ಡಿಕೆಶಿ ಅವರನ್ನು ಸುದೀರ್ಘ ವಿಚಾರಣೆಗೆ ಒಳಪಡಿಸಿದ ವಿಶೇಷ ನ್ಯಾಯಾಲಯ ತೀರ್ಪನ್ನು ಕಾಯ್ದಿರಿಸಿತ್ತು. ಇಂದು ಒಂದು ವಾಕ್ಯದ ತೀರ್ಪನ್ನು ಓದಿದ ನ್ಯಾಯಾಧೀಶ ಅಜಯ್ ಕುಮಾರ್ ಅವರು ಜಾಮೀನು ಅರ್ಜಿಯನ್ನು ವಜಾಗೊಳಿಸಿರುವುದಾಗಿ ಪ್ರಕಟಿಸಿದರು.  



ಈಗ ಡಿ.ಕೆ.ಶಿವಕುಮಾರ್ ಅವರಿಗೆ ಜಾಮೀನು ಸಿಗದ ಹಿನ್ನಲೆಯಲ್ಲಿ ಸದ್ಯ ಅವರನ್ನು ಬಂಧಿಸಿ ತಿಹಾರ್ ಜೈಲಿನಲ್ಲಿರಿಸಲಾಗಿದೆ. ಈಗ ಜಾಮೀನು ಸಿಗುವವರೆಗೂ ಅವರು ಅಲ್ಲಿಯೇ ಇರಲಿದ್ದಾರೆ ಎನ್ನಲಾಗಿದೆ. ದೆಹಲಿ ವಿಶೇಷ ನ್ಯಾಯಾಲಯ ಅವರ ಜಾಮೀನು ಅರ್ಜಿಯನ್ನು ನಿರಾಕರಿಸಿದ ಬೆನ್ನಲ್ಲಿ ಅವರು ದೆಹಲಿ ಹೈಕೋರ್ಟ್ ಗೆ ಮೊರೆ ಹೋಗುವ ಸಾಧ್ಯತೆ ಇದೆ ಎನ್ನಲಾಗಿದೆ.


ಇಂದು ಅಂತಿಮ ತೀರ್ಪು ಹೊರ ಬೀಳುತ್ತಿರುವ ಹಿನ್ನಲೆಯಲ್ಲಿ ರೋಸ್ ಅವನ್ಯೂ ಕೋರ್ಟ್ ಆವರಣದ ಸುತ್ತಮುತ್ತಲು ಭಾರಿ ಬಿಗಿ ಭದ್ರತೆಯನ್ನು ಒದಗಿಸಲಾಗಿತ್ತು.