H.D.Kumaraswamy: ಕುಮಾರಸ್ವಾಮಿಗೆ `ಬಿಗ್ ಶಾಕ್` ನೀಡಿದ ಸುಪ್ರೀಂಕೋರ್ಟ್..!
ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ತಡೆ ನೀಡಲು ಸುಪ್ರೀಂಕೋರ್ಟ್ ಮೊರೆ ಹೋಗಿದ್ದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಗೆ ಹಿನ್ನಡೆ
ನವದೆಹಲಿ: ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ತಡೆ ನೀಡಲು ಸುಪ್ರೀಂಕೋರ್ಟ್ ಮೊರೆ ಹೋಗಿದ್ದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಗೆ ಹಿನ್ನಡೆಯಾಗಿದೆ.
ಹೌದು.. ಹಲಗೆ ವಡೇರಹಳ್ಳಿ ಡಿನೋಟಿಫಿಕೇಷನ್ ಪ್ರಕರಣ(Denotification Case)ಕ್ಕೆ ಸಂಬಂಧಿಸಿದಂತೆ ತನಿಖೆಗೆ ತಡೆ ನೀಡಲು ಸುಪ್ರೀಂಕೋರ್ಟ್ ನಿರಾಕರಿಸಿದ್ದು, ತನಿಖೆ ಮುಂದುವರೆಸುವಂತೆ ಸೂಚಿಸಿದೆ.
Laxman Savadi : 'ನಷ್ಟದಿಂದ ಸಾರಿಗೆ ಸಂಸ್ಥೆ ಮುಚ್ಚಲಿದೆ ಅನ್ನೋ ಭಯ ಬೇಡ'
ಅಲ್ಲದೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಷ್ಟು ಮಾಹಿತಿ ಕೋರಿ ನ್ಯಾ. ಅಶೋಕ್ ಭೂಷಣ್ ನೇತೃತ್ವದ ಪೀಠ, ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ. ಹಲಗೆ ವಡೇರಹಳ್ಳಿ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಕುಮಾರಸ್ವಾಮಿಗೆ ಸಮನ್ಸ್ ಜಾರಿಗೊಳಿಸಿತ್ತು. ಹೀಗಾಗಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್ನ ಆದೇಶ ಪ್ರಶ್ನಿಸಿ, ಎಚ್ಡಿಕೆ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದರು. ಆದರೆ ಹೈಕೋರ್ಟ್ ಅರ್ಜಿ ವಜಾಗೊಳಿಸಿತ್ತು.
K.S.Eshwarappa: 'ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ ಸ್ವಯಂಘೋಷಿತ ಮುಖ್ಯಮಂತ್ರಿ'
ಈ ಹಿನ್ನ್ನೆಲೆಯಲ್ಲಿ ಹೈಕೋರ್ಟ್ನ ತೀರ್ಪನ್ನು ಪ್ರಶ್ನಿಸಿ ಕುಮಾರಸ್ವಾಮಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಆದರೆ, ಸುಪ್ರೀಂ ಕೋರ್ಟ್ ಸಹ ಅರ್ಜಿ ವಜಾ ಮಾಡಿದ್ದು, ಪ್ರಕರಣದ ತನಿಖೆ ಮುಂದುವರಿಸುವಂತೆ ತಿಳಿಸಿದೆ. ಇದರಿಂದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಗೆ ಸಂಕಷ್ಟ ಎದುರಾಗಿದೆ.
ಬೆಳಗಾವಿ ವಶಪಡಿಸಿಕೊಳ್ಳುತ್ತೇವೆ ಎಂಬ ಉದ್ಧವ್ ಠಾಕ್ರೆ ಮಾತು ಚೀನಾದ ವಿಸ್ತರಣಾವಾದದಂತಿದೆ: HDK
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.