ಪಿಂಚಣಿದಾರರ ಮನೆ ಬಾಗಿಲಿನಲ್ಲಿ, ಡಿಜಿಟಲ್ ಪ್ರಮಾಣ ಪತ್ರ ಸೌಲಭ್ಯ
ಪಿಂಚಣಿದಾರರು ವೈಯಕ್ತಿಕವಾಗಿ ಜೀವನ ಪ್ರಮಾಣ ಪತ್ರವನ್ನು ಸಲ್ಲಿಸುವ ಸಮಯದಲ್ಲಿ ಎದುರಿಸುತ್ತಿರುವ ತೊಂದರೆಗಳನ್ನು ತಪ್ಪಿಸಲು, ಭಾರತೀಯ ಅಂಚೆ ಇಲಾಖೆಯಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಇಂಡಿಯಾ ಪೆÇೀಸ್ಟ್ ಪೇಮೆಂಟ್ಸ್ ಬ್ಯಾಂಕ್, ಪಿಂಚಣಿದಾರರ ಮನೆ ಬಾಗಿಲಿನಲ್ಲಿ, ಡಿಜಿಟಲ್ ಪ್ರಮಾಣ ಪತ್ರವನ್ನು ಸಲ್ಲಿಸಲು ವ್ಯವಸ್ಥೆ ಮಾಡಿದೆ.
ಧಾರವಾಡ: ಪಿಂಚಣಿದಾರರು ವೈಯಕ್ತಿಕವಾಗಿ ಜೀವನ ಪ್ರಮಾಣ ಪತ್ರವನ್ನು ಸಲ್ಲಿಸುವ ಸಮಯದಲ್ಲಿ ಎದುರಿಸುತ್ತಿರುವ ತೊಂದರೆಗಳನ್ನು ತಪ್ಪಿಸಲು, ಭಾರತೀಯ ಅಂಚೆ ಇಲಾಖೆಯಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಇಂಡಿಯಾ ಪೆÇೀಸ್ಟ್ ಪೇಮೆಂಟ್ಸ್ ಬ್ಯಾಂಕ್, ಪಿಂಚಣಿದಾರರ ಮನೆ ಬಾಗಿಲಿನಲ್ಲಿ, ಡಿಜಿಟಲ್ ಪ್ರಮಾಣ ಪತ್ರವನ್ನು ಸಲ್ಲಿಸಲು ವ್ಯವಸ್ಥೆ ಮಾಡಿದೆ.
ಇದನ್ನೂ ಓದಿ: ವಿರಾಟ್ ಮಣಿಕಟ್ಟಿನಲ್ಲಿರುವ ಈ ಸಾಧನವೇ 50ನೇ ಶತಕದ ದಾಖಲೆಗೆ ಕಾರಣ! ಏನಿದು ಅಂತಾ ತಿಳಿದರೆ ಶಾಕ್ ಆಗೋದು ಖಚಿತ
ಕರ್ನಾಟಕ ರಾಜ್ಯ ಸರ್ಕಾರದ ಪಿಂಚಣಿದಾರರಿಗೆ, ಕುಟುಂಬ ಪಿಂಚಣಿದಾರರಿಗೆ ಡಿಜಿಟಲ್ ಸರ್ಟಿಫಿಕೇಟ್ (ಡಿಎಲ್‍ಸಿ) ಸೇವೆಗಳನ್ನು ಸುಲಭವಾಗಿ ಒದಗಿಸಲು, ಕರ್ನಾಟಕ ರಾಜ್ಯ ಸರ್ಕಾರದ ಖಜಾನೆ ಆಯುಕ್ತರೊಂದಿಗೆ ಭಾರತೀಯ ಅಂಚೆ ಇಲಾಖೆಯ ಅಡಿಯಲ್ಲಿ ಬರುವ ಇಂಡಿಯಾ ಪೆÇೀಸ್ಟ್ ಪೇಮೆಂಟ್ಸ್ ಬ್ಯಾಂಕ್ ತಿಳುವಳಿಕೆ ಪತ್ರ (ಎಂಒಯು) ಕ್ಕೆ ಸಹಿ ಹಾಕಿದೆ. ತಿಳುವಳಿಕೆ ಪತ್ರದ (ಎಂಒಯು) ಅಡಿಯಲ್ಲಿ, ಐಪಿಪಿಬಿಯು ನವೆಂಬರ್ 1 ರಿಂದ ನವೆಂಬರ್ 30, 2023 ರವರೆಗಿನ ಮಸ್ಟರಿಂಗ್ ಅವಧಿಯಲ್ಲಿ 5.4 ಲಕ್ಷ ಕರ್ನಾಟಕ ಸರಕಾರದ ಪಿಂಚಣಿದಾರರು, ಕುಟುಂಬ ಪಿಂಚಣಿದಾರರಿಗೆ ಡಿಎಲ್‍ಸಿ ಸೇವೆಗಳನ್ನು ಒದಗಿಸುತ್ತದೆ.
ಇದನ್ನೂ ಓದಿ: ಟೀಂ ಇಂಡಿಯಾದ ಈ ಆಟಗಾರನೇ ಜಗತ್ತಿನ ಅತ್ಯುತ್ತಮ ಬೌಲರ್: ಕೀವೀಸ್ ನಾಯಕ ಕೇನ್ ವಿಲಿಯಮ್ಸನ್ ಶ್ಲಾಘಿಸಿದ್ದು ಯಾರನ್ನು?
ಪಿಂಚಣಿದಾರರು ತಮ್ಮ ಡಿಜಿಟಲ್ ಲೈಫ್ ಪ್ರಮಾಣ ಪತ್ರವನ್ನು ಕೆಲವೇ ನಿಮಿಷಗಳಲ್ಲಿ ಪೆÇೀಸ್ಟ್‍ಮ್ಯಾನ್ ಮೂಲಕ ಆಧಾರ ಸಂಖ್ಯೆ, ಮೊಬೈಲ್ ಸಂಖ್ಯೆ, ಪಿಪಿಒ ಸಂಖ್ಯೆ ಮತ್ತು ಪಿಂಚಣಿದಾರರ ಬ್ಯಾಂಕ್ ಖಾತೆಯ ವಿವರಗಳೊಂದಿಗೆ ತಮ್ಮ ಬಯೋಮೆಟ್ರಿಕ್ (ಬೆರಳಚ್ಚು) ವೆರಿಫೈ ಮಾಡಿ ಸಲ್ಲಿಸಬಹುದು.
ಇಂಡಿಯಾ ಪೆÇೀಸ್ಟ್ ಪೇಮೆಂಟ್ಸ್ ಬ್ಯಾಂಕ್ (ಐಪಿಪಿಬಿ) ಅನ್ನು ಸೆಪ್ಟೆಂಬರ್ 01, 2018 ರಂದು ರಾಷ್ಟ್ರವ್ಯಾಪಿ ಪ್ರಾರಂಭಿಸಲಾಯಿತು. ಐಪಿಪಿಬಿ ಯ ಸೇವೆಗಳು ಈಗಾಗಲೇ ಸೇರ್ಪಡೆಗೊಂಡಿರುವ 8 ಕೋಟಿ ಗ್ರಾಹಕರಿಗೆ ಹಾಗೂ ಇನ್ನಿತರರಿಗೆ, ದೇಶಾದ್ಯಂತ 1,36,000 ಅಂಚೆ ಕಚೇರಿಗಳ ಮೂಲಕ ಲಭ್ಯವಿದೆ. ಕರ್ನಾಟಕದಲ್ಲಿ ಐಪಿಪಿಬಿ ಯು 31 ಶಾಖೆಗಳನ್ನು ಹೊಂದಿದ್ದು, ಅದರ ಜೊತೆಗೆ 9500 ಕ್ಕೂ ಹೆಚ್ಚು ಪೆÇೀಸ್ಟ್ ಮ್ಯಾನ್‍ಗಳು ಅವರ ದೈನಂದಿನ ಡೆಲಿವರಿ ಬೀಟ್‍ನಲ್ಲಿ ಬ್ಯಾಂಕಿಂಗ್ ಸೇವೆಗಳನ್ನು ನೀಡಲು ಸ್ಮಾರ್ಟ್ ಫೋನ್ ಮತ್ತು ಬಯೋಮೆಟ್ರಿಕ್ ಸಾಧನಗಳನ್ನು ಹೊಂದಿದ್ದಾರೆ.
ಕರ್ನಾಟಕ ಸರ್ಕಾರದ ಪಿಂಚಣಿದಾರರು, ಕುಟುಂಬ ಪಿಂಚಣಿದಾರರು ತಮ್ಮ ಹತ್ತಿರದ ಅಂಚೆ ಕಛೇರಿಯಲ್ಲಿ ಅಥವಾ ಪೆÇೀಸ್ಟ್ ಮ್ಯಾನ್ ಮೂಲಕ ಕೇವಲ 70 ರೂ. ಗಳ (ಜಿಎಸ್‍ಟಿ ಸೇರಿದಂತೆ) ಶುಲ್ಕ ನೀಡಿ ಈ ಸೌಲಭ್ಯವನ್ನು ಪಡೆದು ತಮ್ಮ ಡಿಜಿಟಲ್ ಪ್ರಮಾಣಪತ್ರವನ್ನು ಸಲ್ಲಿಸಬೇಕೆಂದು ಹಿರಿಯ ಅ0ಚೆ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.