ಕಲಬುರಗಿ: ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ, ರಾಷ್ಟ್ರ ನಾಯಕರ ಬಗ್ಗೆ ಇಲ್ಲ ಸಲ್ಲದ ಪೋಸ್ಟ್ ಮಾಡುವುದಕ್ಕೆ ಕಡಿವಾಣ ಹಾಕಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ‌ ಪ್ರಿಯಾಂಕ ಖರ್ಗೆ ಹೇಳಿದರು.


COMMERCIAL BREAK
SCROLL TO CONTINUE READING

ಇದನ್ನೂ ಓದಿ-WATCH: ಅಭಿವಾ ಪಾರ್ಟಿಯಲ್ಲಿ ಸುಮಲತಾ ಜೊತೆ ಯಶ್‌, ದಚ್ಚು ಭರ್ಜರಿ ಸ್ಟೆಪ್‌, ಮಾಲಾಶ್ರೀ ಡ್ಯಾನ್ಸ್‌ಗೆ ಫ್ಯಾನ್ಸ್‌ ಫಿದಾ!


ರವಿವಾರ ಕಲಬುರಗಿ ಕೇಂದ್ರ ಬಸ್ ನಿಲ್ದಾಣದಲ್ಲಿ ರಾಜ್ಯ ಸರ್ಕಾರದ ಪ್ರಮುಖ 5 ಉಚಿತ ಗ್ಯಾರಂಟಿ ಯೋಜನೆಯಲ್ಲಿ ಒಂದಾದ "ಶಕ್ತಿ" ಯೋಜನೆಗೆ ಚಾಲನೆ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತ್ತೀಚೆಗೆ ಸೋಷಿಯಲ್ ಮೀಡಿಯಾದಲ್ಲಿ ಸಮಾಜದ ಸ್ವಾಸ್ಥ್ಯಕ್ಕೆ ಧಕ್ಕೆ ತರುವಂತಹ ಪೋಸ್ಟ್ ಮಾಡುತ್ತಿರುವುದು ಗಮನಕ್ಕೆ ಬಂದಿದ್ದು, ಸಮಾಜದ ಅಶಾಂತಿಗೆ ಕಾರಣಾಗುವುದನ್ನು ಕಂಡು ನಮ್ಮ ಸರ್ಕಾರ ಸುಮ್ಮನೆ ಕೂಡುವುದಿಲ್ಲ ಎಂದರು.ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರವೇ ಸಾಮಾಜಿಕ‌ ಜಾಲತಾಣಗಳಲ್ಲಿ ಪ್ರಸಾರವಾಗುವ ಪೋಸ್ಟ್ ಗೆ ಕಡಿವಾಣ ಹಾಕಲಾಗುವುದು. ಇದು ತಮ್ಮ ಇಲಾಖೆಯ ವ್ಯಾಪ್ತಿಗೆ ಬರಲಿದೆ ಎಂದು ಸಚಿವರು ಸ್ಪಷ್ಟಪಡಿಸಿದರು.


ಇದನ್ನೂ ಓದಿ-Darshana Rajendran: ಟಾಲಿವುಡ್‌ಗೆ ಎಂಟ್ರಿ ಕೊಟ್ಟ ʼಹೃದಯಂ’ ಚಿತ್ರದ ಬೆಡಗಿ ದರ್ಶನಾ; ಸಿನಿಮಾ ಯಾವುದು ಗೊತ್ತಾ..?


ವಿದ್ಯುತ್ ದರ ಹೆಚ್ಚಿಸಿದ್ದು ನಾವಲ್ಲ:


ಜೂನ್ ಮಾಹೆಯ ವಿದ್ಯುತ್‌ ಬಿಲ್ಲಿನಲ್ಲಿ ಡಬಲ್ ಬಿಲ್ ಬಂದಿದೆ ಎಂದು ಸುದ್ದಿಗಾರರು ಸಚಿವರ‌ ಗಮನ ಸೆಳೆದಾಗ, ವಿದ್ಯುತ್ ದರ‌ ಹೆಚ್ಚಿಸಿದ್ದು, ನಮ್ಮ ಸರ್ಕಾರ ಅಲ್ಲ. ಹಿಂದಿನ ಸರ್ಕಾರದ ಅವಧಿಯಲ್ಲೇ ಕೆ.ಇ.ಆರ್.ಸಿ. ವಿದ್ಯುತ್ ದರ ಪರಿಷ್ಕರಿಸಿದ್ದು, ಚುನಾವಣೆ ಹಿನ್ನೆಲೆಯಲ್ಲಿ ಅದು ಜಾರಿಗೆ ಬಂದಿರಲಿಲ್ಲ. ಇದೀಗ ಜಾರಿಗೆ ಬಂದಿದೆ ಅಷ್ಟೆ. ಇದರ ಹೊರತಾಗಿ ತಾಂತ್ರಿಕ  ಕಾರಣದಿಂದ ಹೆಚ್ಚಿನ ಬಿಲ್ಲು ಬಂದಲ್ಲಿ ಅಧಿಕಾರಿಗಳು ಅದನ್ನು ನೋಡಿಕೊಳ್ಳಲಿದ್ದಾರೆ ಎಂದರು.
ಶಾಸಕ ಅಲ್ಲಮಪ್ರಭು ಪಾಟೀಲ ಜೊತೆಗಿದ್ದರು‌.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.