ಬೆಂಗಳೂರು: ಈ ಬಾರಿಯ ಕಾಂಗ್ರೆಸ್- ಜೆಡಿಎಸ್ ಮೈತ್ರಿ ಸರ್ಕಾರದ ಬಜೆಟ್ ನಲ್ಲಿ ಉತ್ತರ ಕರ್ನಾಟಕದ ಜಿಲ್ಲೆಗಳಿಗೆ ಹೆಚ್ಚಿನ ಮಾನ್ಯತೆ ನೀಡದೆ ಇರುವ ಕಾರಣ ಉತ್ತರ ಕರ್ನಾಟಕದ ಭಾಗದ ಶಾಸಕರು ತಮ್ಮ  ಅಸಮಾಧಾನ ಹೊರಹಾಕಿದ್ದಾರೆ.


COMMERCIAL BREAK
SCROLL TO CONTINUE READING

ಬಜೆಟ್ ಕುರಿತ ವಿಧಾನಸಭೆಯಲ್ಲಿ ನಡೆದ ಚರ್ಚೆಯ ಸಂದರ್ಭದಲ್ಲಿ ಬಹುತೇಕ ಉ.ಕ ಭಾಗದ ಶಾಸಕರು ತಮ್ಮ ಅಸಮಾಧಾನವನ್ನು ಹೊರಹಾಕುತ್ತಾ ಬಜೆಟ್ ನಲ್ಲಿ ಮೈತ್ರಿ ಸರ್ಕಾರದ  ಬಜೆಟ್ ನಲ್ಲಿ  ಕೇವಲ ಮೈಸೂರು ಭಾಗದ ಜಿಲ್ಲೆಗಳಿಗೆ ಹೆಚ್ಚಿನ  ಪ್ರಾಧಾನ್ಯತೆಯನ್ನು ನೀಡಲಾಗಿದೆ, ಒಂದುವೇಳೆ ಈ ಪ್ರಾದೇಶಿಕ ಅಸಮಾನತೆಯನ್ನು ಸರಿಪಡಿಸದೆ ಹೋದಲ್ಲಿ ತೆಲಂಗಾಣ ರೀತಿಯ ಪ್ರತ್ಯೇಕ ರಾಜ್ಯದ ಹೋರಾಟವನ್ನು ಮಾಡಲಾಗುತ್ತದೆ ಎನ್ನುವ ಎಚ್ಚರಿಕೆಯನ್ನು ನೀಡಿದರು. 


ವಿಧಾನಸಭೆಯಲ್ಲಿ ನಡೆದ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ಬಸವರಾಜ್ ಬೊಮ್ಮಾಯಿ ಕೃಷ್ಣಾ ಮೇಲ್ದಂಡೆ ಯೋಜನೆಗೆ ಸರ್ಕಾರ ಸ್ಪಂಧಿಸಿದರೆ ರೈತರ ಸಾಲ ಮನ್ನಾಗೆ ಒತ್ತಾಯಿಸುವುದಿಲ್ಲ ಎಂದು ತಿಳಿಸಿದರು. ಅಲ್ಲದೆ ಈ ಯೋಜನೆಯಡಿಯಲ್ಲಿ ಮುಳುಗಡೆಯಾದ ಸುಮಾರು 20ಕ್ಕೂ ಅಧಿಕ ಹಳ್ಳಿಗಳ ಪುನರ್ವಸತಿ ವಿಚಾರದಲ್ಲಿ  ಸರ್ಕಾರಕ್ಕೆ ಇಂದಿಗೂ ಸ್ಪಷ್ಟತೆ ಇಲ್ಲವೆಂದರು.ಒಂದು ವೇಳೆ ಈ ಯೋಜನೆ ಪೂರ್ಣಗೊಂಡರೆ ಈ ಸುಮಾರು 13 ಲಕ್ಷ ಎಕರೆ ಪ್ರದೇಶ ನೀರಾವರಿಯಾಗುತ್ತದೆ.ಒಂದು ವೇಳೆ ಇದನ್ನು ಸರ್ಕಾರ ನಿರ್ಲಕ್ಷಿಸಿದರೆ ಉತ್ತರ ಕರ್ನಾಟಕದ ಪ್ರತ್ಯೇಕ ರಾಜ್ಯದ ಕೂಗು ಅನಿವಾರ್ಯವಾಗುತ್ತದೆ ಎಂದು ತಿಳಿಸಿದರು.