ನೀರು ಹರಿಸುವ ಹೊಸ ಸೂತ್ರ ರೂಪಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿಗೆ ಆಗ್ರಹ - ಡಿಕೆಶಿ
ಸಂಕಷ್ಟ ಸೂತ್ರ ಆಗ್ರಹ ಮಾಡುವ ಮೊದಲು ನಮಗೆ ಅದರ ಬಗ್ಗೆ ಸ್ಪಷ್ಟತೆ ಇರಬೇಕು. ಅದಕ್ಕೆ ನಾವು ಮೊದಲು ಒಂದು ಸೂತ್ರದ ಬಗ್ಗೆ ಚರ್ಚೆ ಮಾಡುತ್ತೇವೆ. ಆದಕ್ಕಾಗಿ ಇಂದು ಸಂಜೆ ಸಭೆ ಕರೆಯಲಾಗಿದೆ ಎಂದು ಡಿಕೆ ಶಿವಕುಮಾರ್ ತಿಳಿಸಿದ್ದಾರೆ.
ಬೆಂಗಳೂರು : ಮಳೆ ಇಲ್ಲದ ಸಂಕಷ್ಟದ ಕಾಲದಲ್ಲಿ ನೀರು ಹರಿಸುವ ಹೊಸ ಸೂತ್ರ ರೂಪಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿಗೆ ಆಗ್ರಹ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದ್ದಾರೆ.
ಕಾವೇರಿ ನೀರು ನಿಯಂತ್ರಣ ಪ್ರಾಧಿಕಾರ ಸಭೆಯ ನಂತರ ಸಂಕಷ್ಟ ಸೂತ್ರದ ರೂಪುರೇಷೆ ಹೇಗಿರಬೇಕು ಎಂದು ತೀರ್ಮಾನ ಮಾಡಲಾಗುತ್ತದೆ ಎಂದಿದ್ದಾರೆ.
ಸಂಕಷ್ಟ ಸೂತ್ರ ಆಗ್ರಹ ಮಾಡುವ ಮೊದಲು ನಮಗೆ ಅದರ ಬಗ್ಗೆ ಸ್ಪಷ್ಟತೆ ಇರಬೇಕು. ಅದಕ್ಕೆ ನಾವು ಮೊದಲು ಒಂದು ಸೂತ್ರದ ಬಗ್ಗೆ ಚರ್ಚೆ ಮಾಡುತ್ತೇವೆ. ಆದಕ್ಕಾಗಿ ಇಂದು ಸಂಜೆ ಸಭೆ ಕರೆಯಲಾಗಿದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ : ಭಗತಸಿಂಗ್ ಜಯಂತಿ ಕಾರ್ಯಕ್ರಮ ವೇಳೆ ಗೋಡ್ಸೆ ಭಾವಚಿತ್ರ ಮೆರವಣಿಗೆ, ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ
ರಾಜ್ಯದ ಹಿತವನ್ನು ಸುಪ್ರೀಂಕೋರ್ಟಿನಲ್ಲಿ ಕಾಪಾಡಿದಂತಹ ಹಿರಿಯ ನ್ಯಾಯವಾದಿಗಳು, ಅಡ್ವೋಕೇಟ್ ಜನರಲ್ ಹಾಗೂ ಹಿರಿಯ ನೀರಾವರಿ ತಜ್ಞರ ಜೊತೆ ಮುಖ್ಯಮಂತ್ರಿಗಳ ಕಚೇರಿಯಲ್ಲಿ ಚರ್ಚೆ ನಡೆಸುತ್ತೇವೆ. ಇಂದು ನಡೆಯುವ ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆಗೆ ಆನ್‌ಲೈನ್ ಮೂಲಕ ಭಾಗವಹಿಸದೆ ಖುದ್ದಾಗಿ ಭಾಗವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ಹೇಳಿದ್ದಾರೆ.
ನೀರಿನ ಬಿಡುಗಡೆ ಬಗ್ಗೆ ವಿರೋಧ ಪಕ್ಷದವರು, ಬೇರೆಯವರು ಏನೇನೋ ಹೇಳುತ್ತಾರೆ. ನನಗೆ ಅವರಿಗಿಂತ, ಬೇರೆಯವರಿಗಿಂತ ಹೆಚ್ಚು ಜವಾಬ್ದಾರಿ ಇದೆ. ಯಿಗೆ ಬಂದಂತೆ ಮಾತನಾಡುವ ಜಾಯಮಾನ ನನ್ನದಲ್ಲ, ನಾನು ಸಹ ರೈತ ಎಂದು ಡಿಕೆಶಿ ಹೇಳಿದ್ದಾರೆ.
ಇದನ್ನೂ ಓದಿ : Cauvery Water Dispute: 10 ಸಾವಿರ ಕ್ಯೂಸೆಕ್ಸ್ ಒಳಹರಿವು ಇದೆ ಎಂದು ಏಕೆ ಹೇಳ್ಬೇಕಿತ್ತು?- ಬೊಮ್ಮಾಯಿ
ಕರ್ನಾಟಕ ಬಂದ್ ಮಾಡುವುದು ಅವಶ್ಯಕತೆ ಇರಲಿಲ್ಲ. ಪ್ರತಿಭಟನೆ ಮಾಡಲು ಯಾರಿಗೂ ನಾವು ಅಡ್ಡಿ ಮಾಡುವುದಿಲ್ಲ ಎಂದು ಹೇಳಿದ್ದೆವು. ಅದರಂತೆ ಬಂದ್ ವೇಳೆಯಲ್ಲಿ ಸಾವರ್ಜನಿಕರಿಗೆ ತೊಂದರೆಯಾಗದಂತೆ ರಕ್ಷಣೆ ಕೊಟ್ಟಿದ್ದೇವೆ. ಸಾರಿಗೆ, ದಿನನಿತ್ಯ ಬಳಕೆಯ ವಸ್ತುಗಳ ಲಭ್ಯತೆಗೆ ತೊಂದರೆ ಆಗದಂತೆ ನೋಡಿಕೊಂಡಿದ್ದೇವೆ ಎಂದು ತಿಳಿಸಿದರು.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.