ವೇತನ ಹೆಚ್ಚಳಕ್ಕೆ ಆಗ್ರಹ: ಮಾ.16 ರಿಂದ ಕವಿಪ್ರನಿ-ವಿದ್ಯುತ್ ಸರಬರಾಜು ಕಂಪನಿಗಳಿಂದ ಮುಷ್ಕರ

ಇಂದು ನಗರದಲ್ಲಿ ಸಂಸ್ಥೆಗಳ ಒಕ್ಕೂಟದ ಸಭೆ ನಡೆಸಿದ ನಂತರ ಈ ವಿಷಯವನ್ನು ತಿಳಿಸಿದರು. ವೇತನ ಶ್ರೇಣಿಯನ್ನು ಹೆಚ್ಚಿಸುವಂತೆ ಹಾಗೂ ಇನ್ನಿತರ ಬೇಡಿಕೆಗಳನ್ನು ಈಡೇರಿಸುವಂತೆ ಈಗಾಗಲೇ ಆಡಳಿತ ಮಂಡಳಿಗೆ 14 ದಿನಗಳ ಮುಷ್ಕರ ನೋಟೀಸ್‌ ಜಾರಿ ಮಾಡಲಾಗಿತ್ತು. ನೋಟೀಸ್‌ ಜಾರಿ ಮಾಡಿ ಹತ್ತು ದಿನಗಳ ಕಳೆದರೂ ಇಲ್ಲಿಯವರೆಗೂ ನಮ್ಮ ಮಂಡಳಿಯಿಂದ ನಮ್ಮ ಬೇಡಿಕೆಗಳಿಗೆ ಪೂರಕವಾದ ಸ್ಪಂದನೆ ದೊರೆತಿಲ್ಲ.

Written by - Prashobh Devanahalli | Edited by - Bhavishya Shetty | Last Updated : Mar 11, 2023, 10:04 PM IST
    • ವೇತನ ಪರಿಷ್ಕರಣೆ ಹೆಚ್ಚಿಸುವಂತೆ ಕವಿಪ್ರನಿ ನೌಕರರ ಸಂಘ ಮತ್ತು ಸಂಸ್ಥೆಗಳ ಒಕ್ಕೂಟ ಆಗ್ರಹ
    • ಮುಷ್ಕರದ ನೋಟೀಸ್‌ ಗೆ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸದೇ ಇರುವ ಹಿನ್ನಲೆ
    • ಮಾರ್ಚ್‌ 16 ರಿಂದ ಸಾಮೂಹಿಕವಾಗಿ ಕರ್ತವ್ಯಕ್ಕೆ ಗೈರು ಹಾಜರಾಗುವ ಮೂಲಕ ಅನಿರ್ಧಿಷ್ಟಾವಧಿ ಮುಷ್ಕರ
ವೇತನ ಹೆಚ್ಚಳಕ್ಕೆ ಆಗ್ರಹ: ಮಾ.16 ರಿಂದ ಕವಿಪ್ರನಿ-ವಿದ್ಯುತ್ ಸರಬರಾಜು ಕಂಪನಿಗಳಿಂದ ಮುಷ್ಕರ title=
KEB Engineers

ಬೆಂಗಳೂರು: ವೇತನ ಪರಿಷ್ಕರಣೆ ಹೆಚ್ಚಿಸುವಂತೆ ಆಗ್ರಹಿಸಿ ಕವಿಪ್ರನಿ ನೌಕರರ ಸಂಘ ಮತ್ತು ಸಂಸ್ಥೆಗಳ ಒಕ್ಕೂಟ ನೀಡಿದ್ದ ಮುಷ್ಕರದ ನೋಟೀಸ್‌ ಗೆ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸದೇ ಇರುವ ಹಿನ್ನಲೆಯಲ್ಲಿ ಅನಿವಾರ್ಯವಾಗಿ ನಿಗದಿಯಂತೆ ಮಾರ್ಚ್‌ 16 ರಿಂದ ಸಾಮೂಹಿಕವಾಗಿ ಎಲ್ಲಾ ಅಧಿಕಾರಿಗಳು ಮತ್ತು ನೌಕರರು ತಮ್ಮ ಕರ್ತವ್ಯಕ್ಕೆ ಗೈರು ಹಾಜರಾಗುವ ಮೂಲಕ ಅನಿರ್ಧಿಷ್ಟಾವಧಿ ಮುಷ್ಕರವನ್ನು ನಡೆಸಲು ತೀರ್ಮಾನಿಸಲಾಗಿದೆ ಎಂದು ಕವಿಪ್ರನಿ ನೌಕರರ ಸಂಘ ಮತ್ತು ಸಂಸ್ಥೆಗಳ ಒಕ್ಕೂಟದ ಅಧ್ಯಕ್ಷ ಆರ್‌. ಹೆಚ್. ಲಕ್ಷ್ಮೀಪತಿ ಹೇಳಿದ್ದಾರೆ.

ಇದನ್ನೂ ಓದಿ: ಹಿಂದುಳಿದ ವರ್ಗಗಳ ಏಳಿಗೆಗಾಗಿ ಶ್ರಮಿಸಿದ ಮಹಾ ನಾಯಕ ʼಧ್ರುವ ನಾರಾಯಣʼ

ಇಂದು ನಗರದಲ್ಲಿ ಸಂಸ್ಥೆಗಳ ಒಕ್ಕೂಟದ ಸಭೆ ನಡೆಸಿದ ನಂತರ ಈ ವಿಷಯವನ್ನು ತಿಳಿಸಿದರು. ವೇತನ ಶ್ರೇಣಿಯನ್ನು ಹೆಚ್ಚಿಸುವಂತೆ ಹಾಗೂ ಇನ್ನಿತರ ಬೇಡಿಕೆಗಳನ್ನು ಈಡೇರಿಸುವಂತೆ ಈಗಾಗಲೇ ಆಡಳಿತ ಮಂಡಳಿಗೆ 14 ದಿನಗಳ ಮುಷ್ಕರ ನೋಟೀಸ್‌ ಜಾರಿ ಮಾಡಲಾಗಿತ್ತು. ನೋಟೀಸ್‌ ಜಾರಿ ಮಾಡಿ ಹತ್ತು ದಿನಗಳ ಕಳೆದರೂ ಇಲ್ಲಿಯವರೆಗೂ ನಮ್ಮ ಮಂಡಳಿಯಿಂದ ನಮ್ಮ ಬೇಡಿಕೆಗಳಿಗೆ ಪೂರಕವಾದ ಸ್ಪಂದನೆ ದೊರೆತಿಲ್ಲ. ಆದ್ದರಿಂದ ಅನಿವಾರ್ಯವಾಗಿ ಈಗಾಗಲೇ ನಿಗದಿಯಾಗಿರುವಂತೆ ಮಾರ್ಚ್‌ 16, 2023 ರಿಂದ ಸಾಮೂಹಿಕವಾಗಿ ಎಲ್ಲಾ ಅಧಿಕಾರಿಗಳು ಮತ್ತು ನೌಕರರು ತಮ್ಮ ಕರ್ತವ್ಯಕ್ಕೆ ಗೈರುಹಾಜರಾಗುವ ಮೂಲಕ ಅನಿರ್ದಿಷ್ಟಾವಧಿ ಮುಷ್ಕರವನ್ನು ನಡೆಸಲು ಸಭೆಯಲ್ಲಿ ಒಮ್ಮತದಿಂದ ತೀರ್ಮಾನಿಸಿದ್ದೇವೆ ಎಂದು ಹೇಳಿದರು.

ಸೋಮವಾರದಿಂದಲೇ ಈ ಬಗ್ಗೆ ನಮ್ಮ ಎಲ್ಲಾ ನೌಕರರು ಮತ್ತು ಅಧಿಕಾರಿಗಳಿಗೆ ಮುಷ್ಕರದ ರೂಪುರೇಷೆಗಳನ್ನು ತಿಳಿಸಿಕೊಡಲಿದ್ದೇವೆ. ಸಾರ್ವಜನಿಕರಿಗೆ ಆಗುವ ತೊಂದರೆಗೆ ಸರಕಾರವೇ ಹೊಣೆ. ಕೆಲಸಕ್ಕೆ ಗೈರು ಹಾಜರಾಗುತ್ತೇವೆ ಆ ಸಂದರ್ಭದಲ್ಲಿ ಸಾರ್ವಜನಿಕರಿಗೆ ಆಗುವ ತೊಂದರೆಗಳಿಗೆ ಕ್ಷಮೆ ಕೇಳುತ್ತೇನೆ ಎಂದು ಹೇಳಿದರು.

ಇದನ್ನೂ ಓದಿ: Rishabh Shetty daughter : ರಿಷಬ್ ಶೆಟ್ಟಿ ಮಗಳ ಹುಟ್ಟುಹಬ್ಬಕ್ಕೆ ಯಾರ್ಯಾರು ಸೇರಿದ್ರು?

ಸಭೆಯಲ್ಲಿ ಕೆಇಬಿ ಇಂಜಿನಿಯರುಗಳ ಸಂಘದ ಅಧ್ಯಕ್ಷರು ಹಾಗೂ ಮಹಾಪ್ರಧಾನ ಕಾರ್ಯದರ್ಶಿ ಕೆ. ಶಿವಣ್ಣ, ಕೆಇಬಿ ಎಸ್‌.ಸಿ/ಎಸ್‌.ಟಿ ನೌಕರರ ಕಲ್ಯಾಣ ಸಂಸ್ಥೆ ಅಧ್ಯಕ್ಷ ಕೆ.ದಾಸ್‌ ಪ್ರಕಾಶ್‌, ಕವಿಪ್ರನಿನಿ ಲೆಕ್ಕಾಧಿಕಾರಿಗಳ ಸಂಘದ ಅಧ್ಯಕ್ಷ ಕೆ ರಾಮಚಂದ್ರ ರೆಡ್ಡಿ, ಕವಿಪ್ರನಿ ಡಿಪ್ಲೊಮಾ ಇಂಜಿನಿಯರುಗಳ ಸಂಘದ ಅಧ್ಯಕ್ಷ ಜೆ. ಲೋಕೇಶ್‌ ಸೇರಿದಂತೆ ಎಲ್ಲಾ ಸಂಘ ಸಂಸ್ಥೆಗಳ ಪದಾಧಿಕಾರಿಗಳ ಹಾಗೂ ನೌಕರರು ಉಪಸ್ಥಿತರಿದ್ದರು.

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News