ದಿನೇಶ್ ಗುಂಡೂರಾವ್ ಒಬ್ಬ ಅಯೋಗ್ಯ: ಎಸ್.ಟಿ.ಸೋಮಶೇಖರ್

ಕಾಂಗ್ರೆಸ್ ಪಕ್ಷದಲ್ಲಿ ದಿನೇಶ್ ಗುಂಡೂರಾವ್ ಅವರು ಸರಿ ಇದ್ದಿದ್ದರೆ ನಾವೇಕೆ ಪಕ್ಷ ಬಿಡುತ್ತಿದ್ದೆವು, ಅವನು ಸಿದ್ದರಾಮಯ್ಯ ಚೇಲಾ ಎಂದು ಸೋಮಶೇಖರ್ ಏಕವಚನದಲ್ಲಿ ಕಿಡಿಕಾರಿದ್ದಾರೆ.

Updated: Sep 27, 2019 , 03:24 PM IST
ದಿನೇಶ್ ಗುಂಡೂರಾವ್ ಒಬ್ಬ ಅಯೋಗ್ಯ: ಎಸ್.ಟಿ.ಸೋಮಶೇಖರ್

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಅನರ್ಹಗೊಂಡಿರುವ ಶಾಸಕ ಸೋಮಶೇಖರ್, ದಿನೇಶ್ ಗುಂಡೂರಾವ್ ಒಬ್ಬ ಅಯೋಗ್ಯ, ಸಿದ್ದರಾಮಯ್ಯ ಅವರ ಚೇಲಾ ಎಂದು ಏಕವಚನದಲ್ಲಿ ಕಿಡಿಕಾರಿದ್ದಾರೆ.

ಖಾಸಗಿ ವಾಹಿನಿಯೊಂದಿಗೆ ಮಾತನಾಡಿರುವ ಸೋಮಶೇಖರ್, ಕಾಂಗ್ರೆಸ್ ಪಕ್ಷದಲ್ಲಿ ದಿನೇಶ್ ಗುಂಡೂರಾವ್ ಅವರು ಸರಿ ಇದ್ದಿದ್ದರೆ ನಾವೇಕೆ ಪಕ್ಷ ಬಿಡುತ್ತಿದ್ದೆವು, ಅವನು ಸಿದ್ದರಾಮಯ್ಯ ಚೇಲಾ. ಕಾಂಗ್ರೆಸ್ ಪಕ್ಷ ಸಿದ್ದರಾಮಯ್ಯ, ದಿನೇಶ್ ಗುಂಡೂರಾವ್, ಕೃಷ್ಣಭೈರೇಗೌಡ, ರಿಜ್ವಾನ್ ಅರ್ಷಾದ್‍ದು. ಇದು ಸಿದ್ದರಾಮಯ್ಯನ ಕಾಂಗ್ರೆಸ್ಸಾ? ಓರಿಜನಲ್ ಕಾಂಗ್ರೆಸ್ಸಾ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮುಂದುವರೆದು ಮಾತನಾಡುತ್ತಾ, "ದಿನೇಶ್ ಗುಂಡೂರಾವ್ ನನ್ನ ಜೊತೆ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಆಗಿದ್ದವನು. ಅವರಪ್ಪ ಮುಖ್ಯಮಂತ್ರಿ ಆಗಿದ್ದರಿಂದ ಇವನು ಇಷ್ಟು ಎತ್ತರಕ್ಕೆ ಬೆಳೆಯಲು ಸಾಧ್ಯವಾಯ್ತು. ನಾವೇನು ಕಾಂಗ್ರೆಸ್ ಪಕ್ಷಕ್ಕೆ ರಾಜಿನಾಮೆ ಕೊಟ್ಟಿರಲಿಲ್ಲ. ಕೇವಲ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೆವು. ಅದನ್ನೇ ತಪ್ಪಾಗಿ ಭಾವಿಸಿ ನಮ್ಮ ಬಗ್ಗೆ ಮಾತನಾಡುತ್ತಾರೆ. ಒಬ್ಬ ಕೆಪಿಸಿಸಿ ಅಧ್ಯಕ್ಷನಾಗಿ ಯಾವ ಪದಬಳಕೆ ಮಾಡಬೇಕು ಎಂಬ ಕಾಮನ್ ಸೆನ್ಸ್ ಕೂಡ ಇಲ್ಲ" ಎಂದು ಕಿಡಿಕಾರಿದರು.