Dharwad News: ಇಂದು ಅಂಗನವಾಡಿ, ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಧಾರವಾಡ ಜಿಲ್ಲೆ ಆದ್ಯಂತ ನಿರಂತರವಾಗಿ ಮಳೆ ಸುರಿಯುತ್ತಿರುವದರಿಂದ ಜುಲೈ 27 ರಂದು  ಜಿಲ್ಲೆಯ ಎಲ್ಲ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆ, ಪಿಯುಸಿ ಮತ್ತು ಪದವಿ ಕಾಲೇಜುಗಳಿಗೆ ಒಂದು ದಿನದ ರಜೆ ಘೋಷಿಸಿ, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಆದೇಶಿಸಿದ್ದಾರೆ.

Written by - Manjunath N | Last Updated : Jul 27, 2023, 12:42 AM IST
  • ಈ ಕುರಿತು ಪ್ರಕಟಣೆ ನೀಡಿರುವ ಅವರು, ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಕಳೆದ ವಾರದಿಂದ ನಿರಂತರವಾಗಿ ಮಳೆ ಸುರಿಯುತ್ತಿದೆ.
  • ಮಕ್ಕಳ ರಕ್ಷಣೆ ಹಿತದೃಷ್ಟಿಯಿಂದ ಒಂದು ದಿನ ಮಾತ್ರ ಜಿಲ್ಲೆಯ ಎಲ್ಲ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆ, ಪಿಯುಸಿ ಮತ್ತು ಪದವಿ ಕಾಲೇಜುಗಳಿಗೆ ರಜೆ ನೀಡಲಾಗಿದೆ.
  • ಸಂಭಂದಿಸಿದ ಅಧಿಕಾರಿಗಳು ತಮಗೆ ಸಂಬಂಧಿಸಿದ ಸಂಸ್ಥೆಗಳಿಗೆ ಮಾಹಿತಿ ನೀಡಿ, ಸೂಕ್ತ ಕ್ರಮವಹಿಸಬೇಕೆಂದು ಅವರು ಆದೇಶದಲ್ಲಿ ತಿಳಿಸಿದ್ದಾರೆ.
Dharwad News: ಇಂದು ಅಂಗನವಾಡಿ, ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ  title=
file photo

ಧಾರವಾಡ: ಧಾರವಾಡ ಜಿಲ್ಲೆ ಆದ್ಯಂತ ನಿರಂತರವಾಗಿ ಮಳೆ ಸುರಿಯುತ್ತಿರುವದರಿಂದ ಜುಲೈ 27 ರಂದು  ಜಿಲ್ಲೆಯ ಎಲ್ಲ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆ, ಪಿಯುಸಿ ಮತ್ತು ಪದವಿ ಕಾಲೇಜುಗಳಿಗೆ ಒಂದು ದಿನದ ರಜೆ ಘೋಷಿಸಿ, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಆದೇಶಿಸಿದ್ದಾರೆ.

ಇದನ್ನೂ ಓದಿ: ಕಾಲೇಜಿನಲ್ಲಿ ವಿಡಿಯೋ ಚಿತ್ರೀಕರಣ : ಸಮಗ್ರ ತನಿಖೆಗೆ ಸುನೀಲ್‌ ಕುಮಾರ್‌ ಆಗ್ರಹ

ಈ ಕುರಿತು ಪ್ರಕಟಣೆ ನೀಡಿರುವ ಅವರು, ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಕಳೆದ ವಾರದಿಂದ  ನಿರಂತರವಾಗಿ ಮಳೆ ಸುರಿಯುತ್ತಿದೆ. ಮಕ್ಕಳ ರಕ್ಷಣೆ ಹಿತದೃಷ್ಟಿಯಿಂದ ಒಂದು ದಿನ ಮಾತ್ರ ಜಿಲ್ಲೆಯ ಎಲ್ಲ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆ, ಪಿಯುಸಿ ಮತ್ತು ಪದವಿ ಕಾಲೇಜುಗಳಿಗೆ ರಜೆ ನೀಡಲಾಗಿದೆ.

ಇದನ್ನೂ ಓದಿ: ಕೇಂದ್ರ ವಾಸ್ತವ್ಯ ವಿಷಯಗಳನ್ನು ಮರೆಮಾಚುತ್ತಿದೆ : ಡಿಕೆ ಶಿವಕುಮಾರ್‌ ಹೇಳಿಕೆ

ಈ ರಜಾ ದಿನವನ್ನು ಮುಂದಿನ ಆಗಸ್ಟ್ 12 ರ ಶನಿವಾರದಂದು ಪೂರ್ಣ ದಿನ ಶಾಲೆ, ಕಾಲೇಜು ನಡೆಸುವ ಮೂಲಕ ಜುಲೈ 27 ರ ರಜೆ ಹೊಂದಾಣಿಕೆ ಮಾಡಿಕೋಳ್ಳಬೇಕು. ಈ ಕುರಿತು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕರು ಮತ್ತು ಪದವಿ ಕಾಲೇಜುಗಳಿಗೆ ಸಂಭಂದಿಸಿದ ಅಧಿಕಾರಿಗಳು ತಮಗೆ ಸಂಬಂಧಿಸಿದ ಸಂಸ್ಥೆಗಳಿಗೆ  ಮಾಹಿತಿ ನೀಡಿ, ಸೂಕ್ತ ಕ್ರಮವಹಿಸಬೇಕೆಂದು ಅವರು ಆದೇಶದಲ್ಲಿ ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News