ಅರ್ಹ ಫಲಾನುಭವಿಗಳಿಗೆ ವಸತಿ ಯೋಜನೆ ತಲುಪಿಸಲು ಮುಖ್ಯಮಂತ್ರಿ ಸೂಚನೆ

ಬಡತನ ರೇಖೆಗಿಂತ ಕೆಳಗಿರುವವರಿಗಾಗಿ ರಾಜ್ಯದಲ್ಲಿ 2001 ರಿಂದ ಈವರೆಗೆ 42.37 ಲಕ್ಷ ಮನೆಗಳ ನಿರ್ಮಾಣ.

Last Updated : Jun 21, 2019, 08:36 AM IST
ಅರ್ಹ ಫಲಾನುಭವಿಗಳಿಗೆ ವಸತಿ ಯೋಜನೆ ತಲುಪಿಸಲು ಮುಖ್ಯಮಂತ್ರಿ ಸೂಚನೆ title=
Representational Image

ಬೆಂಗಳೂರು:  ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ಗುರುವಾರ ವಸತಿ ಇಲಾಖೆ ಯೋಜನೆಗಳ ಪರಿಶೀಲನಾ ಸಭೆ ನಡೆಯಿತು. 

ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು ಅರ್ಹ ಫಲಾನುಭವಿಗಳಿಗೆ ವಸತಿ ಯೋಜನೆಯ ಲಾಭವನ್ನು ತಲುಪಿಸಿ ಎಂದು  ವಸತಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. 

ಬಡತನ ರೇಖೆಗಿಂತ ಕೆಳಗಿರುವವರಿಗಾಗಿ ರಾಜ್ಯದಲ್ಲಿ 2001 ರಿಂದ ಈವರೆಗೆ 42.37 ಲಕ್ಷ ಮನೆಗಳನ್ನು ನಿರ್ಮಿಸಲಾಗಿದೆ.  ರಾಜ್ಯ ಸರ್ಕಾರದ ವಿವಿಧ ವಸತಿ ಯೋಜನೆಗಳಡಿಯಲ್ಲಿ  7 ಲಕ್ಷ ಮನೆಗಳ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ ಎಂದು ವಸತಿ ಇಲಾಖೆ ಅಧಿಕಾರಿಗಳು ತಿಳಿಸಿದರು.

ವಸತಿ ಸಚಿವ  ಎಂ.ಟಿ.ಬಿ.ನಾಗರಾಜ್, ಕರ್ನಾಟಕ ವಸತಿ ಮಂಡಳಿ ಅಧ್ಯಕ್ಷ ಶಿವಲಿಂಗೇಗೌಡ, ರಾಜೀವ್ ಗಾಂಧಿ ವಸತಿ ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರಾದ ಅನ್ಬುಕುಮಾರ್, ವಸತಿ ಇಲಾಖೆ ಕಾರ್ಯದರ್ಶಿ ಜೆ.ರವಿಶಂಕರ್, ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐ.ಎಸ್.ಎನ್.ಪ್ರಸಾದ್ ಉಪಸ್ಥಿತರಿದ್ದರು.
 

Trending News