ಡಯಾಲಿಸಿಸ್ ಸಮಸ್ಯೆ ನಮ್ಮ ಸರ್ಕಾರದಿಂದ ಆಗಿದ್ದಲ್ಲ - ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ಡಯಾಲಿಸಿಸ್ ಆರೋಗ್ಯ ಸೇವೆಯಲ್ಲಿ ಸಮಸ್ಯೆಯಾಗಲು ಮೂಲ ಕಾರಣ ಹಿಂದಿನ ಸರ್ಕಾರದ ಅವಧಿಯಲ್ಲಿ ನೇಮಕ ಗೊಂಡಿರುವ ಎರಡು ಏಜನ್ಸಿಗಳು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಮಂಗಳೂರಿನಲ್ಲಿ ಇಂದು ಈ ಕುರಿತು ಮಾಧ್ಯಮದವರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಸಚಿವರು, ನಾನು ಆರೋಗ್ಯ ಸಚಿವನಾದ ಬಳಿಕ ಡಯಾಲಿಸಿಸ್ ಕೇಂದ್ರಗಳ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಹೆಚ್ಚು ಒತ್ತು ನೀಡಿ ಕೆಲಸ ಮಾಡ್ತಿದ್ದೇನೆ ಎಂದರು. 

Written by - Prashobh Devanahalli | Edited by - Manjunath N | Last Updated : Dec 2, 2023, 04:22 PM IST
  • ಸದ್ಯಕ್ಕೆ ಡಯಾಲಿಸಿಸ್ ಸೇವೆ ಆಸ್ಪತ್ರೆ ಸಿಬ್ಬಂದಿಗಳಿಂದ ನಿರ್ವಹಿಸಲು ಆರೋಗ್ಯ ಅಧಿಕಾರಿಗಳಿಗೆ ಸೂಚಿಸಲಾಗಿದೆ
  • ನಾವು ಸಿಬ್ಬಂದಿಗಳ ಪರವಾಗಿಯೇ ಇದ್ದೇವೆ. ಸರ್ಕಾರ ಮಧ್ಯಪ್ರವೇಶಿಸಿ ಏಜನ್ಸಿಯವರಿಗೆ ಕೆಲವು ಬಾಕಿ ವೇತನ ಕೊಡಿಸಲಾಗಿದೆ.
 ಡಯಾಲಿಸಿಸ್ ಸಮಸ್ಯೆ ನಮ್ಮ ಸರ್ಕಾರದಿಂದ ಆಗಿದ್ದಲ್ಲ - ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ title=

ಬೆಂಗಳೂರು: ಡಯಾಲಿಸಿಸ್ ಆರೋಗ್ಯ ಸೇವೆಯಲ್ಲಿ ಸಮಸ್ಯೆಯಾಗಲು ಮೂಲ ಕಾರಣ ಹಿಂದಿನ ಸರ್ಕಾರದ ಅವಧಿಯಲ್ಲಿ ನೇಮಕ ಗೊಂಡಿರುವ ಎರಡು ಏಜನ್ಸಿಗಳು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಮಂಗಳೂರಿನಲ್ಲಿ ಇಂದು ಈ ಕುರಿತು ಮಾಧ್ಯಮದವರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಸಚಿವರು, ನಾನು ಆರೋಗ್ಯ ಸಚಿವನಾದ ಬಳಿಕ ಡಯಾಲಿಸಿಸ್ ಕೇಂದ್ರಗಳ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಹೆಚ್ಚು ಒತ್ತು ನೀಡಿ ಕೆಲಸ ಮಾಡ್ತಿದ್ದೇನೆ ಎಂದರು. 

ಹಿಂದಿನ ಸರ್ಕಾರ ಎರಡು ಏಜೆನ್ಸಿಯವರಿಗೆ ಡಯಾಲಿಸಿಸ್ ನಿರ್ವಹಣೆಗೆ ಕೊಟ್ಟಿತ್ತು. ಅದರಲ್ಲಿ BRS ನವರು ಅರ್ಧದಲ್ಲೇ ಕಾರ್ಯ ಸ್ಥಗಿತಗೊಳಿಸಿದ್ದರು. ಬಳಿಕ ESKEG ಸಂಸ್ಥೆಯವರಿಗೆ ನೀಡಲಾಗಿತ್ತು. ಈ ಸಂಸ್ಥೆಯವರು ಡಯಾಲಿಸಿಸ್ ಕೇಂದ್ರಗಳನ್ನ ಸರಿಯಾಗಿ ನಿರ್ವಹಿಸುತ್ತಿಲ್ಲ ಎಂಬುದರ ಬಗ್ಗೆ ಸಾರ್ವಜನಿಕರು, ಹಾಗೂ ಸಿಬ್ಬಂದಿಗಳಿಂದ ಸಾಕಷ್ಟು ದೂರುಗಳು ಬಂದಿದ್ದವು. ಕೇಂದ್ರಗಳಲ್ಲಿ ವೈದ್ಯರನ್ನ ನೇಮಿಸಿರಲಿಲ್ಲ. ಅಲ್ಲದೇ ಏಜೆನ್ಸಿಯವರು ಸಿಬ್ಬಂದಿಗಳಿಗೆ ಸಂಬಳ ಸರಿಯಾಗಿ ಕೊಡ್ತಾ ಇರಲಿಲ್ಲ. ಇಎಸ್ಸೈ,ಪಿಎಫ್ ಕಟ್ಟಿರಲಿಲ್ಲ ಎಂಬ ಆರೋಪಗಳು ಕೇಳಿ ಬಂದಿದ್ದವು. 

ಹೀಗಾಗಿಯೇ ಡಯಾಲಿಸಿಸ್ ಆರೋಗ್ಯ ಸೇವೆ ಸಮರ್ಪಕವಾಗಿ ನಡೆಸುವ ನಿಟ್ಟಿನಲ್ಲಿ ನಾವು ನಾಲ್ಕು ವಿಭಾಗವಾರು ಹೊಸ ಟೆಂಡರ್ ದಾರರನ್ನ ಆಹ್ವಾನಿಸಿ, ಬಹುತೇಕ ಟೆಂಡರ್ ಪ್ರಕ್ರೀಯೆ ಪೂರ್ಣಗೊಳಿಸಿದ್ದೇವೆ.‌ ರಾಜ್ಯದ ಜಿಲ್ಲಾ ಮತ್ತು ತಾಲೂಕು ಆಸ್ಪತ್ರೆಗಳ ಡಯಾಲಿಸಿಸ್ ಕೇಂದ್ರಗಳಲ್ಲಿ ಪಿಪಿಪಿ ಮಾದರಿಯಲ್ಲಿ ಹೊಸ ಯಂತ್ರಗಳನ್ನ ಅಳವಡಿಸಲು ಕ್ರಮವಹಿಸಲಾಗಿದೆ. ಸೊಂಕು ರಹಿತವಾದ, ಏಕ ಬಳಕೆಯ ಸುಮಾರು 800 ಡಯಾಲಿಸಿಸ್ ಯಂತ್ರಗಳನ್ನ ಅಳವಡಿಸಲು ಕ್ರಮ ಕೈಗೊಳ್ಳಲಾಗಿದೆ. 

ಇದನ್ನೂ ಓದಿ: Ration Card: ಹೊಸ ‘BPL, APL ಕಾರ್ಡ್’ಗೆ ಅರ್ಜಿ ಸಲ್ಲಿಕೆಗೆ ನಾಳೆ ಒಂದೇ ದಿನ ಅವಕಾಶ!

ಹೊಸ ಏಜನ್ಸಿಯವರು ಹೊಸ ಯಂತ್ರಗಳನ್ನ ಹಾಕಿ ಸೇವೆ ಆರಂಭಿಸಬೇಕು. ಒಂದು ವೇಳೆ ಇವರು ಯಂತ್ರಗಳನ್ನ ಹಾಕಲು ಮುಂದೆ ಬರಲ್ಲ ಎಂಬ ಶಂಕೆಗಳು ವ್ಯಕ್ತವಾದರೆ, ಪರ್ಯಾಯ ಮಾರ್ಗವಾಗಿ ಸರ್ಕಾರವೇ ಯಂತ್ರಗಳನ್ನ ಖರೀಧಿಸಿ ಇಲಾಖೆಯಿಂದಲೇ ಡಯಾಲಿಸಿಸ್ ನಿರ್ವಹಣೆ ಮಾಡಬೇಕಾಗುತ್ತದೆ. ಈ ಬಗ್ಗೆಯೂ ಅಧಿಕಾರಿಗಳೊಂದಿಗೆ ಚರ್ಚಿಸಿ ಒಂದು ಆಪ್ಷನ್ ಇಟ್ಟುಕೊಳ್ಳಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು. 

ನಾವು ಸಿಬ್ಬಂದಿಗಳ ಪರವಾಗಿಯೇ ಇದ್ದೇವೆ. ಏಜನ್ಸಿಯವರು ವೇತನ ನೀಡದಿರುವುದು ನನ್ನ ಗಮನಕ್ಕೆ ಬಂದಾಗ ನಾವು  ಮಧ್ಯಪ್ರವೇಶ ಮಾಡಿ ಸಿಬ್ಬಂದಿಗಳು ಹಾಗೂ ಸಂಸ್ಥೆಯವರೊಂದಿಗೆ ಚರ್ಚಿಸಿ ವೇತನ ಕೊಡಿಸುವ ಕೆಲಸ ಮಾಡಿದ್ದೇವೆ. ESI, PF ಅನ್ನ ಸಂಸ್ಥೆಯವರು ಕೊಡಬೇಕು. ಎರಡು ಸಂಸ್ಥೆಯವರನ್ನ ಕಪ್ಪು ಪಟ್ಟಿಗೆ ಸೇರಿಸಿ ಬಾಕಿ ಇರುವ ESI, PF ಅನ್ನ ಸಿಬ್ಬಂದಿಗಳಿಗೆ ಕೊಡಿಸುವಂತೆ ಅಧಿಕಾರಿಗಳು ಜೊತೆ ಚರ್ಚಿಸಿದ್ದೇನೆ. ಇನ್ನು ಬಾಕಿ ಇರುವ ಎರಡು ತಿಂಗಳ ವೇತನವನ್ನ ಇಲಾಖೆಯಿಂದಲೇ ಸಿಬ್ಬಂದಿಗಳಿಗೆ ಕೊಡಿಸಲು ಆರ್ಥಿಕ ಇಲಾಖೆ ಅನುಮತಿ ಕೋರಲಾಗಿದೆ ಎಂದು ಸಚಿವರು ಸ್ಪಷ್ಟಪಡಿಸಿದರು. 

ಇದನ್ನೂ ಓದಿ: ICC T20 World Cup 2023: ಟಿ20 ವಿಶ್ವಕಪ್‍ಗೆ ಹೊಸ ಸ್ವರೂಪ, 20 ತಂಡಗಳ ಸಂಪೂರ್ಣ ಮಾಹಿತಿ ಇಲ್ಲಿದೆ   

ವ್ಯವಸ್ಥೆ ಸರಿಪಡಿಸುವತ್ತ ಕಾರ್ಯ ನಿರ್ವಹಿಸುತ್ತಿರುವಾಗ ಡಯಾಲಿಸಿಸ್ ಸಿಬ್ಬಂದಿಗಳು ಸಹಕರಿಸಬೇಕು.ಮುಷ್ಕರ ಕೈ ಬಿಟ್ಟು ಕರ್ತವ್ಯಕ್ಕೆ ಹಾಜರಾಗಬೇಕು ಎಂದು ಮನವಿ ಮಾಡಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಸದ್ಯಕ್ಕೆ ಡಯಾಲಿಸಿಸ್ ಸೇವೆಯನ್ನ ಆರೋಗ್ಯ ಸಿಬ್ಬಂದಿಗಳಿಂದಲೇ ನಿರ್ವಹಿಸುವಂತೆ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://youtu.be/--phA9ji8NM

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

 

Trending News