ನವದೆಹಲಿ : ನಮ್ಮ ಕೂಗು ಕೇಂದ್ರ ಸರ್ಕಾರದ ಕಿವಿಗೆ ಬೀಳಲಿ ಎಂದು ದೆಹಲಿಗೆ ಬಂದು ಪ್ರತಿಭಟನೆ ಮಾಡುತ್ತಿದ್ದೇವೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ. ಕೇಂದ್ರದ ಬಿಜೆಪಿ ಸರ್ಕಾರಕ್ಕೆ ಕಣ್ಣು, ಕಿವಿ, ಹೃದಯ ಇಲ್ಲವಾಗಿದೆ. ನಮ್ಮ ರಾಜ್ಯಕ್ಕೆ ಆಗಿರುವ ಅನ್ಯಾಯದ ಬಗ್ಗೆ ಹೇಳಿದ್ದರೂ ಇವರು ಕಿವಿಗೆ ಹಾಕಿಕೊಂಡಿಲ್ಲ. ಹೀಗಾಗಿ ಹೋರಾಟ ಅನಿವಾರ್ಯ ಎಂದು ಉಪ ಮುಖ್ಯಮಂತ್ರಿ ಡಿಕೆಶಿ ಹೇಳಿದ್ದಾರೆ. 


COMMERCIAL BREAK
SCROLL TO CONTINUE READING

ನಮ್ಮ ಪಕ್ಷದಲ್ಲಿ ನಿರ್ಮಾಪಕ, ನಿರ್ದೇಶಕರು ಇಲ್ಲ : 
“ಬಿಜೆಪಿಯವರು ನಮ್ಮ ಹೋರಾಟದ ಬಗ್ಗೆ ಏನಾದರೂ ಹೇಳಲಿ. ನಮ್ಮಲ್ಲಿ ಯಾರೂ ಸಿನಿಮಾ ನಿರ್ದೇಶಕರು, ನಿರ್ಮಾಪಕರು ಇಲ್ಲ. ಅವರ ಪಕ್ಷದಲ್ಲೇ ನಿರ್ದೇಶಕರು, ನಿರ್ಮಾಪಕರು ಇದ್ದಾರೆ. ಅವರು ಭಾವನೆ ಮೇಲೆ ದೇಶ ತೆಗೆದುಕೊಂಡು ಹೋದರೆ, ನಾವು ಜನರ ಬದುಕಿನ ಬಗ್ಗೆ ಗಮನ ಹರಿಸುತ್ತಿದ್ದೇವೆ. ನಮ್ಮ ಗ್ಯಾರಂಟಿ ಬಗ್ಗೆ ಮಾತನಾಡುತ್ತಿದ್ದವರು ಬೇರೆ ರಾಜ್ಯಗಳಲ್ಲಿ ಅವರೇ ಗ್ಯಾರಂಟಿ ಘೋಷಣೆ ಮಾಡಿದ್ದು ಯಾಕೆ?” ಎಂದು  ಡಿಕೆಶಿ ಪ್ರಶ್ನಿಸಿದ್ದಾರೆ. 


ಇದನ್ನೂ ಓದಿ ಡೆಲ್ಲಿ ಚಲೋ: ಇದು ಕರ್ನಾಟಕದ ಕನ್ನಡಿಗರ ಹಿತ ಕಾಯುವ ಚಳವಳಿ- ಮುಖ್ಯಮಂತ್ರಿ ಸಿದ್ದರಾಮಯ್ಯ


ನಮ್ಮ ಪಾಲಿನ ಹಣ ನೀಡಲಿ :
ಗ್ಯಾರಂಟಿ ಯೋಜನೆಯಿಂದ ಹಣ ಖಾಲಿ ಮಾಡಿಕೊಂಡು ದೆಹಲಿಗೆ ಬಂದಿದ್ದಾರೆ ಎಂಬ ಬಿಜೆಪಿ ಆರೋಪಕ್ಕೆ ಉತ್ತರಿಸಿದ ಶಿವಕುಮಾರ್,“ನಮ್ಮ ಹಣ ಖಾಲಿಯಾಗಿಲ್ಲ. ಸರ್ಕಾರ ನಡೆಸುವ ಸಾಮರ್ಥ್ಯ ನಮಗಿದೆ. ಕೇಂದ್ರ ಬಿಜೆಪಿ ಸರ್ಕಾರ ನಮ್ಮ ಪಾಲಿನ ಹಣ ನೀಡಲಿ ಸಾಕು” ಎಂದು  ಹೇಳಿದ್ದಾರೆ.


ಬೇರೆ ರಾಜ್ಯಗಳ ಪ್ರತಿಭಟನೆ ಬಗ್ಗೆ ಪ್ರತಿಕ್ರಿಯೆ ನೀಡುವುದಿಲ್ಲ:
ನಾನು ಬೇರೆ ರಾಜ್ಯಗಳ ವಿಚಾರವಾಗಿ ಮಾತನಾಡುವುದಿಲ್ಲ. ನಾವು ನಮ್ಮ ಹಕ್ಕನ್ನು ಕೇಳುತ್ತಿದ್ದೇವೆ. ನಮ್ಮ ಪಾಲಿನ ಹಣ ನಾವು ಕೇಳುತ್ತಿದ್ದೇವೆ. ಬೇರೆ ರಾಜ್ಯಗಳು ಲಾಭ ಪಡೆಯಲಿ. ನಮಗೆ ಅದರ ಬಗ್ಗೆ ಆಕ್ಷೇಪವಿಲ್ಲ. ಕೇಂದ್ರ ಸರ್ಕಾರ ಗುಜರಾತಿಗೆ ಗಿಫ್ಟ್ ಸಿಟಿ ಯೋಜನೆ ನೀಡಿದೆ. ನಮ್ಮ ರಾಜ್ಯಕ್ಕೂ ಒಂದು ಗಿಫ್ಟ್ ಸಿಟಿ ನೀಡಲಿ. ಎಲ್ಲಾ ರಾಜ್ಯಗಳಿಗೂ ಇಂತಹ ಯೋಜನೆ ನೀಡಲಿ. ಭಾರತ ಒಕ್ಕೂಟ ರಾಷ್ಟ್ರ. ನಮಗೂ ಯೋಜನೆ ನೀಡಿ ಎಂದು ನಾವು ಆಗ್ರಹಿಸುತ್ತಿದ್ದೇವೆ. ನಮಗೆ ಅವಕಾಶ ನೀಡಿದರೆ ನಾವು ಅವರಿಗಿಂತ ಹೆಚ್ಚು ಉತ್ತಮವಾಗಿ ಕೆಲಸ ಮಾಡಿ ತೋರಿಸುತ್ತೇವೆ. ನಮ್ಮ ರಾಜ್ಯದ ತೆರಿಗೆ, ಜನಸಂಖ್ಯೆಗೆ ಅನುಗುಣವಾಗಿ ನಮ್ಮ ಪಾಲಿನ ಅನುದಾನ ನೀಡಲಿ” ಎಂದು  ಆಗ್ರಹಿಸಿದ್ದಾರೆ. 


ಇದನ್ನೂ ಓದಿ : ಇಡೀ ಮೀನು ನುಂಗಿದ 11 ತಿಂಗಳ ಕಂದಮ್ಮ : ಗಂಟಲಲ್ಲಿ ಸಿಲುಕಿದ್ದ ಮೀನು ಹೊರ ತೆಗೆದು ಮಗುವಿನ ಪ್ರಾಣ ಕಾಪಾಡಿದ ವೈದ್ಯರು


ಕೇರಳ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವ ಬಗ್ಗೆ ಕೇರಳ ಸರ್ಕಾರ ನಮ್ಮ ಮುಖ್ಯಮಂತ್ರಿಗಳಿಗೆ ಈ ವಿಚಾರವಾಗಿ ಪತ್ರ ಬರೆದಿದ್ದಾರೆ. ಆದರೆ ನಮ್ಮ ರಾಜ್ಯದಲ್ಲಿ ವಿಧಾನಮಂಡಲ ಅಧಿವೇಶನ ನಡೆಯುತ್ತಿದೆ. ಅವರು ನಮ್ಮ ನೆರೆ ರಾಜ್ಯ. ಅವರನ್ನು ನಾವು ಗೌರವಿಸುತ್ತೇವೆ. ಅವರು ದೇಶದ ಆರ್ಥಿಕತೆಗೆ ತಮ್ಮದೇ ಆದ ರೀತಿಯಲ್ಲಿ ಕೊಡುಗೆ ನೀಡಿದ್ದಾರೆ. ದೇಶದಲ್ಲಿ ಎಲ್ಲರೂ ಒಂದೇ, ಯಾರಿಗೆಲ್ಲಾ ಅನ್ಯಾಯವಾಗಿದೆ ಅವರು ಧ್ವನಿ ಎತ್ತಲಿ ಎಂದು ಹೇಳಿದ್ದಾರೆ. 


ಪ್ರಧಾನಿ ಬಳಿ ಸಮಯ ಕೇಳಿದ್ದೇವೆ:
ನಮ್ಮ ಇಲಾಖೆ ವಿಚಾರವಾಗಿ ಮಾತನಾಡಲು ನಾವು ಪ್ರಧಾನಮಂತ್ರಿಗಳ ಬಳಿ ಸಮಯ ಕೇಳಿದ್ದೇವೆ. ಭೇಟಿಗೆ ಸಮಯ ನೀಡಬಹುದು ಎನ್ನುವ ವಿಶ್ವಾಸ ಇದೆ ಎಂದು ಹೇಳಿದ್ದಾರೆ. 


 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.