ಬೆಂಗಳೂರು: ಕ್ವಿನ್ ಸಿಟಿ ಮೂಲಕ ಕೇವಲ ಕಟ್ಟಡಗಳನ್ನು ನಿರ್ಮಾಣ ಮಾಡುವುದು ನಮ್ಮ ಗುರಿಯಲ್ಲ.ಶಿಕ್ಷಣ, ತಂತ್ರಜ್ಞಾನ, ಉದ್ಯೋಗ, ಸುಸ್ಥಿರ ಅಭಿವೃದ್ಧಿ ಸೇರಿದಂತೆ ಕರ್ನಾಟಕದ ಭವಿಷ್ಯವನ್ನು ಗುರಿಯಾಗಿಟ್ಟುಕೊಂಡು ಜನರ ಜೀವನದಲ್ಲಿ ಬದಲಾವಣೆ ತರುವುದು ಯೋಜನೆಯ ಗುರಿ" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.


COMMERCIAL BREAK
SCROLL TO CONTINUE READING

"ಕರ್ನಾಟಕದ ಸಾಮರ್ಥ್ಯದ ಬಗ್ಗೆ ಕಿಂಚಿತ್ತೂ ಅನುಮಾನ ಬೇಡ.ಬೆಂಗಳೂರು ನಗರಾಭಿವೃದ್ಧಿ ಸಚಿವನಾಗಿ, ಈ ನಗರದ ಅಭಿವೃದ್ಧಿಗೆ ನಾನು ಕಟಿಬದ್ಧನಾಗಿದ್ದೇನೆ. ನೀರು ವಿದ್ಯುತ್ ರಸ್ತೆ ಸೇರಿದಂತೆ ಎಲ್ಲಾ ಮೂಲ ಸೌಕರ್ಯವನ್ನು ಜನರಿಗೆ ಹಾಗೂ ಕೈಗಾರಿಕೆಗಳಿಗೆ ಒದಗಿಸುವುದು ನಮ್ಮ ಆದ್ಯತೆ" ಎಂದರು.


ಇದನ್ನೂ ಓದಿ : ಭಾಸ್ಕರ್ ಪ್ರಸಾದ್‌ಗೆ ಬ್ಲಾಕ್‌ಮೇಲ್ ಮಾಡಿ ಹಣಕ್ಕೆ ಬೇಡಿಕೆ


ಕಡಿಮೆ ದರದಲ್ಲಿ ಆರೋಗ್ಯ ಸೇವೆ :
"ಆಗಾದ ಮಾನವ ಸಂಪನ್ಮೂಲವನ್ನು ಕರ್ನಾಟಕ ಹೊಂದಿದೆ.ಆರೋಗ್ಯ ಕ್ಷೇತ್ರದಲ್ಲಿ ಬೆಂಗಳೂರು ಹಾಗೂ ಕರ್ನಾಟಕ ಮುಂಚೂಣಿಯಲ್ಲಿದೆ.ಆರೋಗ್ಯ ತಪಾಸಣೆ ವೆಚ್ಚ ಕಡಿಮೆ ದರದಲ್ಲಿ ದೊರಕುತ್ತದೆ" ಎಂದು ಹೇಳಿದರು.


ಭವಿಷ್ಯ ಗಮನದಲ್ಲಿಟ್ಟುಕೊಂಡು ಯೋಜನೆ ರೂಪಣೆ:
"ಎರಡು ದಿನಗಳ ಹಿಂದೆ ಕರ್ನಾಟಕದ ಮೊಟ್ಟ ಮೊದಲ ನೈಸರ್ಗಿಕ ಅನಿಲ ವಿದ್ಯುತ್ ಉತ್ಪಾದನಾ ಸ್ಥಾವರವನ್ನು ಯಲಹಂಕದಲ್ಲಿ  ಉದ್ಘಾಟನೆ ಮಾಡಲಾಯಿತು. ಈ ರೀತಿಯ ಭವಿಷ್ಯವನ್ನು ಮುಂದಿಟ್ಟುಕೊಂಡ ಅನೇಕ ಯೋಜನೆಗಳನ್ನು ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಈ ರಾಜ್ಯಕ್ಕೆ ನೀಡಿದೆ" ಎಂದರು.


"ಇನ್ನೇನು ಕೆಲವೇ ದಿನಗಳಲ್ಲಿ  ಕಾವೇರಿ ಕುಡಿಯುವ ನೀರಿನ ಐದನೇ ಹಂತ ಕಾಮಗಾರಿ ಮುಗಿಯಲಿದೆ.ಈ ಹಿಂದಿನ ನಾಲ್ಕು ಹಂತಗಳಿಂದ 1,450 ಎಂಎಲ್ ಡಿ ನೀರನ್ನು ಬೆಂಗಳೂರಿಗೆ ಸರಬರಾಜು ಮಾಡಲಾಗುತ್ತಿದೆ.ಈ ಐದನೇ ಹಂತದ ಯೋಜನೆಯಲ್ಲಿ  775 ಎಂಎಲ್‌ಡಿ  ನೀರನ್ನು ಬೆಂಗಳೂರಿಗೆ ನಾವು ನೀಡುತ್ತಿದ್ದೇವೆ. ಮುಂದಿನ 10 ವರ್ಷ ಬೆಂಗಳೂರು ಹಾಗೂ ನಗರದ ಸುತ್ತಮುತ್ತ ನೀರಿನ ತೊಂದರೆ ಇರುವುದಿಲ್ಲ" ಎಂದು ತಿಳಿಸಿದರು.


ಇದನ್ನೂ ಓದಿ : ಜಿನ್ನಿ ಮಿಲ್ಕ್ ಕಂಪನಿಯಿಂದ 278 ರೈತರಿಗೆ ವಂಚನೆ ಕೇಸ್


ನಾನು ಮತ್ತು ಸಿದ್ದರಾಮಯ್ಯ ಅವರು ದೆಹಲಿ ಭೇಟಿ ವೇಳೆ ಪ್ರಧಾನಿ ಮೋದಿ ಅವರ ಬಳಿ ಗುಜರಾತಿಗೆ ಗಿಫ್ಟ್ ಸಿಟಿ ಯೋಜನೆ ನೀಡಿದಂತೆ ನಮಗೂ ನೀಡಬೇಕೆಂದು ಮನವಿ ಮಾಡಿದೆವು.ಈ ದೇಶಕ್ಕೆ ಒಂದೇ ಗಿಫ್ಟ್ ಸಿಟಿ ಇರಬೇಕು ಎಂದು ಅವರು ಮನವಿಯನ್ನು ತಿರಸ್ಕರಿಸಿದ್ದರು.ನಾವು ಈ ಯೋಜನೆಯನ್ನು ಆ ಮಟ್ಟಕ್ಕೆ ತೆಗೆದುಕೊಂಡು ಹೋಗಿ ಸಾಧಿಸಿ ತೋರಿಸಬೇಕು ಎಂದು ಡಿಕೆಶಿ ಹೇಳಿದರು.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.