ಬೆಂಗಳೂರು: ದೆಹಲಿಯಲ್ಲಿ ರಾಷ್ಟ್ರಪತಿ ರಮಾನಾಥ್ ಕೋವಿಂದ್ ಅವರಿಂದ ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ವೃಕ್ಷಮಾತೆ, ಸಾಲುಮರದ ತಿಮ್ಮಕ್ಕ ಅವರನ್ನು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ ಇಂದು ಸದಾಶಿವನಗರ ಬಿಡಿಎ ನಿವಾಸದಲ್ಲಿ ಅಭಿನಂದಿಸಿದರು. 


COMMERCIAL BREAK
SCROLL TO CONTINUE READING

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಗಡಿಯ ಸಣ್ಣ ತಾಲೂಕಿನಿಂದ ಬಂದ ಇವರು ತಮಗೆ ಮಕ್ಕಳಾಗಲಿಲ್ಲ ಎಂಬ ಬೇಸರಿಂದ ವೃಕ್ಷಗಳನ್ನು ಬೆಳೆಸುವ ಮೂಲಕ ನಿರಾಸೆ ಸರಿದೂಗಿಸುವ ಕೆಲಸ ಮಾಡಿದ್ದಾರೆ.


4 ಕಿ.ಮೀ. ಮರಗಳನ್ನು ಬೆಳೆಸುವ ಮೂಲಕ ಇಡೀ ವಿಶ್ವಕ್ಕೆ ಮಾದರಿಯಾಗಿದ್ದಾರೆ. ಪರಿಸರ ನಾಶವಾಗುತ್ತಿರುವ ಈ ಸಂದರ್ಭದಲ್ಲಿ ಇವರ ಕೆಲಸ ನಮ್ಮೆಲ್ಲರಿಗೂ ಮಾದರಿ. ಇದನ್ನು ಗುರುತಿಸಿದ ಕೇಂದ್ರ ಸರಕಾರಕ್ಕೆ ಅಭಿನಂದನೆ ಸಲ್ಲಿಸುವೆ ಎಂದರು.