ಕಬ್ಬಿಗೆ ಸೂಕ್ತ ಬೆಲೆ ನಿರ್ಣಯ ಸಂಧಾನ ಸಭೆ ವಿಫಲ- ಇಂದು ಮುಧೋಳ ನಗರ ಬಂದ್
ಬಂದ್ ವೇಳೆ ಶಾಲಾ ವಾಹನ, ಹಾಲಿನ ವಾಹನ, ಆಂಬುಲೆನ್ಸ್ ವಾಹನ ಸಂಚಾರಕ್ಕೆ ಮಾತ್ರ ಅವಕಾಶ ನೀಡಲಾಗುವುದು. ಉಳಿದಂತೆ ಎಲ್ಲ ವಾಹನ ಸಂಚಾರ ಬಂದ್ ಸಾಧ್ಯತೆ.
ಬಾಗಲಕೋಟೆ: ಕಬ್ಬಿಗೆ ಸೂಕ್ತ ಬೆಲೆ ನಿರ್ಣಯಕ್ಕಾಗಿ ಕರೆದ ಸಂಧಾನ ಸಭೆ ವಿಫಲ ಹಿನ್ನೆಲೆಯಲ್ಲಿ ಇಂದು ಕರ್ನಾಟಕ ರಾಜ್ಯ ರೈತ ಸಂಘದಿಂದ ಬಾಗಲಕೋಟೆ ಜಿಲ್ಲೆ ಮುಧೋಳ ನಗರ ಬಂದ್‌ಗೆ ಕರೆ ನೀಡಲಾಗಿದೆ. ಕರ್ನಾಟಕ ರಾಜ್ಯ ರೈತ ಸಂಘ ಬಾಗಲಕೋಟೆ ಜಿಲ್ಲಾಧ್ಯಕ್ಷ ಬಸವಂತಪ್ಪ ಕಾಂಬಳೆ ಈ ಬಂದ್ ಗೆ ಕರೆ ನೀಡಿದ್ದಾರೆ.
ಇಂದು ಮುಧೋಳ ನಗರ ಬಂದ್ ಸಂದರ್ಭದಲ್ಲಿ ಅಂಗಡಿ ಮುಂಗಟ್ಟು ವ್ಯಾಪಾರ ವಹಿವಾಟು ಬಹುತೇಕ ಬಂದ್ ಆಗುವ ಸಾಧ್ಯತೆ ಇದ್ದು, ಸಾರಿಗೆ ಸಂಚಾರದಲ್ಲಿಯೂ ವ್ಯತ್ಯಯವಾಗುವ ಸಂಭವವಿದೆ ಎಂದು ಹೇಳಲಾಗುತ್ತಿದೆ.
ಈ ಸೇವೆಗಳಿಗಷ್ಟೇ ಅವಕಾಶ:
ಇನ್ನು ಬಂದ್ ವೇಳೆ ಶಾಲಾ ವಾಹನ, ಹಾಲಿನ ವಾಹನ, ಆಂಬುಲೆನ್ಸ್ ವಾಹನ ಸಂಚಾರಕ್ಕೆ ಮಾತ್ರ ಅವಕಾಶ ನೀಡಲಾಗುವುದು. ಉಳಿದಂತೆ ಎಲ್ಲ ವಾಹನ ಸಂಚಾರ ಬಂದ್ ಸಾಧ್ಯತೆ ಇದೇ ಎಂದು ತಿಳಿದುಬಂದಿದೆ.
ಇದನ್ನೂ ಓದಿ- Basavaraj Bommai : ಬಿಜೆಪಿ ಸರ್ಕಾರದಿಂದ 150 ಕ್ಕೂ ಹೆಚ್ಚು ಕೆರೆಗಳು ತುಂಬಿವೆ : ಸಿಎಂ ಬೊಮ್ಮಾಯಿ
ವಾಸ್ತವವಾಗಿ, ನಿನ್ನೆ (ನವೆಂಬರ್ 15, ಮಂಗಳವಾರ) ಕಬ್ಬಿಗೆ ಸೂಕ್ತ ಬೆಲೆಗಾಗಿ ರೈತರು, ಕಾರ್ಖಾನೆ ಆಡಳಿತ ಮಂಡಳಿ ಸಭೆ ಕರೆದಿತ್ತು. ಸಕ್ಕರೆ ಸಚಿವ ಶಂಕರಪಾಟಿಲ್ ಮುನೇನಕೊಪ್ಪ, ಬಾಗಲಕೋಟೆ ಉಸ್ತುವಾರಿ ಸಚಿವ ಸಿಸಿ ಪಾಟಿಲ್, ಸಚಿವ ಗೋವಿಂದ ಕಾರಜೋಳ ನೇತೃತ್ವದಲ್ಲಿ ಸಭೆ ಕರೆಯಲಾಗಿತ್ತು.
ಇದನ್ನೂ ಓದಿ- ರಸ್ತೆಗುಂಡಿಗೆ ಯೋಧ ಬಲಿ: ಪ್ರತಿಭಟನೆ ನಡೆಸಿದ ಎಎಪಿ ಮುಖಂಡರ ಬಂಧನ
ಸಭೆಯಲ್ಲಿ ರೈತರು ಟನ್ ಕಬ್ಬಿಗೆ 2900 ರೂ. ಬೆಲೆ ಕೇಳಿದ್ದರು. ಆದರೆ, ಕಾರ್ಖಾನೆ ಆಡಳಿತ ಮಂಡಳಿ 2800 ರೂ. ಮಾತ್ರ ಬೆಲೆ ನಿಗದಿ ಮಾಡುವುದಾಗಿ ಪಟ್ಟು ಹಿಡಿದಿತ್ತು. ಹೀಗಾಗಿ ಸಭೆಯಲ್ಲಿ ರೈತರು ಹಾಗೂ ಕಾರ್ಖಾನೆ ಆಡಳಿತ ಮಂಡಳಿ ಮಧ್ಯೆ ಸಂಧಾನ ವಿಫಲವಾದ ಹಿನ್ನಲೆಯಲ್ಲಿ ಇಂದು ಮುಧೋಳ ಬಂದ್ ಗೆ ಕರೆ ನೀಡಲಾಗಿದೆ. ಕರ್ನಾಟಕ ರಾಜ್ಯ ರೈತ ಸಂಘ, ಹಸಿರು ಸೇನೆ ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರರ ಸಂಘ ಹಾಗೂ ಕಬ್ಬು ಬೆಳೆಗಾರರ ಸಂಯುಕ್ತ ಆಶ್ರಯದಲ್ಲಿ ಇಂದು ಬಂದ್ ನಡೆಯಲಿದೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.