ಕಫ್‌ ಸಿರಫ್‌ ದುರಂತ; ರಾಜ್ಯದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ : ದಿನೇಶ ಗುಂಡೂರಾವ್‌

ಮುನ್ನೆಚ್ವರಿಕೆ ಕ್ರಮವಾಗಿ ಎಲ್ಲಾ ಕಂಪನಿಗಳ ಕಾಫ್‌ ಸಿರಫ್‌ಗಳ ಮಾದರಿ ಸಂಗ್ರಹಿಸಿ ತಪಾಸಣೆಗೆ ಒಳಪಡಿಸಲಾಗುತ್ತಿದೆ. 

Written by - Chetana Devarmani | Last Updated : Oct 6, 2025, 03:42 PM IST
  • ಸಿರಫ್‌ಗಳ ಮಾದರಿ ಸಂಗ್ರಹಿಸಿ ತಪಾಸಣೆ, ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ.
  • 5 ವರ್ಷದೊಳಗಿನ ಮಕ್ಕಳಿಗೆ ಸಿರಫ್‌ ಕೊಡುವಾಗ ಎಚ್ಚರಿಕೆಗೆ ಸಲಹೆʼ
  • ʼಡ್ರಗ್ಸ್‌ ಕಲಬೆರಕೆʼ ಬಗ್ಗೆ ಈ ಹಿಂದೆಯೇ ಕೇಂದ್ರಕ್ಕೆ ಪತ್ರ ಬರೆಯಲಾಗಿತ್ತು
ಕಫ್‌ ಸಿರಫ್‌ ದುರಂತ; ರಾಜ್ಯದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ : ದಿನೇಶ ಗುಂಡೂರಾವ್‌

ಬೆಂಗಳೂರು : ದೇಶದ ಬೇರೆ ರಾಜ್ಯಗಳಲ್ಲಿ ಕಾಫ್‌ ಸಿರಫ್‌ ದುರಂತ ಸಂಭವಿಸಿದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕಟ್ಟೆಚ್ಚರ ವಹಿಸಲಾದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಹಾಸನದ ಚೆನ್ನರಾಯಪಟ್ಟಣದಲ್ಲಿ ಇಂದು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಚಿವರು, ಕಳಪೆ ಕಾಫ್ ಸಿರಫ್ ಕರ್ನಾಟಕ ರಾಜ್ಯದಲ್ಲಿ ಸರಬರಾಜು ಆಗಿಲ್ಲ ಎಂದು ಸ್ಪಷ್ಟಪಡಿಸಿದರು.

Add Zee News as a Preferred Source

ಮುನ್ನೆಚ್ವರಿಕೆ ಕ್ರಮವಾಗಿ ಎಲ್ಲಾ ಕಂಪನಿಗಳ ಕಾಫ್‌ ಸಿರಫ್‌ಗಳ ಮಾದರಿ ಸಂಗ್ರಹಿಸಿ ತಪಾಸಣೆಗೆ ಒಳಪಡಿಸಲಾಗುತ್ತಿದೆ. ರಾಜ್ಯದಲ್ಲಿಯ ಕಾಫ್‌ ಸಿರಫ್‌ಗಳ ಟೆಸ್ಟ್‌ಗೆ ಇಲಾಖೆ ಮುಂಜಾಗ್ರತ ಕ್ರಮ ಕೈಗೊಂಡಿದೆ. ರಾಜ್ಯದಲ್ಲಿ ಈ ಮೊದಲಿನಿಂದಲು ಔಷಧಿ ನಿಯಂತ್ರಣ ಇಲಾಖೆ ಎಚ್ಚರಿಕೆ ವಹಿಸಿದೆ. ಹೆಚ್ಚಿನ ಔಷಧಿಗಳನ್ನು ತಪಾಸಣೆಗೆ ಒಳಪಡಿಸುತ್ತಿದ್ದು, ಇದರಲ್ಲಿ ಕರ್ನಾಟಕ ದೇಶದಲ್ಲೇ ಮುಂಚೂಣಿಯಲ್ಲಿದೆ ಎಂದು ತಿಳಿಸಿದರು.

ರಾಜ್ಯ ಆರೋಗ್ಯ ಇಲಾಖೆಯಿಂದ ಕಾಫ್‌ ಸಿರಫ್‌ ಬಳಕೆ ಬಗ್ಗೆ ಮಾರ್ಗಸೂಚಿ ಬಿಡುಗಡೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ.  ಈಗಾಗಲೇ ಬೇರೆ ಬೇರೆ ಕಂಪನಿಗಳ ಎಲ್ಲಾ ಕಾಫ್‌ ಸಿರಫ್‌ಗಳ ಮಾದರಿ ಸಂಗ್ರಹಿಸಿ ತಪಾಸಣೆ ನಡೆಸಲಾಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. 

ಕರ್ನಾಟಕದಲ್ಲಿ ಸರಬರಾಜು ಆಗಿಲ್ಲ: 

ಬೇರೆ ರಾಜ್ಯಗಳಲ್ಲಿ ಮಕ್ಕಳ ಸಾವಿಗೆ ಕಾರಣವಾಗಿರುವ ಕಾಫ್‌ ಸಿರಫ್‌ ಕರ್ನಾಟಕದಲ್ಲಿ ಸರಬರಾಜು ಆಗಿಲ್ಲ. ಹಾಗಾಗಿ ಇಲ್ಲಿ ಯಾವುದೇ ಅನಾಹುತ ನಡೆದಿಲ್ಲ ಎಂದು ಸ್ಪಷ್ಟಪಡಿಸಿದ ಆರೋಗ್ಯ ಸಚಿವರು, ಔಷಧಿ ತಯಾರಿಕಾ ಘಟಕಗಳ ಬೇಜವಾಬ್ದಾರಿಯಿಂದಾಗಿ ತಮಿಳುನಾಡು, ಮಧ್ಯಪ್ರದೇಶ, ಒಡಿಶಾ, ರಾಜಸ್ಥಾನ, ಪುದುಚೆರಿ ಭಾಗದಲ್ಲಿ ಈ ದುರ್ಘಟನೆ ಸಂಭವಿಸಿದೆ ಎಂದು ಹೇಳಿದರು.

ಪೋಷಕರು ಎಚ್ಚರಿಕೆ ವಹಿಸಬೇಕು: 

ರಾಜ್ಯದಲ್ಲಿ 5 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಯಾವುದೇ ಸಿರಫ್‌ ಕುಡಿಸುವಾಗಲೂ ಪೋಷಕರು ಬಹಳ ಎಚ್ಚರಿಕೆ ವಹಿಸಬೇಕು. ಕಾಫ್‌ ಸಿರಫ್‌ ಸೇವನೆ ಕಡಿಮೆ ಮಾಡಬೇಕೆಂದು ಸಲಹೆ ನೀಡಿದರು.

ಕೇಂದ್ರಕ್ಕೆ ಪತ್ರ ಬರೆದಿದ್ದೆ: ಕೆಲ ಔಷಧಿಗಳ ಕಲಬೆರಕೆ, ನಕಲಿ ಔಷಧಿ ಮತ್ತು ತಪಾಸಣೆ ಕುರಿತಂತೆ ಈ ಹಿಂದೆಯೇ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದೆ. ಯಾವುದೇ ಡ್ರಗ್ಸ್‌ ಕಲಬೆರಕೆ ಎಂದು ಗೊತ್ತಾದಲ್ಲಿ ತ್ವರಿತವಾಗಿ ದೇಶಾದ್ಯಂತ ಮಾಹಿತಿ ರವಾನೆ-ವಿನಿಮಯಕ್ಕೆ ಪ್ರತ್ಯೇಕ ʼವೆಬ್‌ಸೈಟ್‌ʼ ರಚಿಸುವಂತೆ ಕೇಂದ್ರ ಆರೋಗ್ಯ ಸಚಿವರ ಗಮನ ಸೆಳೆದಿದ್ದೆ. ಔಷಧಿಗಳ ಕಲಬೆರಿಕೆ ವಿಚಾರದಲ್ಲಿ ಕೇಂದ್ರ ಸರ್ಕಾರ ಕಠಿಣ ಕಾನೂನನ್ನು ಜಾರಿಗೆ ತರುವ ಅವಶ್ಯಕತೆ ಇದೆ.  ಅಲ್ಲದೇ ರಾಜ್ಯ ರಾಜ್ಯಗಳ ನಡುವೆ ಮಾಹಿತಿ ಸಿಗುವಂತಹ ವ್ಯವಸ್ಥೆ ಜಾರಿಗೆ ತರುವತ್ತ ಕೇಂದ್ರ ಸರ್ಕಾರ ಮುಂದಾಗಬೇಕು ಎಂದು ಆರೋಗ್ಯ ಸಚಿವ ಗುಂಡೂರಾವ್‌ ಇದೇ ವೇಳೆ ಹೇಳಿದರು.

ಇದನ್ನೂ ಓದಿ: ರಾಜ್ಯದಲ್ಲಿ ಯುಪಿ ಮಾದರಿಯ ಆಡಳಿತ ಬೇಕು-ಯತ್ನಾಳ್

ಇದನ್ನೂ ಓದಿ: ಸಿಎಂ ಕುರ್ಚಿ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡುತ್ತೆ: ಸಚಿವ ಸತೀಶ್ ಜಾರಕಿಹೊಳಿ

About the Author

Chetana Devarmani

" ಚೇತನಾ ದೇವರಮನಿ ಅವರು ಪ್ರಸ್ತುತ ʻಜೀ ಕನ್ನಡ ನ್ಯೂಸ್‌ʼ ವೆಬ್‌ನಲ್ಲಿ Senior Sub Editor ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಚೇತನಾ ದೇವರಮನಿ ಅವರು ಅನುಭವಿ ಪತ್ರಕರ್ತರಾಗಿದ್ದು, ಮಾಧ್ಯಮ ಕ್ಷೇತ್ರದಲ್ಲಿ 7 ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿದ್ದಾರೆ. ಅವರು ಸಿನಿಮಾ, ಕ್ರೈಂ, ಆರೋಗ್ಯ, ಬ್ಯುಸಿನೆಸ್, ಆಧ್ಯಾತ್ಮಿಕ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. 2018ರಲ್ಲಿ ʻರಾಮೋಜಿ ಗ್ರೂಪ್‌ʼನ ಈಟಿವಿ ಭಾರತ ಕರ್ನಾಟಕ ಸಂಸ್ಥೆಯಲ್ಲಿ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು ಮೂರು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಬಳಿಕ 2021 ರಲ್ಲಿ ʻಇಂಡಿಯಾ ಡಾಟ್‌ ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ ತಂಡ ಸೇರಿದರು. ...Read More

Trending News