ಬೆಂಗಳೂರು : “ಬಿಜೆಪಿಗರು ಭ್ರಷ್ಟಾಚಾರದ ಪಿತಾಮಹರು. ಯಡಿಯೂರಪ್ಪ ಹಾಗೂ ಬೊಮ್ಮಾಯಿ ಅವರ ಕಾಲದಲ್ಲಿ ಹಲವಾರು ನಿಗಮಗಳ ಸುಮಾರು 300 ಕೋಟಿಗೂ ಹೆಚ್ಚು ಅಕ್ರಮ ನಡೆದಿದೆ. ದನ್ನು ನಾವು ಸದನದ ಮೂಲಕ ಜನರಿಗೆ ತಿಳಿಸುತ್ತೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದ್ದಾರೆ. 


COMMERCIAL BREAK
SCROLL TO CONTINUE READING

ಬಿಜೆಪಿ ಸರ್ಕಾರದ ಅವಧಿಯಲ್ಲಿ ಭೋವಿ ನಿಗಮದ 87 ಕೋಟಿ. ಎಪಿಎಂಸಿಯ 47 ಕೋಟಿ, 2019 ರಲ್ಲಿ ಅಂಗವಿಕಲ ಕಲ್ಯಾಣ ಇಲಾಖೆಯ 22 ಕೋಟಿ, ಅಂಬೇಡ್ಕರ್ ನಿಗಮದ ಕೆನರಾ ಬ್ಯಾಂಕ್ ನಲ್ಲಿನ ಹಣ, ಜೂನ್ 2018 ರಲ್ಲಿ 5 ಕೋಟಿ, ದೇವರಾಜ್ ಅರಸು ನಿಗಮದ 47 ಕೋಟಿ, ಮಾಲಿನ್ಯ ನಿಯಂತ್ರಣ ಮಂಡಲಿಯ 10 ಕೋಟಿ ಹಾಗೂ ಕೆಐಡಿಬಿಯ ಹಣ ಸೇಲಂಗೆ ಅಕ್ರಮವಾಗಿ ವರ್ಗಾವಣೆಯಾಗಿದೆ ಎಂದು ತಿಳಿಸಿದರು.


ಇದನ್ನೂ ಓದಿ : ಬಿಜೆಪಿ ಅಟ್ಯಾಕ್ ಮಾಡುವ ರೀತಿಯಲ್ಲಿ ರಿವರ್ಸ್ ಅಟ್ಯಾಕ್ ಮಾಡಿ


ಬಿಜೆಪಿಯ ಅಕ್ರಮಗಳನ್ನು ಖಂಡಿತವಾಗಿಯೂ ತನಿಖೆ ನಡೆಸುತ್ತೇವೆ. ಆದರೆ ಎಲ್ಲವೂ ದಾಖಲೆಯಲ್ಲಿ ಇರಬೇಕು ಎನ್ನುವ ಕಾರಣಕ್ಕೆ ಸದನದಲ್ಲಿ ಎಲ್ಲಾ ದಾಖಲೆಗಳನ್ನು ಬಯಲು ಮಾಡುತ್ತೇವೆ.ಅಕ್ರಮಗಳ ಹಿಂದೆ ಇದ್ದ ಮಂತ್ರಿ, ಅಧ್ಯಕ್ಷರು, ಮುಖ್ಯಮಂತ್ರಿಗಳು ಯಾರು ಎನ್ನುವುದನ್ನು ಜನರಿಗೆ ತಿಳಿಸುತ್ತೇವೆ ಎಂದು  ಡಿಕೆ ಶಿವಕುಮಾರ್ ಹೇಳಿದ್ದಾರೆ. 


ಮುಖ್ಯಮಂತ್ರಿ  ಹುದ್ದೆಗೆ 2500 ಕೋಟಿ, ಮಂತ್ರಿ ಸ್ಥಾನಕ್ಕೆ 100 ಕೋಟಿ ನೀಡಬೇಕು ಎನ್ನುವ ಬಸನಗೌಡ ಪಾಟೀಲ ಯತ್ನಾಳ ಅವರ ಆರೋಪ ಹಾಗೂ ಭೋವಿ ನಿಗಮದ ಅಕ್ರಮದ ಬಗ್ಗೆ ಗೂಳಿಹಟ್ಟಿ ಶೇಖರ್ ಮಾಡಿದ ಆರೋಪಗಳ ಮೇಲೆ ಏಕೆ ಬಿಜೆಪಿ ತನಿಖೆ ನಡೆಸಲಿಲ್ಲ ಎಂದು ಡಿಕೆಶಿ ಪ್ರಶ್ನಿಸಿದ್ದಾರೆ. 


ಇದನ್ನೂ ಓದಿ : ಇಂದಿನಿಂದ ಶಿರಾಡಿಘಾಟ್‌ನಲ್ಲಿ ವಾಹನ ಸಂಚಾರ ಬಂದ್


“ಯಾವುದೇ ಭ್ರಷ್ಟಾಚಾರದ ಮೇಲೆ ತನಿಖೆ ನಡೆಯುತ್ತಿದ್ದರೆ ಆ ವಿಚಾರದಲ್ಲಿ ವಿಧಾನಸಭೆಯಲ್ಲಿ ಚರ್ಚೆ ನಡೆಸಲು ಅವಕಾಶವಿಲ್ಲ.ಆದರೆ ನಾವು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ಬೆಲೆಕೊಟ್ಟು ಸದನದಲ್ಲಿ ಚರ್ಚೆ ಅವಕಾಶ ಮಾಡಿಕೊಟ್ಟಿದ್ದೇವೆ. ಅಕ್ರಮ ಎಸಗಿದ್ದರೆ ಯಾವುದೇ ಅಧಿಕಾರಿ, ಮಂತ್ರಿ, ಶಾಸಕ, ಯಾರೇ ಆಗಿರಲಿ ಅವರನ್ನು ರಕ್ಷಿಸುವ ಉದ್ದೇಶ ನಮಗಿಲ್ಲ” ಎಂದು ಹೇಳಿದರು.


“ವಾಲ್ಮೀಕಿ ನಿಗಮದ 86 ಕೋಟಿ ಹಣ ತೆಲಂಗಾಣಕ್ಕೆ ಅಕ್ರಮವಾಗಿ ವರ್ಗಾವಣೆಯಾದ ತನಿಖೆ ನಡೆಸಲು ಎಸ್ ಐಟಿ ರಚನೆ ಮಾಡಿದ್ದೇವೆ.ತನಿಖಾ ತಂಡವು ಸುಮಾರು 36 ಕೋಟಿಗಳಷ್ಟು ಹಣವನ್ನು ವಶಕ್ಕೆ ಪಡೆದುಕೊಂಡಿದೆ.ಬ್ಯಾಂಕ್ ಅಧಿಕಾರಿ ಒಂದೇ ದಿನದಲ್ಲಿ ಕೋಟ್ಯಂತರ ರೂಪಾಯಿ ಸಾಲ ಮಂಜೂರು ಮಾಡಿದ್ದಾನೆ.ಇದಕ್ಕೆ ಕೇಂದ್ರ ಹಣಕಾಸು ಸಚಿವರನ್ನು ಹೊಣೆಗಾರರನ್ನಾಗಿ ಮಾಡಲು ಆಗುತ್ತದೆಯೇ? ನಾವು ಪ್ರತಿಪಕ್ಷಗಳಿಗೆ ಈ ವಿಚಾರವಾಗಿ ಉತ್ತರ ಕೊಡಬೇಕಾಗಿದೆ ಎಂದು ಖಾರವಾಗಿ ತಿಳಿಸಿದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.