ಅಸಹಾಯಕ ಡಿಕೆಶಿ ಎದುರು ಸಿದ್ದರಾಮಯ್ಯ ಕೈ ಮೇಲಾಯಿತೇ?: ಬಿಜೆಪಿ

ಪಿಸುಮಾತು ಪ್ರಕರಣ ಸಂಬಂಧ ಉಪಚುನಾವಣೆ ಮುಗಿದ ಬಳಿಕ ಉತ್ತರ ಕೊಡುತ್ತೇನೆ ಎಂದಿದ್ದ ಡಿ.ಕೆ.ಶಿವಕುಮಾರ್ ಈಗ ಮೆತ್ತಗಾಗಿ ಬಿಟ್ಟಿದ್ದಾರೆ.

Written by - Zee Kannada News Desk | Last Updated : Oct 24, 2021, 01:08 PM IST
  • ಡಿಕೆಶಿ ಬಗ್ಗೆ ಪಿಸುಮಾತು ಪ್ರಕರಣದಲ್ಲಿ ವಿ.ಎಸ್.ಉಗ್ರಪ್ಪಗೆ ಕ್ಲೀನ್‌ಚಿಟ್‌ ನೀಡಿರುವುದಕ್ಕೆ ಬಿಜೆಪಿ ವ್ಯಂಗ್ಯ
  • ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯರ ಕೈ ಮೇಲಾಯಿತೇ? ಎಂದು ಬಿಜೆಪಿ ಪ್ರಶ್ನೆ
  • ಅಕ್ರಮ ಸಂಪತ್ತಿನಿಂದ ಕುಬೇರರಾದವರ ಸದಸ್ಯತ್ವ ರದ್ಧತಿಗೆ ಕಾಂಗ್ರೆಸ್ ಏನಾದರೂ ಯೋಜನೆ ರೂಪಿಸಿದಿಯೇ?
ಅಸಹಾಯಕ ಡಿಕೆಶಿ ಎದುರು ಸಿದ್ದರಾಮಯ್ಯ ಕೈ ಮೇಲಾಯಿತೇ?: ಬಿಜೆಪಿ  title=
ಅಸಹಾಯಕ ಡಿಕೆಶಿ ಎಂದು ಬಿಜೆಪಿ ವ್ಯಂಗ್ಯವಾಡಿದೆ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್(DK Shivakumar) ಬಗ್ಗೆ ಮಾಧ್ಯಮ ಸಮನ್ವಯಕಾರ ಸಲೀಂ ಜೊತೆಗೆ ಪಿಸುಮಾತನಾಡಿದ್ದ ಘಟನೆಗೆ ಸಂಬಂಧಿಸಿದಂತೆ ಮಾಜಿ ಸಂಸದ ವಿ.ಎಸ್‌.ಉಗ್ರಪ್ಪಗೆ ಕ್ಲೀನ್‌ಚಿಟ್‌ ನೀಡಿರುವುದಕ್ಕೆ ಕರ್ನಾಟಕ ಬಿಜೆಪಿ ವ್ಯಂಗ್ಯವಾಡಿದೆ. #ಅಸಹಾಯಕಡಿಕೆಶಿ ಹ್ಯಾಶ್ ಟ್ಯಾಗ್ ಬಳಿಸಿ ಟ್ವೀಟ್ ಮಾಡಿರುವ ಬಿಜೆಪಿ, ‘ಬಹುಶಃ ಕೆಪಿಸಿಸಿ ಕಂಡ ಅತ್ಯಂತ ಅಸಹಾಯಕ ಅಧ್ಯಕ್ಷ ಎಂಬ ಪಟ್ಟ ಡಿಕೆಶಿಗೆ ಒಲಿದು ಬರಬಹುದು. ತಮ್ಮ ವಿರುದ್ಧ ಸಂಚು ರೂಪಿಸಿದ ವ್ಯಕ್ತಿಯ ವಿರುದ್ಧ ಶಿಸ್ತುಕ್ರಮ ತೆಗೆದುಕೊಳ್ಳುವುದಕ್ಕೂ ಡಿಕೆಶಿ ಅಳುಕುತ್ತಿದ್ದಾರೆ. ಡಿಕೆಶಿ ಎದುರು ಸಿದ್ದರಾಮಯ್ಯ(Siddaramaiah)ರ ಕೈ ಮೇಲಾಯಿತೇ?’ ಅಂತಾ ಪ್ರಶ್ನಿಸಿದೆ.

BJP-1.jpg

‘ಪಿಸುಮಾತು ಪ್ರಕರಣ ಸಂಬಂಧ ಉಪಚುನಾವಣೆ ಮುಗಿದ ಬಳಿಕ ಉತ್ತರ ಕೊಡುತ್ತೇನೆ ಎಂದಿದ್ದ ಡಿ.ಕೆ.ಶಿವಕುಮಾರ್(DK Shivakumar) ಈಗ ಮೆತ್ತಗಾಗಿ ಬಿಟ್ಟಿದ್ದಾರೆ. ಸಿದ್ದರಾಮಯ್ಯ ಬಣದ ಉಗ್ರಪ ವಿರುದ್ಧ ಶಿಸ್ತು ಕ್ರಮ ತೆಗೆದುಕೊಂಡರೆ ಎಲ್ಲಿ ಅಧ್ಯಕ್ಷ ಪಟ್ಟ ಕೈ ತಪ್ಪುತ್ತದೆಯೆಂಬ ಭಯವೇ? ಸಿದ್ದರಾಮಯ್ಯ ದೆಹಲಿ ಪ್ರವಾಸದಿಂದ ಡಿಕೆಶಿ ಕುಗ್ಗಿ ಹೋಗಿದ್ದಾರೆಯೇ?’ ಅಂತಾ ಬಿಜೆಪಿ ಟೀಕಿಸಿದೆ.

ಇದನ್ನೂ ಓದಿ: ಸಿದ್ದರಾಮಯ್ಯ ರಾಜ್ಯದ ಜನತೆಯ ದಾರಿ ತಪ್ಪಿಸುತ್ತಿದ್ದಾರೆ : ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ವಾಗ್ದಾಳಿ

‘ಸಿದ್ದರಾಮಯ್ಯ(Siddaramaiah) ಅವರ ಮೊದಲ ದೆಹಲಿ ಭೇಟಿ ಡಿಕೆಶಿ ಮಾಡಿದ ಪದಾಧಿಕಾರಿಗಳ ಪಟ್ಟಿಯನ್ನು ನಿರ್ಲಕ್ಷ್ಯ ಮಾಡುವಂತೆ ಮಾಡಿತು. 2ನೇ ಭೇಟಿ ಪದಾಧಿಕಾರಿಗಳ ಪಟ್ಟಿಯನ್ನೇ ತಿರಸ್ಕರಿಸುವಂತೆ ಮಾಡಿತು. ಸಿದ್ದರಾಮಯ್ಯನವರ 3ನೇ ಭೇಟಿ ಡಿಕೆಶಿ ಅಧ್ಯಕ್ಷ ಪದವಿಗೆ ಕುತ್ತು ತರಲಿದೆಯೇ?’ ಅಂತಾ ಬಿಜೆಪಿ ಟ್ವೀಟ್ ಮಾಡಿದೆ.

ತನ್ನ ಮತ್ತೊಂದು ಟ್ವೀಟ್ ನಲ್ಲಿ #ನಕಲಿಕಾಂಗ್ರೆಸ್‌ಸದಸ್ಯತ್ವ ಹ್ಯಾಶ್ ಟ್ಯಾಗ್ ಬಳಸಿರುವ ಬಿಜೆಪಿ, ‘ಕಾಂಗ್ರೆಸ್ ಸದಸ್ಯತ್ವ ಬೇಕಿದ್ದರೆ ಹಲವು ಷರತ್ತುಗಳಂತೆ!!! ಕುಡಿತ, ಡ್ರಗ್ಸ್ ಚಟ ಹೊಂದಿರಬಾರದು ಎಂಬ ಷರತ್ತು ವಿಧಿಸಿದೆ. ವಿದೇಶಿ ವಿಮಾನ ನಿಲ್ದಾಣದಲ್ಲಿ ಯಾರೂ ಸಿಕ್ಕಿಬೀಳಬಾರದು ಎಂಬ ಕಾಳಜಿಯಿಂದ ಈ‌ ನಿಯಮ ರೂಪಿಸಿರಬಹುದೇ?’ ಅಂತಾ ಪ್ರಶ್ನಿಸಿದೆ.

ಇದನ್ನೂ ಓದಿ: ಸುಳ್ಳು ಹೇಳುವುದರಲ್ಲಿ ಸಿದ್ದರಾಮಯ್ಯಗೆ ಪಿಎಚ್‌ಡಿ ನೀಡಬಹುದು: ಬಿಜೆಪಿ ಟೀಕೆ

‘ಕಾಂಗ್ರೆಸ್ ಸದಸ್ಯತ್ವ ಬೇಕಿದ್ದರೆ ಕಾನೂನು ಮೀರಿ ಹೆಚ್ಚಿನ ಆಸ್ತಿ ಸಂಪಾದಿಸಿರಬಾರದಂತೆ. ಅಕ್ರಮ ಸಂಪತ್ತಿನ ಮೂಲಕ ಕುಬೇರರಾದ ಡಿಕೆಶಿ, ಮಲ್ಲಿಕಾರ್ಜುನ ಖರ್ಗೆ, ಕೆಜೆ ಜಾರ್ಜ್, ಜಮೀರ್ ಅಹ್ಮದ್ ಖಾನ್ ಹಾಗೂ ನಕಲಿ ಗಾಂಧಿಗಳ ಸದಸ್ಯತ್ವ ರದ್ಧತಿಗೆ ಏನಾದರೂ ಯೋಜನೆ ರೂಪಿಸಿದ್ದೀರಾ?’ ಅಂತಾ ಕಾಂಗ್ರೆಸ್ ಪಕ್ಷವನ್ನು ಬಿಜೆಪಿ ಪ್ರಶ್ನಿಸಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

Trending News