ಬೀದಿಯಲ್ಲಿ ಹಿಟ್ ಅಂಡ್ ರನ್ ಮಾಡುವುದಲ್ಲ, ಮಾಧ್ಯಮಗಳಲ್ಲಿ ಚರ್ಚೆಗೆ ಬರಲಿ: ಹೆಚ್ ಡಿಕೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಸವಾಲು

ಕಿಂಗ್ ಆಫ್ ಕರಪ್ಶನ್ ಎಂದು ಜನ ನನ್ನನ್ನಾಗಲಿ,ನನ್ನ ಕುಟುಂಬದವರನ್ನು ಕರೆದಿಲ್ಲ. ಆ ರೀತಿ ಯಾರನ್ನು ಕರೆದಿದ್ದಾರೆ ಎಂದು ಚರ್ಚೆಗೆ ಬರಲಿ ತಿಳಿಸುತ್ತೇನೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

Written by - Ranjitha R K | Last Updated : Jul 15, 2024, 02:34 PM IST
  • ಕುಮಾರಸ್ವಾಮಿ ಬಹಿರಂಗ ಚರ್ಚೆಗೆ ಬರಲಿ -.ಡಿ.ಕೆ. ಶಿವಕುಮಾರ್
  • ಕಿಂಗ್ ಆಫ್ ಕರಪ್ಶನ್ ಎಂದು ಜನ ನನ್ನನ್ನಾಗಲಿ,ನನ್ನ ಕುಟುಂಬದವರನ್ನು ಕರೆದಿಲ್ಲ
  • ಬಿಜೆಪಿ ಹಗರಣಗಳ ಪಿತಾಮಹ - ಡಿಕೆಶಿ
ಬೀದಿಯಲ್ಲಿ ಹಿಟ್ ಅಂಡ್ ರನ್ ಮಾಡುವುದಲ್ಲ, ಮಾಧ್ಯಮಗಳಲ್ಲಿ ಚರ್ಚೆಗೆ ಬರಲಿ: ಹೆಚ್ ಡಿಕೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಸವಾಲು title=

ಬೆಂಗಳೂರು : “ಕುಮಾರಸ್ವಾಮಿ ಜೀವನ ಬರೀ ಹಿಟ್ ಅಂಡ್ ರನ್ ಮಾಡುವುದೇ ಆಗಿದೆ.ಅವರು ಬೀದಿಯಲ್ಲಿ ಹಿಟ್ ಅಂಡ್ ರನ್ ಮಾಡುವ ಬದಲು ಮಾಧ್ಯಮಗಳಲ್ಲಿ ಚರ್ಚೆಗೆ ಬರಲಿ,ಇಲ್ಲವೇ ಅವರ ಶಾಸಕರಿಂದ ಸದನದಲ್ಲಿ ಚರ್ಚೆ ಮಾಡಿಸಲಿ " ಎಂದು ಡಿಸಿಎಂ ಡಿ.ಕೆ. ಶಿವಕುಮಾರ್  ಕೇಂದ್ರ ಸಚಿವ ಕುಮಾರಸ್ವಾಮಿಗೆ ಸವಾಲೆಸೆದಿದ್ದಾರೆ. 

ಕಸ ವಿಲೇವಾರಿ ಟೆಂಡರ್ ನಲ್ಲಿ 15 ಸಾವಿರ ಕೋಟಿ ಲಂಚ ಪಡೆಯಲಾಗಿದೆ ಎಂಬ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಡಿಕೆ ಶಿವಕುಮಾರ್ ಉತ್ತರಿಸಿದ್ದಾರೆ.ಕುಮಾರಸ್ವಾಮಿ ಹತಾಶೆಯಲ್ಲಿದ್ದಾರೆ. ಅವರು ಬಹಿರಂಗ ಚರ್ಚೆಗೆ ಬರಲಿ.ಡಿ.ಕೆ.ಶಿವಕುಮಾರ್ ಅವರಂತೆ ಹಿಟ್ ಅಂಡ್ ರನ್ ಮಾಡುವುದಿಲ್ಲ.ಕಸದ ಲಾರಿ ಹೊಡೆಯುತ್ತಿದ್ದವರು ಅವರು. ಅವರ ಸಹೋದರ ಹಾಗೂ ಅವರ ಪಕ್ಷದ ಸದಸ್ಯರಿಗೆ ದಾಖಲೆ ಕೊಟ್ಟು ಸದನದಲ್ಲಿ ಚರ್ಚೆ ಮಾಡಲಿ.ಕಿಂಗ್ ಆಫ್ ಕರಪ್ಶನ್ ಎಂದು ಜನ ನನ್ನನ್ನಾಗಲಿ,ನನ್ನ ಕುಟುಂಬದವರನ್ನು ಕರೆದಿಲ್ಲ.ಆ ರೀತಿ ಯಾರನ್ನು ಕರೆದಿದ್ದಾರೆ ಎಂದು ಚರ್ಚೆಗೆ ಬರಲಿ ತಿಳಿಸುತ್ತೇನೆ ಎಂದು ಹೇಳಿದ್ದಾರೆ.  ಅವರು ಚರ್ಚೆಗೆ ಬರಲಿ,ನಾನು ಕೂಡಾ ಅವರ ಚರಿತ್ರೆ ತೆಗೆಯುತ್ತೇನೆ. ಎಲ್ಲವೂ ದಾಖಲೆಯಲ್ಲಿ ಉಳಿಯಲಿ ಎಂದು ವಾಗ್ದಾಳಿ ನಡೆಸಿದ್ದಾರೆ. 

ಇದನ್ನೂ ಓದಿ : ಬೀದಿ ಬದಿ ವ್ಯಾಪಾರಿಗಳಿಗೆ ಪೋಲಿಸ ಕಿರುಕುಳ ಆರೋಪ

ಬಿಜೆಪಿ ಹಗರಣಗಳ ಪಿತಾಮಹ:
ಇಂದಿನಿಂದ ಆರಂಭವಾಗಲಿರುವ ಮುಂಗಾರು ಅಧಿವೇಶನದಲ್ಲಿ ಹಗರಣಗಳ ಬಗ್ಗೆ ಬಿಜೆಪಿ ಸದನದ ಹೊರಗೆ ಹೋರಾಟ ಮಾಡುತ್ತಿರುವ ಬಗ್ಗೆ ಮಾತನಾಡಿದ ಡಿಕೆಶಿ, ಅವರು ಸದನದ ಹೊರಗೆ ಯಾಕೆ ಹೋರಾಟ ಮಾಡುತ್ತಿದ್ದಾರೆ? ಸದನದ ಒಳಗೆ ಹೋರಾಟ ಮಾಡಲಿ.ಅವರು ಏನು ಹೇಳಬೇಕೋ ಸದನದ ಒಳಗೆ ಹೇಳಲಿ.ನಾವು ಏನು ಉತ್ತರ ಕೊಡಬೇಕೋ ಕೊಡುತ್ತೇವೆ.ನಮಗೂ ಅವರ ಬಗ್ಗೆ ಗೊತ್ತಿದೆ.ಎಲ್ಲವನ್ನೂ ಒಂದೊಂದಾಗಿ ಬಿಚ್ಚಿಡುತ್ತೇವೆ"ಎಂದು ಶಿವಕುಮಾರ್ ಅವರು ತಿಳಿಸಿದ್ದಾರೆ. 

"ಮುಡಾ ಹಗರಣ ಸೇರಿದಂತೆ ಹಲವಾರು ಹಗರಣಗಳು ನಡೆದಿರುವುದು ಬಿಜೆಪಿ ಕಾಲದಲ್ಲಿ. ಬಿಜೆಪಿ ಭ್ರಷ್ಟಾಚಾರದ ತಂದೆ.ಅವರ ಆಡಳಿತ ಅವಧಿಯಲ್ಲಿ ಭ್ರಷ್ಟಾಚಾರದ ಸರಮಾಲೆಯೇ ನಡೆದಿದೆ.ಭ್ರಷ್ಟಾಚಾರ ರಹಿತ ಆಡಳಿತ ಮತ್ತು ಆಡಳಿತ ಶುದ್ಧೀಕರಣ ಮಾಡುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ "ಎಂದು ತಿಳಿಸಿದರು.

ಇದನ್ನೂ ಓದಿ : ಜೈಲಿನಲ್ಲಿ ಪವಿತ್ರಾಗೌಡ ಆರೋಗ್ಯದಲ್ಲಿ ಏರುಪೇರು

"ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರ ರಹಿತ ಆಡಳಿತ ನೀಡುತ್ತಿರುವುದು ನೋಡಿ ಮೈ ಪರಿಚಿಕೊಳ್ಳುತ್ತಿದ್ದಾರೆ.ಅವರುಗಳು ಹಣ್ಣನ್ನು ತಿಂದು ಸಿಪ್ಪೆಯನ್ನು ನಮ್ಮ ಮೇಲೆ ಎಸೆಯುವ ಪ್ರಯತ್ನ ಮಾಡುತ್ತಿದ್ದಾರೆ. ಅವರು ಏನು ಬೇಕಾದರು ಹೇಳಿಕೊಳ್ಳಲಿ.ಪಾರ್ಲಿಮೆಂಟಿನಲ್ಲಿ ಏನು ಬೇಕಾದರೂ ಮಾಡಿಕೊಳ್ಳಲಿ.ಕರ್ನಾಟಕದಲ್ಲಿ ಅವರ ಆಟ ನಡೆಯುವುದಿಲ್ಲ" ಎಂದು ತೀವ್ರ ವಾಗ್ದಾಳಿ ನಡೆಸಿದರು.

ಮುಡಾ ಹಗರಣದ ಬಗ್ಗೆ ಸಿಬಿಐ ತನಿಖೆ ನಡೆಸುವ ಬದಲು ನ್ಯಾಯಾಂಗ ತನಿಖೆ ನಡೆಸುತ್ತಿರುವುದು ಕಣ್ಣೊರೆಸುವ ತಂತ್ರ ಎನ್ನುವ ಆರೋಪದ ಬಗ್ಗೆ ಕೇಳಿದಾಗ "ಪ್ರತಿಪಕ್ಷಗಳು ಹೇಳಿದಂತೆ ಕೇಳಲಾಗುತ್ತದೆಯೇ? ಜನರು ನಮಗೆ ಅಧಿಕಾರ ಕೊಟ್ಟಿದ್ದಾರೆ.ನಾವು ಈ ರಾಜ್ಯಕ್ಕೆ ಏನು ಒಳ್ಳೆಯದನ್ನು ಮಾಡಬೇಕೊ ಅದನ್ನು ಮಾಡುತ್ತೇವೆ" ಎಂದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...

Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

 

Trending News