ಬೆಂಗಳೂರು: ಪ್ರಸಕ್ತ ಶೈಕ್ಷಣಿಕ ವರ್ಷ(2022-23)ದ ವೇಳಾಪಟ್ಟಿಯನ್ನು ಶಿಕ್ಷಣ ಇಲಾಖೆ ಬಿಡುಗಡೆ ಮಾಡಿದ್ದು, ಈ ವರ್ಷ ಪೂರ್ಣ ಪ್ರಮಾಣದಲ್ಲಿ ತರಗತಿಗಳು ನಡೆಯಲಿವೆ.


COMMERCIAL BREAK
SCROLL TO CONTINUE READING

ಕೊರೊನಾ ಸಾಂಕ್ರಾಮಿಕದ ಕಾರಣದಿಂದ 2 ವರ್ಷಗಳಿಂದ ಸಂಪೂರ್ಣ ತರಗತಿಗಳು ನಡೆದಿರಲಿಲ್ಲ.ಆದರೆ, ಈ ವರ್ಷ ಪೂರ್ಣ ಪ್ರಮಾಣದಲ್ಲಿ ತರಗತಿಗಳು ನಡೆಯಲಿವೆ. 270 ದಿನಗಳನ್ನು ಶೈಕ್ಷಣಿಕ ಚಟುವಟಿಕೆಗಳಿಗೆ ಮೀಸಲಿಡಲಾಗಿದ್ದು, ದಸರಾಗೆ 14 ದಿನ ರಜೆ ಘೋಷಿಸಲಾಗಿದೆ.


ಇದನ್ನೂ ಓದಿ: "ಪಿಯು ಪರೀಕ್ಷಾ ವಿದ್ಯಾರ್ಥಿಗಳಿಗೆ ಸಾರಿಗೆ ಬಸ್‌ಗಳಲ್ಲಿ ಉಚಿತ ಪ್ರಯಾಣ"


ಈ ಬಾರಿ ವಿದ್ಯಾರ್ಥಿಗಳಿಗೆ ಆಪ್ತ ಸಮಾಲೋಚನೆ ಕಾರ್ಯಕ್ರಮವನ್ನು ಇಲಾಖೆ ಹಮ್ಮಿಕೊಂಡಿದೆ. ವಿಶ್ವೇಶ್ವರಯ್ಯ ದಿನಾಚರಣೆ, ಮಹಾತ್ಮಾ ಗಾಂಧಿ, ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ, ಕನಕದಾಸರ ಜಯಂತಿ, ಸಂವಿಧಾನ ದಿನಾಚರಣೆ, ವಿವೇಕಾನಂದ ಜಯಂತಿ ದಾರ್ಶನಿಕರ ಜಯಂತಿ ಆಚರಣೆಗೆ ಸೂಚನೆ ನೀಡಲಾಗಿದೆ. ಹೆಚ್ಚಿನ ಮಾಹಿತಿಗೆ ವಿದ್ಯಾರ್ಥಿಗಳು, ಪೋಷಕರು ಹಾಗೂ ಶಿಕ್ಷಕರು ಇಲಾಖೆಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಪರಿಶೀಲಿಸಬಹುದು.  


ಪ್ರಮುಖ ಮಾಹಿತಿ ಇಲ್ಲಿದೆ ನೋಡಿ


ಮೇ 16ರಿಂದ ಶಾಲೆಗಳು ಆರಂಭ


ಮೇ16 ರಿಂದ 20ರವರೆಗೆ ದಾಖಲಾತಿ ಪ್ರಕ್ರಿಯೆ


ಮೇ 17 ರಿಂದ 31ವರೆಗೆ ಕಲಿಕಾ ಚೇತರಿಕೆ ಕಾರ್ಯಕ್ರಮ


ಮೇ 28 ರಂದು ಪೋಷಕರ ಸಭೆ


ಜೂನ್ 1 ರಿಂದ ಪ್ರಸಕ್ತ ಸಾಲಿನ ಪಠ್ಯ ಬೋಧನೆಗೆ ಚಾಲನೆ


ಅಕ್ಟೋಬರ್ 3 ರಿಂದ 16 ದಸರಾ ರಜೆ


ಅಕ್ಟೋಬರ್ 17 ರಿಂದ 25 ಅರ್ಧ ವಾರ್ಷಿಕ ಪರೀಕ್ಷೆ


2023ರ ಫೆಬ್ರವರಿ 23 ರಿಂದ 25ರವರೆಗೆ ಪೂರ್ವ ಸಿದ್ಧತಾ ಪರೀಕ್ಷೆ


2023ರ ಮಾರ್ಚ್ 23 ರಿಂದ 31ವರೆಗೆ ವಾರ್ಷಿಕ ಪರೀಕ್ಷೆ ನಡೆಯಲಿದೆ


ಇದನ್ನೂ ಓದಿ: ದ್ವೀತಿಯ ಪಿಯು ಪರೀಕ್ಷೆಗೆ ಕ್ಷಣಗಣನೆ: ಪರೀಕ್ಷಾ ಕೇಂದ್ರಗಳಿಗೆ ನೋ ಹಿಜಾಬ್, ಓನ್ಲಿ ಸಮವಸ್ತ್ರ!


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.