ಬೆಂಗಳೂರು : ದ್ವೇಷದ ರಾಜಕಾರಣಕ್ಕೆ ದಾರಿ ಆಗಬಾರದು ಎನ್ನುವ ಕಾರಣಕ್ಕೆ ಸಿಬಿಐಗೆ ನೀಡಿದ್ದ ಮುಕ್ತ ಅನುಮತಿ ಅಧಿಕಾರವನ್ನು ಹಿಂದಕ್ಕೆ ತೆಗದುಕೊಳ್ಳಲಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. 


COMMERCIAL BREAK
SCROLL TO CONTINUE READING

ಕಾಂಗ್ರೆಸ್ ಬ್ಯೂರೋ ಏಜೆನ್ಸಿ ಎಂದವರು ಯಾರು? :
“ಸಿಬಿಐ ಬಗ್ಗೆ ಜನತಾದಳದ ದೇವೇಗೌಡರು, ಕುಮಾರಸ್ವಾಮಿ ಏನು ಮಾತನಾಡಿದ್ದರು ಎಂಬುದು ಎಲ್ಲರಿಗೂ ತಿಳಿದಿದೆ.ಬಿಜೆಪಿಯವರು ಸಿಬಿಐ ಅನ್ನು ಕಾಂಗ್ರೆಸ್ ಬ್ಯೂರೋ ಆಫ್ ಏಜೆನ್ಸಿ ಎಂದು ಕರೆದಿದ್ದರು.ಸಿಬಿಐಗೆ ಯಾವ, ಯಾವ ಪ್ರಕರಣಗಳನ್ನು ನೀಡಲಾಗಿತ್ತು. ಅವುಗಳು ಏನಾಗಿವೆ, ಐಎಂಎ ಪ್ರಕರಣ ಏನಾಗಿದೆ ಎಂಬುದರ ಬಗ್ಗೆ ನಾನು ಚರ್ಚಿಸುವುದಿಲ್ಲ” ಎಂದು ಹೇಳಿದ್ದಾರೆ. 


ಇದನ್ನೂ ಓದಿ : ಗಾಂಧೀ ವಿಚಾರಧಾರೆಯ ಪ್ರತೀಕ ಈ ಹೊಸರಿತ್ತಿಯ ಗುರುಕುಲ ಶಾಲೆ..!


ನನ್ನ ಕಚೇರಿಗೆ ಡಿನೋಟಿಫಿಕೇಷನ್ ಕಡತ ಬಂದಿತ್ತು :
ರಾಜ್ಯಪಾಲರ ಪತ್ರಕ್ಕೆ ಸಂಪುಟದಲ್ಲಿ ಒಪ್ಪಿಗೆ ಪಡೆದು ಉತ್ತರ ನೀಡಬೇಕು ಎನ್ನುವ ನಿರ್ಣಯದ ಬಗ್ಗೆ ಮಾತನಾಡಿದ ಡಿಕೆಶಿ  ಅನೇಕ ವಿಚಾರಗಳನ್ನು ಮುಖ್ಯಮಂತ್ರಿಗಳು ಹಾಗೂ ಕ್ಯಾಬಿನೆಟ್ ಗಮನಕ್ಕೆ ತರದೇ ತೀರ್ಮಾನ ಮಾಡಲು ಆಗುತ್ತದೆಯೇ? ಆದ ಕಾರಣ ರಾಜ್ಯಪಾಲರ ಪತ್ರಕ್ಕೆ ಸಂಪುಟದಲ್ಲಿ ಒಪ್ಪಿಗೆ ಪಡೆದು ಉತ್ತರ ನೀಡಬೇಕು ಎನ್ನುವ ತೀರ್ಮಾನ ತಗೆದುಕೊಂಡಿದ್ದೇವೆ.


ನನಗೂ ನೀತಿ, ನಿಯಮಗಳ ಬಗ್ಗೆ ಸ್ವಲ್ಪ ತಿಳುವಳಿಕೆಯಿದೆ.ನಾನು ವಿದ್ಯಾವಂತ, ಬುದ್ದಿವಂತ ಅಲ್ಲದಿದ್ದರೂ ಪ್ರಜ್ಞಾವಂತಿಕೆ ಹೊಂದಿದ್ದೇನೆ. ರತಿಯೊಂದಕ್ಕೂ ನಿಯಮವಿರುತ್ತದೆ. ರಾಜ್ಯಪಾಲರ ಕಚೇರಿಗೆ ಮುಖ್ಯ ಕಾರ್ಯದರ್ಶಿಗಳ ಮೂಲಕ ಉತ್ತರ ಹೋಗಬೇಕು. 


ನನ್ನ ಕಚೇರಿಗೆ ಕೆಲವು ದಿನಗಳ ಹಿಂದೆ ಡಿನೋಟಿಫಿಕೇಷನ್ ಅಥವಾ ರೀಡೂ ಸಂಬಂಧಪಟ್ಟ ಕಡತ ಬಂದಿತ್ತು.ನನ್ನ ಕಾರ್ಯದರ್ಶಿ ನನಗೆ ಕಳುಹಿಸಿದ್ದರು. ಇದಕ್ಕೆ ನಾನು, "ಬೇರೆಯವರಿಗೆ ಉತ್ತರ ಕೊಡಲು ಆಗುವುದಿಲ್ಲ.ಕ್ಯಾಬಿನೆಟ್ ನಲ್ಲಿ ಈ ಹಿಂದೆ ತೀರ್ಮಾನವಾದಂತೆ,ಈ ಕುರಿತು ಸಂಪುಟ ಉಪ ಸಮಿತಿ ರಚನೆಯಾಗಿದೆ, ಅಲ್ಲಿಗೆ ಕಳುಹಿಸಿ  ಎಂದು ಹೇಳಿದ್ದಾರೆ. 


ಇದನ್ನೂ ಓದಿ :ನನ್ನ ಮೇಲೆ ರಾಜಕೀಯ ಪ್ರೇರಿತ ಕೇಸ್ ಹಾಕಿರುವುದು ಇದೇ ಮೊದಲು: ಮುಖ್ಯಮಂತ್ರಿ ಸಿದ್ದರಾಮಯ್ಯ


ರಾಜಭವನದ ಆಂತರಿಕ ವಿಚಾರ ನನಗೆ ಗೊತ್ತಿಲ್ಲ :
ರಾಜಭವನದಿಂದ ಮಾಹಿತಿ ಸೋರಿಕೆ ಬಗ್ಗೆ ಬಿಜೆಪಿ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್, ಅದು ರಾಜಭವನದ ಆಂತರಿಕ ವಿಚಾರ. ಇದರ ಬಗ್ಗೆ ನನಗೆ ಮಾಹಿತಿಯಿಲ್ಲ. ಲೋಕಾಯುಕ್ತ ಕಚೇರಿಯಲ್ಲಿ ಏನು ನಡೆಯುತ್ತಿದೆ ಎನ್ನುವ ಬಗ್ಗೆಯೂ ಮಾಹಿತಿಯಿಲ್ಲ” ಎಂದು ಹೇಳಿದ್ದಾರೆ. 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.