ಬೆಂಗಳೂರು: ಮಂಗಳೂರಿನ ನಾಗುರಿಯ ಕಂಕನಾಡಿಯ ಪೊಲೀಸ್ ಠಾಣೆ ಹತ್ತಿರ ಆಟೋದಲ್ಲಿ ಸಂಭವಿಸಿದ ಸ್ಫೋಟ ಆಕಸ್ಮಿಕವಲ್ಲ. ಇದು ಉಗ್ರರ ಕೃತ್ಯ ಎಂದು ಡಿಜಿಪಿ ಪ್ರವೀಣ್ ಸೂದ್ ಟ್ವೀಟ್ ಮೂಲಕ ಸ್ಪಷ್ಟಪಡಿಸಿದ್ದಾರೆ. ಪ್ರಕರಣ ಸಂಬಂಧ ಸ್ಪಷ್ಟ ಮಾಹಿತಿಗಳು ಲಭ್ಯವಾಗಿದ್ದು,ಇದು ಆಕಸ್ಮಿಕ ಸ್ಫೋಟವಲ್ಲ. ಇದೊಂದು ಭಯೋತ್ಪಾದಕ ಕೃತ್ಯವಾಗಿದೆ. ಸ್ಫೋಟದ ಸಂದರ್ಭದಲ್ಲಿ ಸುತ್ತಮುತ್ತಲೂ ಜನ ಇಲ್ಲದ ಕಾರಣ ಯಾವುದೇ ಪ್ರಾಣ ಹಾನಿಯಾಗಿಲ್ಲ ರಾಜ್ಯ ಪೊಲೀಸರು ಈ ಬಗ್ಗೆ ಸೂಕ್ತ ತನಿಖೆ ಕೈಗೊಂಡಿದ್ದಾರೆ ಎಂದು ತಿಳಿಸಿದ್ದಾರೆ.
ಮಂಗಳೂರಿನ ನಾಗುರಿಯಿಂದ ಪಂಪ್ ವೆಲ್ ಕಡೆಗೆ ಆಟೋರಿಕ್ಷಾ ಸಂಚರಿಸುತ್ತಿತ್ತು. ನಾಗುರಿಯಲ್ಲಿ ಆಟೋ ರಿಕ್ಷಾ ಏರಿದ ಪ್ರಯಾಣಿಕನ ಕೈಯಲ್ಲಿದ್ದ ಪ್ಲಾಸ್ಟಿಕ್ ಬ್ಯಾಗ್ ನಲ್ಲಿ ದಾರಿ ಮಧ್ಯೆ ಇದ್ದಕ್ಕಿದ್ದ ಹಾಗೇ ಬೆಂಕಿ ಕಾಣಿಸಿಕೊಂಡು, ಸ್ಫೋಟಗೊಂಡಿತ್ತು. ಘಟನೆಯಲ್ಲಿ ಬ್ಯಾಗ್ ಹಿಡಿದುಕೊಂಡಿದ್ದ ವ್ಯಕ್ತಿ ಹಾಗೂ ಆಟೋ ಚಾಲಕನಿಗೆ ಬೆಂಕಿ ತಗುಲಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
It’s confirmed now. The blast is not accidental but an ACT OF TERROR with intention to cause serious damage. Karnataka State Police is probing deep into it along with central agencies. https://t.co/lmalCyq5F3
— DGP KARNATAKA (@DgpKarnataka) November 20, 2022
ಘಟನೆಯಲ್ಲಿ ಆಟೋ ಒಳಭಾಗ ಸುಟ್ಟು ಕರಕಲಾಗಿದೆ. ಘಟನಾ ಸ್ಥಳದಲ್ಲಿ ಸಂಶಯಾಸ್ಪದ ವಸ್ತುಗಳು ಸಿಕ್ಕ ಹಿನ್ನೆಲೆ ಸ್ಥಳಕ್ಕೆ ಪೊಲೀಸ್ ಆಯುಕ್ತ ಶಶಿಕುಮಾರ್ ಹಾಗೂ ವಿಧಿವಿಜ್ಞಾನ ಇಲಾಖೆಯ ತಜ್ಞರು ಪರಿಶೀಲನೆ ನಡೆಸಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.