ಜಾತಿ ಗಣತಿ ಮೂಲಕ ಎಲ್ಲಾ ವರ್ಗದವರ ರಕ್ಷಣೆಗೆ ಕಾಂಗ್ರೆಸ್ ಸರ್ಕಾರ ಬದ್ಧ : ಡಿಸಿಎಂ ಡಿ.ಕೆ.ಶಿವಕುಮಾರ್

ಎಲ್ಲಾ ಶೋಷಿತ ವರ್ಗದವರಿಗೆ ನ್ಯಾಯ ಒದಗಿಸಿಕೊಡಲು, ಜನಸಂಖ್ಯೆ ಆಧಾರದ ಮೇಲೆ ಅವರಿಗೆ ಶಕ್ತಿ ತುಂಬಲು ರಾಹುಲ್ ಗಾಂಧಿ ಅವರು ದೇಶದಲ್ಲಿ ಜಾತಿ ಗಣತಿಗೆ ಕರೆ ನೀಡಿದ್ದಾರೆ. 

Written by - Prashobh Devanahalli | Last Updated : Jan 28, 2024, 04:53 PM IST
  • ಚಿತ್ರದುರ್ಗದಲ್ಲಿ ಭಾನುವಾರ ನಡೆದ ಶೋಷಿತರ ಜಾಗೃತಿ ಸಮಾವೇಶ
  • ಜಾತಿ ಗಣತಿ ಮೂಲಕ ಎಲ್ಲಾ ವರ್ಗದವರ ರಕ್ಷಣೆಗೆ ಕಾಂಗ್ರೆಸ್ ಸರ್ಕಾರ ಬದ್ಧ
  • ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿಕೆ
ಜಾತಿ ಗಣತಿ ಮೂಲಕ ಎಲ್ಲಾ ವರ್ಗದವರ ರಕ್ಷಣೆಗೆ ಕಾಂಗ್ರೆಸ್ ಸರ್ಕಾರ ಬದ್ಧ : ಡಿಸಿಎಂ ಡಿ.ಕೆ.ಶಿವಕುಮಾರ್  title=

ಬೆಂಗಳೂರು: ಎಲ್ಲಾ ಶೋಷಿತ ವರ್ಗದವರಿಗೆ ನ್ಯಾಯ ಒದಗಿಸಿಕೊಡಲು, ಜನಸಂಖ್ಯೆ ಆಧಾರದ ಮೇಲೆ ಅವರಿಗೆ ಶಕ್ತಿ ತುಂಬಲು ರಾಹುಲ್ ಗಾಂಧಿ ಅವರು ದೇಶದಲ್ಲಿ ಜಾತಿ ಗಣತಿಗೆ ಕರೆ ನೀಡಿದ್ದಾರೆ. ರಾಜ್ಯದಲ್ಲಿ ಇದನ್ನು ಮಾಡಲು ಕಾಂಗ್ರೆಸ್ ಸರ್ಕಾರ ಬದ್ಧವಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಚಿತ್ರದುರ್ಗದಲ್ಲಿ ಭಾನುವಾರ ನಡೆದ ಶೋಷಿತರ ಜಾಗೃತಿ ಸಮಾವೇಶದಲ್ಲಿ ಡಿ.ಕೆ. ಶಿವಕುಮಾರ್ ಮಾತನಾಡಿದರು. ರಾಹುಲ್ ಗಾಂಧಿ ಅವರು ಎಲ್ಲಾ ವರ್ಗದ ಜನರಿಗೆ ನ್ಯಾಯ ಒದಗಿಸಲು ಹೋರಾಡುತ್ತಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ಎಲ್ಲರಿಗೂ ಸಮಾನತೆ ಕಲ್ಪಿಸಲಾಗುವುದು.  ಶೋಷಿತರಿಗೆ ಶಕ್ತಿ ನೀಡಬೇಕು ಎಂಬುದು ಕಾಂಗ್ರೆಸ್ ಸಂಕಲ್ಪ. ಯಾರೂ ಗಾಬರಿಯಾಗಬಾರದು. ಕಾಂಗ್ರೆಸ್ ಸರ್ಕಾರ ನಿಮ್ಮ ಬದುಕಿನ ರಕ್ಷಣೆಗೆ ಬದ್ಧವಾಗಿದೆ.

ಗ್ಯಾರಂಟಿ ಯೋಜನೆಗಳಿಂದ ಜನರಿಗೆ ಶಕ್ತಿ:

ಐದು ಬೆರಳು ಸೇರಿ ಕೈ ಮುಷ್ಠಿಯಾಯಿತು,
ಐದು ಗ್ಯಾರಂಟಿ ಸೇರಿ ಕೈ ಗಟ್ಟಿಯಾಯಿತು
ಇದನ್ನು ನೋಡಿ ಅರಳಿದ್ದ ಕಮಲ ಉದುರಿ ಹೋಯಿತು,
ಇದನ್ನು ನೋಡಿ ಮಹಿಳೆ ತೆನೆ ಎಸೆದು ಹೋದಳು,
ಐದು ಗ್ಯಾರಂಟಿ ಸೇರಿ ಕೈ ಗಟ್ಟಿಯಾಯಿತು,
ಕರ್ನಾಟಕ ಸಮೃದ್ಧವಾಯಿತು,
ಕರ್ನಾಟಕ ಪ್ರಭುದ್ಧವಾಯಿತು.

ಮಹಿಳೆಯರು ಶಕ್ತಿ ಯೋಜನೆಯಲ್ಲಿ ಉಚಿತವಾಗಿ ಬಸ್ ಪ್ರಯಾಣ ಮಾಡುತ್ತಿದ್ದಾರೆ, ಗೃಹಜ್ಯೋತಿ ಯೋಜನೆಯಲ್ಲಿ 200 ಯೂನಿಟ್ ವರೆಗೂ ವಿದ್ಯುತ್ ಉಚಿತವಾಗಿ ಸಿಗುತ್ತಿದೆ. ಗೃಹಲಕ್ಷ್ಮಿ ಯೋಜನೆಯಲ್ಲಿ ಮನೆಯೊಡತಿಗೆ ಪ್ರತಿ ತಿಂಗಳು 2 ಸಾವಿರ ಬರುತ್ತಿದೆ. ಇದೇ ಕಾಂಗ್ರೆಸ್ ಶಕ್ತಿ ಎಂದರು.

ಇದನ್ನೂ ಓದಿ: ಹನುಮಧ್ವಜ ತೆರವು ಮಾಡಿ, ಸರ್ಕಾರ ಓಲೈಕೆ ರಾಜಕಾರಣ ಮಾಡುತ್ತಿದೆ : ಬೊಮ್ಮಾಯಿ 

ಇದೊಂದು ಐತಿಹಾಸಿಕ ಸಮಾವೇಶ. ರಾಜ್ಯದಲ್ಲಿ ಬದಲಾವಣೆ ಪರ್ವ ತರಲು ಈ ಶೋಷಿತರ ಜಾಗೃತಿ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಕಾಂಗ್ರೆಸ್ ಶಕ್ತಿ ದೇಶದ ಶಕ್ತಿ, ಕಾಂಗ್ರೆಸ್ ಇತಿಹಾಸ ದೇಶದ ಇತಿಹಾಸ, ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಎಲ್ಲಾ ವರ್ಗದವರು ಅಧಿಕಾರಕ್ಕೆ ಬಂದಂತೆ. ಇದು ಕಾಂಗ್ರೆಸ್ ಪಕ್ಷದಿಂದ ಮಾತ್ರ ಸಾಧ್ಯ. ಮರಕ್ಕೆ ಬೇರು ಎಷ್ಟು ಮುಖ್ಯವೋ ಹಾಗೆಯೇ ಮನುಷ್ಯರಿಗೆ ನಂಬಿಕೆ ಮುಖ್ಯ ಎಂದರು. 

ದೇವರು ವರವನ್ನೂ ನೀಡುವುದಿಲ್ಲ. ಶಾಪವನ್ನೂ ನೀಡುವುದಿಲ್ಲ. ಕೇವಲ ಅವಕಾಶ ನೀಡುತ್ತಾನೆ. ನಾವು ನಮ್ಮ ಬದುಕಿನಲ್ಲಿ ಸಿಗುವ ಅವಕಾಶವನ್ನು ಬಹಳ ಜಾಗೃತವಾಗಿ ಬಳಸಿಕೊಳ್ಳಬೇಕು. ಯಶಸ್ಸು ಯಾರ ಆಸ್ತಿಯೂ ಅಲ್ಲ. ಯಾವುದೇ ರಾಜ ಸದಾ ರಾಜನಾಗಿರಲು ಸಾಧ್ಯವಿಲ್ಲ. ಶ್ರೀಮಂತ ಸದಾ ಶ್ರೀಮಂತನಾಗಿರಲು ಸಾಧ್ಯವಿಲ್ಲ. ಎಲ್ಲರಿಗೂ ರಾಜನಾಗುವ ಹಾಗೂ ಶ್ರೀಮಂತನಾಗುವ ಅವಕಾಶವನ್ನು ಪ್ರಜಾಪ್ರಭುತ್ವ ವ್ಯವಸ್ಥೆ ಕಲ್ಪಿಸಿದೆ. ಇದೇ ಪ್ರಜಾಪ್ರಭುತ್ವದ ಶಕ್ತಿ ಎಂದರು.

ಅಂಬೇಡ್ಕರ್ ಅವರು ಕೊಟ್ಟ ಸಂವಿಧಾನ, ಭಗವದ್ಗೀತೆ, ಖುರಾನ್, ಬೈಬಲ್ ನಂತೆ ಪವಿತ್ರವಾದ ಗ್ರಂಥ. ಅವು ಧಾರ್ಮಿಕ ಗ್ರಂಥವಾದರೆ, ಸಂವಿಧಾನ ನಮ್ಮ ಬದುಕಿಗೆ ರಕ್ಷಣೆ ಹಾಗೂ ಆಶ್ರಯ ನೀಡುವ ಗ್ರಂಥ. ಹಸಿದವನ ಹೊಟ್ಟೆಗೆ ಅನ್ನ ನೀಡಬೇಕು, ಕಷ್ಟದಲ್ಲಿರುವವರ ಜೊತೆಯಾಗಿ ನಿಲ್ಲಬೇಕು, ನಿಮ್ಮ ಹೋರಾಟ ಮುಂದುವರಿಸಲು ನಾವು ಇಲ್ಲಿದ್ದೇವೆ ಎಂದರು.

ಯಶಸ್ಸು ಯಾರ ವೈಯಕ್ತಿಕ ಸ್ವತ್ತು ಅಲ್ಲ. ನಿಮ್ಮ ಪರಿಶ್ರಮ, ಧೈರ್ಯ ಇದ್ದರೆ ಯಶಸ್ಸು ಕಟ್ಟಿಟ್ಟ ಬುತ್ತಿ. ಮನುಷ್ಯನ ಜೀವನದಲ್ಲಿ ಹೋರಾಟ ಮಾಡಿದಾಗ ಮಾತ್ರ ಪ್ರಗತಿ ಸಾಧ್ಯ. ನಂಬಿಕೆ ಹೋದರೆ ಅದು ಮತ್ತೆ ಸಿಗುವುದು ಕಷ್ಟ ಎಂದರು.

ಇದನ್ನೂ ಓದಿ: ಮಂಡ್ಯದಲ್ಲಿ ಹನುಮ ಧ್ವಜ ಇಳಿಸಿದ ಹಿಂದೂ ದ್ವೇಷಿ ಕಾಂಗ್ರೆಸ್‌: ವಿಪಕ್ಷ ನಾಯಕ ಆರ್‌.ಅಶೋಕ್‌

ಮನೆ ಎಂದಮೇಲೆ ಕಸ ಇರುತ್ತದೆ, ಬದುಕು ಎಂದ ಮೇಲೆ ಕಷ್ಟ ಇರುತ್ತದೆ. ಕಾಂಗ್ರೆಸ್ ಪಕ್ಷ ಇದೇ ಜಾಗದಲ್ಲಿ ದೊಡ್ಡ ಸಮಾವೇಶ ಮಾಡಿತ್ತು. ನಂತರ ನಿಮಗೆ ಐದು ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿದೆವು. ದೇಶದಲ್ಲಿ ಯಾವುದಾದರೂ ಸರ್ಕಾರ ಕೇವಲ ಐದಾರು ತಿಂಗಳಲ್ಲಿ ಕೊಟ್ಟ ಮಾತಿನಂತೆ ಯೋಜನೆ ಜಾರಿ ಮಾಡಿದ್ದರೆ ಅದು ಸಿದ್ದರಾಮಯ್ಯ,  ನಮ್ಮ ಕಾಂಗ್ರೆಸ್ ಸರ್ಕಾರ ಮಾತ್ರ ಎಂದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News