ಹಿಂದುಳಿದ ವರ್ಗಗಳ ಏಳಿಗೆಗಾಗಿ ಶ್ರಮಿಸಿದ ಮಹಾ ನಾಯಕ ʼಧ್ರುವ ನಾರಾಯಣʼ
Dhruva Narayan : ಸಂಸದ ಹಾಗೂ ರಾಜಕೀಯ ನಾಯಕನಾಗಿದ್ದ, ತಮ್ಮ ಪರಿಶ್ರಮ, ಪ್ರಾಮಾಣಿಕತೆ ಮತ್ತು ಬದ್ಧತೆಯಿಂದ ಅತ್ಯುನ್ನತ ಪಟ್ಟಕ್ಕೇರುವ ಎಲ್ಲ ಗುಣಗಳನ್ನು ಹೊಂದಿದ್ದ ಮಾಜಿ ಸಂಸದ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧ್ರುವ ನಾರಾಯಣ ಅವರ ಬದುಕು ಮದ್ಯದಲ್ಲಿಯೇ ಕೊನೆಯಾಗಿದೆ.
61 ವರ್ಷ ವಯಸ್ಸಿನ ಆರ್. ಧ್ರುವ ನಾರಾಯಣ ಅವರು ಇಂದು ಹೃದಯಘಾತದಿಂದ ಮೃತಪಟ್ಟಿದ್ದಾರೆ. ಶನಿವಾರ ಹೃದಯಾಘಾತ ಸಂಭವಿಸಿದ ಕೂಡಲೇ ಅವರನ್ನು ಮೈಸೂರಿನ ಡಿಆರ್‌ಎಂಎಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಹಲೋಕ ತ್ಯಜಿಸಿದ್ದಾರೆ.
ಆರ್ ಧ್ರುವನಾರಾಯಣ್ ನಿಧನವಾಗಿದ್ದು ಎಲ್ಲರಿಗೂ ಆಘಾತವನ್ನು ಉಂಟುಮಾಡಿದೆ. ಕಾರಣ ಧ್ರುವನಾರಾಯಣ ಅವರಿಗೆ ಆರೋಗ್ಯದ ಸಮಸ್ಯೆ ಇರಲಿಲ್ಲ. ಹೃದಯಸಂಬಂಧಿ ಕಾಯಿಲೆ ಇರಲಿಲ್ಲ. ಇಂದು ಬೆಳಿಗ್ಗೆ ಅವರಿಗೆ ಎದೆ ನೋವು ಶುರುವಾಗಿದೆ. ಹೀಗಾಗಿ ಶನಿವಾರ ಬೆಳಿಗ್ಗೆ 6.30ಕ್ಕೆ ಚಾಲಕನಿಗೆ ಕರೆ ಮಾಡಿದ್ದರು. ಚಾಲಕ 6.40ಕ್ಕೆ ಬಂದು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಅವರಿಗೆ ತೀವ್ರ ರಕ್ತವಾಂತಿ ಆಗಿತ್ತು ಎಂದು ಚಾಲಕ ಹೇಳಿಕೊಂಡಿದ್ದಾರೆ. ಅವರನ್ನು ಮೈಸೂರಿನ ಡಿಆರ್‌ಎಂಎಸ್ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಅವರು ಇಂದು ಅವರು ಇಹಲೋಕ ತ್ಯಜಿಸಿದ್ದಾರೆ.
ಅವರ ಅಕಾಲಿಕ ಮರಣದಿಂದಾಗಿ ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ. ವೈಯಕ್ತಿಕ ಜೀವನ ಧ್ರುವನಾರಾಯಣ ಅವರು 1961 ಜುಲೈ 31ರಂದು ಚಾಮರಾಜನಗರ ಜಿಲ್ಲೆಯ ಹೆಗ್ಗವಾಡಿ ಗ್ರಾಮದಲ್ಲಿ ಜನನಿಸಿದರು. ಬೆಂಗಳೂರು ಕೃಷಿ ವಿಶ್ವವಿದ್ಯಾಲಯದಿಂದ ಕೃಷಿ ಪದವಿ ಹಾಗೂ ಸ್ನಾತಕೋತ್ತರ ಪದವಿ ಪಡೆದಿರುವ ಧೃವನಾರಾಯಣ್ ಮೂಲತಃ ವೃತ್ತಿಯಿಂದ ಕೃಷಿಕರು. ಧ್ರುವನಾರಾಯಣ ಅವರ ತಂದೆ ರಂಗಸ್ವಾಮಿ ತಾಯಿ ಸಿದ್ದಮ್ಮ, ಪತ್ನಿ ವೀಣಾ. ಇವರಿಗೆ ಇಬ್ಬರು ಪುತ್ರರು ಇದ್ದಾರೆ. ಇವರ ಒಟ್ಟು ಆಸ್ತಿ 2.89 ಕೋಟಿ ರೂಪಾಯಿ ಇದ್ದು 26.06 ಲಕ್ಷ ರೂಪಾಯಿ ಸಾಲವನ್ನು ಹೊಂದಿದ್ದಾರೆ.
ಇದನ್ನೂ ಓದಿ-Dhruvanarayan : ದೇವರು ಬಲು ಕ್ರೂರಿ.. ಧ್ರುವನಾರಾಯಣ್ ನಿಧನಕ್ಕೆ ಡಿ.ಕೆ. ಶಿವಕುಮಾರ್ ಕಂಬನಿ
ಇವರ ರಾಜಕೀಯ ಜೀವನವನ್ನು ನೋಡುವುದಾದರೆ, 1983ರಲ್ಲಿ ಓರ್ವ ಸಾಮಾನ್ಯ ಕಾರ್ಯಕರ್ತನಾಗಿ ಕಾಂಗ್ರೆಸ್ ಪಕ್ಷ ಸೇರಿದ ಆರ್. ಧ್ರುವನಾರಾಯಣ ಅವರು ಕಾಲಾಂತರದಲ್ಲಿ ಪಕ್ಷದ ಮುಖಂಡನಾಗಿ ಬೆಳೆದರು. 2004ರಲ್ಲಿ ಸಂತೇಮರಹಳ್ಳಿ ವಿಧಾನ ಸಭಾ ಕ್ಷೇತ್ರ ಹಾಗೂ 2008ರಲ್ಲಿ ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರಗಳಿಂದ ಸತತ ಎರಡು ಬಾರಿ ಶಾಸಕರಾಗಿ ಗೆದ್ದರು. 1999ರಲ್ಲಿ ಸಂತೇಮರಹಳ್ಳಿ ಕ್ಷೇತ್ರದ ವಿಧಾನ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್ಸಿನ ಎ.ಆರ್. ಕೃಷ್ಣಮೂರ್ತಿ ಅವರ ಎದುರು ಸೋತರು.
ಆದರೆ ಇದೇ ಕೃಷ್ಣಮೂರ್ತಿ ಅವರನ್ನು 2004ರ ವಿಧಾನಸಭಾ ಚುನಾವಣೆಯಲ್ಲಿ ಕೇವಲ 1 ಮತದಿಂದ ಧ್ರುವನಾರಾಯಣ ಸೋಲಿಸಿದ್ದರು. ಹಾಗೆಯೇ 2009 ಹಾಗೂ 2014ರ ಲೋಕಸಭಾ ಚುನಾವಣೆಯಲ್ಲಿ ಕೂಡ ಕೃಷ್ಣಮೂರ್ತಿ ಅವರನ್ನು ಸೋಲಿಸಿ ಸಂಸದ ಪಟ್ಟವನ್ನು ಪಡೆದರು. ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ನಂಜನಗೂಡು ಕಾಂಗ್ರೆಸ್ ಅಭ್ಯಥಿಯಾಗಿ ಸ್ಪರ್ಧಿಸಲು ಮುಂದಾಗಿದ್ದರು. ಈ ಹಿನ್ನೆಲೆಯಲ್ಲಿ ಮತದಾರರನ್ನು ಭೇಟಿ ಮಾಡಿ ಚುನಾವಣೆ ಪ್ರಚಾರದಲ್ಲಿ ತೊಡಗಿದ್ದರು. ಸದ್ಯ ಅವರ ಆಕಸ್ಮಿಕ ನಿಧನದಿಂದಾಗಿ ಚಾಮರಾಜನಗರ ಜಿಲ್ಲೆಯ ಹೆಗ್ಗವಾಡಿ ಗ್ರಾಮ ಶೋಕದ ಸಾಗರದಲ್ಲಿ ಮುಳುಗಿದೆ.
ಇದನ್ನೂ ಓದಿ-ಮಹದಾಯಿ ನೀರು ಮಲಪ್ರಭಾ ನದಿಗೆ ಹರಿಸದೇ ವಿಶ್ರಮಿಸುವುದಿಲ್ಲ : ಸಿಎಂ ಬೊಮ್ಮಾಯಿ
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.