ಮೈಸೂರು : ಮುಂದಿನ ದಿನಗಳಲ್ಲಿ ನಂಜನಗೂಡು ಕ್ಷೇತ್ರ ಧಾರ್ಮಿಕ ಹಾಗೂ ಪ್ರವಾಸಿ ಕೇಂದ್ರವಾಗಿ ಅಭಿವೃದ್ಧಿಗೊಳಿಸಲು ಯೋಜನೆಗಳನ್ನು ರೂಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.


COMMERCIAL BREAK
SCROLL TO CONTINUE READING

ಅವರು ಇಂದು ನಂಜನಗೂಡು ಶ್ರೀ ಕಂಠೇಶ್ವರ ದೇವಸ್ಥಾನದ ವಿವಿಧ ಕಾಮಗಾರಿ ಗಳ ಗುದ್ದಲಿ ಪೂಜೆ, ನುಗು ಹಾಗೂ ಹೇಡಿಯಾಳ ಏತ ನೀರಾವರಿ ಯೋಜನೆಗೆ ಚಾಲನೆ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸಿದರು. ಬಳಿಕ ಮಾತನಾಡಿ, ಕಬಿನಿ ಏತನೀರಾವರಿ ಪ್ರಾರಂಭಿಸಿ ಬಲದಂಡೆ ಕಾಲುವೆ ಕಾಮಗಾರಿ ನಮ್ಮ ಸರ್ಕಾರದ ಅವಧಿಯಲ್ಲಿ ಪ್ರಾರಂಭಿಸಲಾಗಿತ್ತು. ಆದರೆ ಬೇರೆ ಸರ್ಕಾರಗಳು ಗುಂಡ್ಲುಪೇಟೆ, ಚಾಮರಾಜಪೇಟೆ ಕೆರೆಗಳನ್ನು ತುಂಬಿಸಬೇಕು ಎನ್ನುವ ಬಗ್ಗೆ ಕಾಳಜಿ ಮಾಡಲಿಲ್ಲ. 


ಇದನ್ನೂ ಓದಿ : ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಗೊಂಡ ರೌಡಿ ಶೀಟರ್ ಫೈಟರ್ ರವಿ..!


ಮಾತಿನಿಂದ ಹೊಟ್ಟೆ ತುಂಬುವುದಿಲ್ಲ. ಸಾಮಾಜಿಕ ನ್ಯಾಯ ಭಾಷಣದಿಂದ ಸಿಗುವುದಿಲ್ಲ. ನಮ್ಮ ಸರ್ಕಾರ ದುರ್ಬಲ ವರ್ಗದವರಿಗೆ ಸಮಾನ ಅವಕಾಶಗಳನ್ನು ಕೊಡುವ ಮೂಲಕ ಸಾಮಾಜಿಕ ನ್ಯಾಯ ಒದಗಿಸಲಾಗಿದೆ. ಎಲ್ಲ ವರ್ಗದವರಲ್ಲಿ ಜಾಗೃತಿ ಮೂಡುತ್ತಿದ್ದು, ಬದಲಾವಣೆ ಪ್ರಾರಂಭವಾಗಿದೆ. ಯಾರು ಎಲ್ಲರನ್ನು ಎದುರಿಸಿ ಬಡವರ ಪರ ನಿಲ್ಲುವವರೇ ನಿಜವಾದ ನಾಯಕ. 


ವಾಲ್ಮೀಕಿ, ಡಾ.ಬಿ.ಆರ್. ಅಂಬೇಡ್ಕರ್, ದೇವರಾಜ ಅರಸು, ಜಗಜೀವನರಾಂ ತಮ್ಮ ಆದರ್ಶಗಳನ್ನು ಬಿಟ್ಟು ಹೋಗಿದ್ದಾರೆ. ಇವರುಗಳು ಹಾಕಿಕೊಟ್ಟ ಮಾರ್ಗದಲ್ಲಿ ನಾಯಕರು ನಡೆಯಬೇಕು. ಅವಕಾಶ ಸಿಕ್ಕಾಗ ಸಾಮಾಜಿಕ ನ್ಯಾಯ ಒದಗಿಸಬೇಕು. ಇದು ಜನರ ರಾಜಕಾರಣ. ಆದರೆ ಕೇವಲ ಅಧಿಕಾರಕ್ಕಾಗಿ ರಾಜಕಾರಣ ಮಾಡುವವರೂ ಇದ್ದಾರೆ. ಜನರ ಸಂಕಷ್ಟಗಳಿಗೆ ಸ್ಪಂದಿಸಬೇಕು. ನಂಜನಗೂಡು ಅಭಿವೃದ್ಧಿಯ ಪಥದಲ್ಲಿ ಸಾಗಲಿದೆ ಎಂದರು.


ಇದನ್ನೂ ಓದಿ : Voter ID Scam : ಚಿಲುಮೆ ಸಂಸ್ಥೆ ಕೇಸ್ : ಮತ್ತೋರ್ವ ಆರೋಪಿ ಬಂಧಿಸಿದ ಪೊಲೀಸರು


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.