ಬೆಂಗಳೂರು: ರಾಜ್ಯ ವಿಧಾನ ಪರಿಷತ್ತಿನ ಉಪ ಸಭಾಪತಿ ಎಸ್.ಎಲ್. ಧರ್ಮೇಗೌಡ (SL Dharmegowda) ಅವರು ನಿನ್ನೆ ಮಧ್ಯರಾತ್ರಿ ರೈಲಿಗೆ ತಲೆ‌‌ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.


COMMERCIAL BREAK
SCROLL TO CONTINUE READING

ಧರ್ಮೇಗೌಡ ಅವರು ಸಕ್ಕರಾಯಪಟ್ಟಣದಿಂದ‌ 2 ಕಿ.ಮೀ ಇರುವ ಸ್ಥಳದಲ್ಲಿ ಡ್ರೈವರ್ ಗೆ 'ಕಾರಿನಲ್ಲೇ ಇರು' ಎಂದು ಹೇಳಿ ಹೋಗಿದ್ದರು.‌ ರೈಲು ಹೋದ ಅರ್ಧ ಗಂಟೆಯಾದರೂ ಅವರು ವಾಪಸ್ ಬರದಿದ್ದಾಗ ಡ್ರೈವರ್ ಹೋಗಿ ನೋಡಿದ್ದಾರೆ. ಆಗ ಧರ್ಮೇಗೌಡ ಶತಾಬ್ದಿ ಎಕ್ಸಪ್ರೆಸ್ ಟ್ರೈನಿಗೆ ತಲೆಕೊಟ್ಟು ಆತ್ಮಹತ್ಯೆ (Suicide) ಮಾಡಿಕೊಂಡಿರುವುದು ಪತ್ತೆಯಾಗಿದೆ ಎಂದು ಪ್ರಾಥಮಿಕ ವರದಿಗಳು ಹೇಳುತ್ತಿವೆ. ಧರ್ಮೇಗೌಡರ ರುಂಡ ಮತ್ತು ಮುಂಡ ಬೇರ್ಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿವೆ. ನಿನ್ನೆ ಅವರು ತಮ್ಮ ಮಾಮೂಲಿ ಡ್ರೈವರ್ ಬದಲಿಗೆ ಬೇರೆ ಡ್ರೈವರ್ ಕರೆದುಕೊಂಡು ಹೋಗಿದ್ದರೆಂದು ತಿಳಿದುಬಂದಿದೆ.


Chikkamagaluru) ಟಿಎಪಿಸಿಎಂಎಸ್ ಅಧ್ಯಕ್ಷ, ಚಿಕ್ಕಮಗಳೂರು ಭೂ ಅಭಿವೃದ್ಧಿ ಬ್ಯಾಂಕ್ ಅಧ್ಯಕ್ಷ, ಉದ್ದೇಬೋರನಹಳ್ಳಿ ವ್ಯವಸಾಯ ಸೇವಾ ಸಹಕಾರ ಬ್ಯಾಂಕ್ ಅಧ್ಯಕ್ಷ, ಬಿಳೇಕಲ್ಲಹಳ್ಳಿ ಎಂಪಿಸಿಎಸ್ ಅಧ್ಯಕ್ಷ, ಹಾಸನ ಹಾಲು ಒಕ್ಕೂಟ ವ್ಯಾಪ್ತಿಯ ಚಿಕ್ಕಮಗಳೂರು ಜಿಲ್ಲಾ ಅಧ್ಯಕ್ಷ, ಚಿಕ್ಕಮಗಳೂರು ಡಿಸಿಸಿ ಬ್ಯಾಂಕ್ ಅಧ್ಯಕ್ಷ, ಕರ್ನಾಟಕ ರಾಜ್ಯ ಮಾರಾಟ ಮಹಾಮಂಡಳ ಅಧ್ಯಕ್ಷ, ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ಉಪಾಧ್ಯಕ್ಷ, ರಾಜ್ಯ ವಿಮಾ ಸಹಕಾರ ಸಂಘದ ನಿರ್ದೇಶಕ, ದೆಹಲಿಯ ಕ್ರಿಬ್ಕೋ ಸಂಸ್ಥೆಯ ನಿರ್ದೇಶಕ, ನ್ಯಾಫೆಡ್ ಸಂಸ್ಥೆ ನಿರ್ದೇಶಕ, ಇಂಡಿಯನ್ ಪೋಟಾಸ್ ಲಿಮಿಟೆಡ್ ನಿರ್ದೇಶಕ, ತಾಲೂಕು ಪಂಚಾಯತ್ ಸದಸ್ಯ, 2 ಬಾರಿ ಜಿಲ್ಲಾಪಂಚಾಯತ್ ಸದಸ್ಯ, ಒಮ್ಮೆ ಬೀರೂರು ವಿಧಾನಸಭಾ ಕ್ಷೇತ್ರದ ಸದಸ್ಯ ಹಾಗೂ ಹಾಲಿ ವಿಧಾನ ಪರಿಷತ್ ಸದಸ್ಯರಾಗಿದ್ದರು. ಮತ್ತು ವಿಧಾನ ಪರಿಷತ್ತಿನ ಉಪ ಸಭಾಪತಿಯಾಗಿದ್ದರು.


ಇದನ್ನೂ ಓದಿ: NEET ಪರೀಕ್ಷೆಗೂ ಮುನ್ನ ತಮಿಳುನಾಡಿನ 3 ವೈದ್ಯಕೀಯ ಕಾಲೇಜು ಆಕಾಂಕ್ಷಿಗಳು ಆತ್ಮಹತ್ಯೆ


ಧರ್ಮೇಗೌಡರ ಸಾವಿಗೆ ಮಾಜಿ ಪ್ರಧಾನಿ ದೇವೇಗೌಡ (HD Devegowda) ಸಂತಾಪ ವ್ಯಕ್ತಪಡಿಸಿದ್ದಾರೆ. 'ಧರ್ಮೇಗೌಡರ ಆತ್ಮಹತ್ಯೆ ಸುದ್ದಿ ಆಘಾತ ತಂದಿದೆ. ಸಜ್ಜನ, ಸನ್ನಡತೆಯ ಉಪಸಭಾಪತಿಗಳನ್ನು ಕಳೆದುಕೊಂಡದ್ದು ನಮ್ಮ ರಾಜ್ಯದ ನಷ್ಟ. ಕುಟುಂಬ ಹಾಗೂ ಬಂಧುಮಿತ್ರರಿಗೆ ಈ ನೋವು ಭರಿಸುವ ಶಕ್ತಿ ಭಗವಂತ ನೀಡಲಿ' ಎಂದು ಟ್ವೀಟ್ ಮಾಡಿದ್ದಾರೆ.


BS Yediyurappa) ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.


ಜಾತಕವನ್ನು ಓದಿದ ಬಳಿಕ ಆತ್ಮಹತ್ಯೆ ಮಾಡಿಕೊಳ್ಳಲು ನದಿಗೆ ಹಾರಿದ ವ್ಯಕ್ತಿ, ಮುಂದೆ...


ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ (HD Kumaraswamy) 'ಸಹೋದರರಂತಿದ್ದ ಧರ್ಮೆಗೌಡರ ಆತ್ಮಹತ್ಯೆ ಸುದ್ದಿ ತೀವ್ರ ಆಘಾತ ತಂದಿದೆ ಅವರ ಕುಟುಂಬಕ್ಕೆ ನೋವು ಭರಿಸುವ ಭಗವಂತ ಕರುಣಿಸಲಿ' ಎಂದು ಟ್ವೀಟ್ ಮಾಡಿದ್ದಾರೆ.



ಘಟನಾ ಸ್ಥಳಕ್ಕೆ ಭೇಟಿ ನೀಡಿದ ಮಾಜಿ‌ ಸಚಿವ ಸಿ.ಟಿ. ರವಿ, ಪೊಲೀಸ್ ವರಿಷ್ಠಾಧಿಕಾರಿಗೆ ಸೂಚನೆ ನೀಡಿ ಆದಷ್ಟು ಶೀಘ್ರವಾಗಿ ಮೃತದೇಹ ತೆರವು ಮಾಡಿ‌ ಆಸ್ಪತ್ರೆಗೆ ರವಾನಿಸುವಂತೆ ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಆಪ್ ಡೌನ್ ಲೋಡ್ ಮಾಡಿ
Android Link - https://bit.ly/3hDyh4G
iOS Link - https://apple.co/3loQYe 


ನಮ್ಮ ಸೋಶಿಯಲ್ ಮೀಡಿಯಾ ಪುಟಕ್ಕೆ ಸಬ್ ಸ್ಕ್ರೈಬ್ ಮಾಡಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.