ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ತಮ್ಮ ವಿರುದ್ದ ಡಿನೋಟಿಫಿಕೇಷನ್ ಆರೋಪ ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿ, ಲೋಕಾಯುಕ್ತ ಪೊಲೀಸರ ತನಿಖೆಗೆ ಹೈಕೋರ್ಟ್‌ ಗ್ರೀನ್‌ ಸಿಗ್ನಲ್‌ ನೀಡಿದೆ. ಇದೇ ವೇಳೆ ತಮ್ಮ ವಿರುದ್ದ ಕೇಳಿ ಬಂದಿದ್ದ ಆರೋಪಕ್ಕೆ ಸಂಬಂಧಪಟ್ಟಂತೆ ದಾಖಲಾಗಿದ್ದ, ಎಫ್‌ಐಆರ್ ಅನ್ನು ಕೂಡ ರಾಜ್ಯ ಹೈಕೋರ್ಟ್‌ ನಿರಾಕರಿಸಿದ್ದು, ತನಿಖೆಯನ್ನು ಮುಂದುವರೆಸುವಂಥೆ ಸಂಬಂಧಪಟ್ಟ ಇಲಾಖೆಗೆ ಸೂಚನೆ ನೀಡಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ :Cronavirus : ಬೆಂಗಳೂರಿನಲ್ಲಿ ಸ್ಫೋಟಿಸಲಿದೆಯಾ ರೂಪಾಂತರಿತ ಕರೋನಾ..? ಬ್ರಿಟನ್ ನಿಂದ ಬಂದು ಮಿಸ್ಸಿಂಗ್ ಆದವರು ಎಲ್ಲಿದ್ದಾರೆ..?


ನ್ಯಾಯಾಮೂರ್ತಿ ಜಾನ್‌ ಮೈಕೆಲ್‌ ಕುನ್ಹಾ ಅವರಿದ್ದ ನ್ಯಾಯಾಪೀಠ ಆದೇಶವನ್ನು ಹೊರಡಿಸಿದ್ದು, ಇದೇ ವೇಳೆ ನ್ಯಾಯಪೀಠ ಅರ್ಜಿದಾರ ಸಿಎಂ ಬಿಎಸ್‌ವೈ(B S Yediyurappa) ಅವರಿಗೆ 25 ಸಾವಿರ ದಂಡವನ್ನು ಹಾಕಿದೆ ಎನ್ನಲಾಗಿದೆ. ಆರ್‌.ಟಿ.ನಗರದ ಗಂಗೇನಹಳ್ಳಿ ವ್ಯಾಪ್ತಿಯ ಮಠದಹಳ್ಳಿ ಬಡಾವಣೆ ಪ್ರದೇಶದಲ್ಲಿ 1 ಎಕರೆ 11 ಗುಂಟೆ ಜಮೀನು ಡಿನೋಟಿಫೈ ಮಾಡಲಾಗಿದೆ ಎಂಬ ಆರೋಪದಲ್ಲಿ ಲೋಕಾಯುಕ್ತ ಪೊಲೀಸರು ಹಾಲಿ ಯಡಿಯೂರಪ್ಪ ವಿರುದ್ಧ ಎಫ್ ಐಆರ್‌ ದಾಖಲಿಸಿದ್ದರು. ಇದನ್ನು ರದ್ದುಗೊಳಿಸುವಂತೆ ಕೋರಿ ಯಡಿಯೂರಪ್ಪ ಅರ್ಜಿ ಸಲ್ಲಿದ್ದರು. ಲೋಕಾಯುಕ್ತ ಪೊಲೀಸರು ದಾಖಲಿಸಿರುವ ಎಫ್‌ಐರ್‌ ರದ್ದುಗೊಳಿಸುವಂತೆ ಕೋರಿ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಮನವಿ ಮಾಡಿಕೊಂಡಿದ್ದರು.


ಇದನ್ನೂ ಓದಿ :R.Shankar: 'ಇಂದು ಸಂಜೆಯೇ ನಾನು ಮಂತ್ರಿಯಾಗಬಹುದು'


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...


Android Link - https://bit.ly/3hDyh4G


Apple Link - https://apple.co/3loQYe


ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.