ಬೆಂಗಳೂರು: ಬಹುದಿನಗಳಿಂದ ಕ್ಯಾನ್ಸರ್ ರೋಗಕ್ಕೆ ಚಿಕಿತ್ಸೆ ಪಡೆಯುತ್ತಿದ್ದ ಮಾನ್ಯ ಉಪಸಭಾಧ್ಯಕ್ಷರಾದ ಶ್ರೀ ಆನಂದ ಚಂದ್ರಶೇಖರ ಮಾಮನಿ ಅವರು ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.
ಆನಂದ ಚಂದ್ರಶೇಖರ ಮಾಮನಿ ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಕಂಬನಿ ಮಿಡಿದಿದ್ದಾರೆ “ನಮ್ಮ ಪಕ್ಷದ ಶಾಸಕರು, ರಾಜ್ಯ ವಿಧಾನಸಭೆಯ ಮಾನ್ಯ ಉಪ ಸಭಾಧ್ಯಕ್ಷರಾದ ಆತ್ಮೀಯ ಶ್ರೀ ಆನಂದ ಚಂದ್ರಶೇಖರ ಮಾಮನಿ ಅವರು ನಿಧನರಾದ ವಿಷಯ ತಿಳಿದು ಅತೀವ ದುಃಖವಾಗಿದೆ.ದೇವರು ಅವರ ಆತ್ಮಕ್ಕೆ ಚಿರಶಾಂತಿ ನೀಡಿ, ಈ ನೋವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬ ವರ್ಗಕ್ಕೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿಃ” ಎಂದು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ನಮ್ಮ ಪಕ್ಷದ ಶಾಸಕರು, ರಾಜ್ಯ ವಿಧಾನಸಭೆಯ ಮಾನ್ಯ ಉಪ ಸಭಾಧ್ಯಕ್ಷರಾದ ಆತ್ಮೀಯ ಶ್ರೀ ಆನಂದ ಚಂದ್ರಶೇಖರ ಮಾಮನಿ ಅವರು ನಿಧನರಾದ ವಿಷಯ ತಿಳಿದು ಅತೀವ ದುಃಖವಾಗಿದೆ.
ದೇವರು ಅವರ ಆತ್ಮಕ್ಕೆ ಚಿರಶಾಂತಿ ನೀಡಿ, ಈ ನೋವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬ ವರ್ಗಕ್ಕೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿಃ pic.twitter.com/PQq96zMKPI
— Basavaraj S Bommai (@BSBommai) October 22, 2022
ಆನಂದ ಚಂದ್ರಶೇಖರ ಮಾಮನಿ ಅವರು ನಿರ್ವಹಿಸಿದ ಹುದ್ದೆಗಳು:
- ವಿಧಾನಸಭಾ ಸದಸ್ಯ: 2008-2013 ರಲ್ಲಿ ಬಿಜೆಪಿ ಪಕ್ಷದಿಂದ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾದರು, 2013-2018 ರಲ್ಲಿ ಎರಡನೇ ಬಾರಿಗೆ ಮತ್ತು ಮೂರನೇ ಬಾರಿಗೆ ಆಯ್ಕೆಯಾದರು.
- ಡಿ ಸಿ ಸಿ ಬ್ಯಾಂಕ್ ಬೆಳಗಾವಿ: 13 ಜೂನ್ 2015 ರಿಂದ ನಿರ್ದೇಶಕರಾಗಿ ನೇಮಕ
- 23-03-2020 ರಿಂದ ಕರ್ನಾಟಕ ವಿಧಾನಸಭೆಯ ಉಪ ಸ್ಪೀಕರ್
- ಶ್ರೀ ರೇಣುಕಾ ದೇವಸ್ಥಾನ: 07-09-2020 ರಿಂದ ಶ್ರೀ ರೇಣುಕಾ ದೇವಸ್ತಾನ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾಗಿ ನೇಮಕ
- ಡಿ ಸಿ ಸಿ ಬ್ಯಾಂಕ್ ಬೆಳಗಾವಿ: ಎರಡನೇ ಬಾರಿಗೆ 06-11-2020 ರಿಂದ ನಿರ್ದೇಶಕರಾಗಿ ಆಯ್ಕೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ