ಬೆಂಗಳೂರು: ಬಿಜೆಪಿ ನಾಯಕರು ಬರ ಅಧ್ಯಯನ ಪ್ರವಾಸ ಎಂಬ ಹೊಸ ನಾಟಕ ಶುರುಮಾಡಿದ್ದಾರೆ. ಈ ಪ್ರವಾಸದಿಂದ BJP ನಾಯಕರು ಏನು ಕಡಿದು ಕಟ್ಟೆ ಹಾಕಲಿದ್ದಾರೆ? ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪ್ರಶ್ನಿಸಿದ್ದಾರೆ. ಈ ಬಗ್ಗೆ ಶುಕ್ರವಾರ ಸರಣಿ ಟ್ವೀಟ್ ಮಾಡಿರುವ ಅವರು, ಬಿಜೆಪಿ ನಾಯಕರ ಬರ ಅಧ್ಯಯನ ಪ್ರವಾಸದ ವಿರುದ್ಧ ಕಿಡಿಕಾರಿದ್ದಾರೆ.
‘ಈಗಾಗಲೇ ಕೇಂದ್ರದ ಅಧಿಕಾರಿಗಳ ತಂಡ ರಾಜ್ಯಕ್ಕೆ ಬಂದು ಬರ ಅಧ್ಯಯನ ಮಾಡಿ ಹೋಗಿದೆ. ಕೇಂದ್ರದ ತಂಡ ರಾಜ್ಯಕ್ಕೆ ಬಂದು ಹೋದದಷ್ಟೆ ಗೊತ್ತು. ಆದರೆ ಈವರೆಗೂ ಬರದ ಬಗ್ಗೆ ಕೇಂದ್ರದ ತಂಡ ಏನು ವರದಿ ನೀಡಿದೆ ಎಂಬ ಸುಳಿವೇ ಇಲ್ಲ. ರಾಜ್ಯ BJP ನಾಯಕರು ಇಲ್ಲಿ ಬರ ಪ್ರವಾಸದ ನಾಟಕ ಮಾಡುವ ಬದಲು ಕೇಂದ್ರದಿಂದ ವರದಿ ಕೊಡಲು ಒತ್ತಾಯಿಸಬಹುದಲ್ಲವೆ?’ ಎಂದು ಪ್ರಶ್ನಿಸಿದ್ದಾರೆ.
1@BJP4Karnataka ನಾಯಕರು ಬರ ಅಧ್ಯಯನ ಪ್ರವಾಸ ಎಂಬ ಹೊಸ ನಾಟಕ ಶುರುಮಾಡಿದ್ದಾರೆ. ಈ ಪ್ರವಾಸದಿಂದ BJP ನಾಯಕರು ಏನು ಕಡಿದು ಕಟ್ಟೆ ಹಾಕಲಿದ್ದಾರೆ?
ಈಗಾಗಲೇ ಕೇಂದ್ರದ ಅಧಿಕಾರಿಗಳ ತಂಡ ರಾಜ್ಯಕ್ಕೆ ಬಂದು ಬರ ಅಧ್ಯಯನ ಮಾಡಿ ಹೋಗಿದೆ.
ಕೇಂದ್ರದ ತಂಡ ರಾಜ್ಯಕ್ಕೆ ಬಂದು ಹೋದದಷ್ಟೆ ಗೊತ್ತು.
ಆದರೆ ಈವರೆಗೂ ಬರದ ಬಗ್ಗೆ ಕೇಂದ್ರದ ತಂಡ ಏನು ವರದಿ…— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) November 3, 2023
ಇದನ್ನೂ ಓದಿ: ಕೇರಳ ಸಿಎಂಗೆ 7ನೇ ತರಗತಿ ವಿದ್ಯಾರ್ಥಿಯಿಂದ ಜೀವ ಬೆದರಿಕೆ ಕರೆ..!
2@BJP4Karnataka ನಾಯಕರು ಬರ ಅಧ್ಯಯನ ಪ್ರವಾಸ ಮಾಡಿ ಏನು ವರದಿ ನೀಡಲಿದ್ದಾರೆ?
ರಾಜ್ಯದಲ್ಲಿ ಬರ ಇದೆ ಎಂದು ವರದಿ ನೀಡುವರೋ ಅಥವಾ ಇಲ್ಲ ಎಂದು ವರದಿ ನೀಡುವರೋ?
ರಾಜ್ಯ BJP ನಾಯಕರೇನು ಜನಪರ ಕಾಳಜಿಯಿಂದ ಈ ಅಧ್ಯಯನ ಪ್ರವಾಸ ಮಾಡುತ್ತಿಲ್ಲ.
ಬದಲಿಗೆ ಕಳೆದು ಹೋಗಿರುವ ತಮ್ಮ ಅಸ್ತಿತ್ವ ಉಳಿಸಿಕೊಳ್ಳಲು ಬರ ಅಧ್ಯಯನ ಪ್ರವಾಸದ ಪ್ರಹಸನ…
— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) November 3, 2023
‘ಬಿಜೆಪಿ ನಾಯಕರು ಬರ ಅಧ್ಯಯನ ಪ್ರವಾಸ ಮಾಡಿ ಏನು ವರದಿ ನೀಡಲಿದ್ದಾರೆ? ರಾಜ್ಯದಲ್ಲಿ ಬರ ಇದೆ ಎಂದು ವರದಿ ನೀಡುವರೋ ಅಥವಾ ಇಲ್ಲ ಎಂದು ವರದಿ ನೀಡುವರೋ? ರಾಜ್ಯ BJP ನಾಯಕರೇನು ಜನಪರ ಕಾಳಜಿಯಿಂದ ಈ ಅಧ್ಯಯನ ಪ್ರವಾಸ ಮಾಡುತ್ತಿಲ್ಲ. ಬದಲಿಗೆ ಕಳೆದು ಹೋಗಿರುವ ತಮ್ಮ ಅಸ್ತಿತ್ವ ಉಳಿಸಿಕೊಳ್ಳಲು ಬರ ಅಧ್ಯಯನ ಪ್ರವಾಸದ ಪ್ರಹಸನ ಮಾಡುತ್ತಿದ್ದಾರಷ್ಟೇ’ ಎಂದು ದಿನೇಶ್ ಗುಂಡೂರಾವ್ ಟೀಕಿಸಿದ್ದಾರೆ.
3#NDRF ನಿಯಮದ ಅನುಸಾರ ಕೇಂದ್ರ ಬರ ಪರಿಹಾರದ ಹಣ ಬಿಡುಗಡೆ ಮಾಡಬೇಕು.
ಅದರೆ ಇಲ್ಲಿಯವರೆಗೂ ಪರಿಹಾರದ ಹಣ ಬಿಡುಗಡೆಯಾಗಿಲ್ಲ.
ಯಾಕೆಂದರೆ ಮೋದಿ ಸರ್ಕಾರಕ್ಕೆ ಕರ್ನಾಟಕ ನೆನಪಾಗುವುದು ಚುನಾವಣಾ ಸಂದರ್ಭದಲ್ಲಿ ಮಾತ್ರ.
ಕರ್ನಾಟಕ ಸಂಕಷ್ಟದಲ್ಲಿದ್ದಾಗಲೆಲ್ಲಾ ಕೇಂದ್ರ ಕೈ ಕೊಡುವುದು ಸಾಮಾನ್ಯ ಸಂಗತಿ.@BJP4Karnataka ನಾಯಕರು ಬರ…
— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) November 3, 2023
‘#NDRF ನಿಯಮದ ಅನುಸಾರ ಕೇಂದ್ರ ಬರ ಪರಿಹಾರದ ಹಣ ಬಿಡುಗಡೆ ಮಾಡಬೇಕು. ಅದರೆ ಇಲ್ಲಿಯವರೆಗೂ ಪರಿಹಾರದ ಹಣ ಬಿಡುಗಡೆಯಾಗಿಲ್ಲ. ಯಾಕೆಂದರೆ ಪ್ರಧಾನಿ ಮೋದಿ ಸರ್ಕಾರಕ್ಕೆ ಕರ್ನಾಟಕ ನೆನಪಾಗುವುದು ಚುನಾವಣಾ ಸಂದರ್ಭದಲ್ಲಿ ಮಾತ್ರ. ಕರ್ನಾಟಕ ಸಂಕಷ್ಟದಲ್ಲಿದ್ದಾಗಲೆಲ್ಲಾ ಕೇಂದ್ರ ಕೈ ಕೊಡುವುದು ಸಾಮಾನ್ಯ ಸಂಗತಿ. ಬಿಜೆಪಿ ನಾಯಕರು ಬರ ಅಧ್ಯಯನಕ್ಕಾಗಿ ರಾಜ್ಯ ಪ್ರವಾಸ ಮಾಡುವುದು ಬಿಟ್ಟು ದೆಹಲಿ ಪ್ರವಾಸ ಮಾಡಲಿ. ಆಗಲಾದರೂ ಕೇಂದ್ರ ಪರಿಹಾರ ಹಣ ಬಿಡುಗಡೆ ಮಾಡಬಹುದೇನೋ’ ಎಂದು ಕುಟುಕಿದ್ದಾರೆ.
ಇದನ್ನೂ ಓದಿ: Hasanamba Temple: ವ್ಹೀಲ್‌ಚೇರ್‌ನಲ್ಲಿ ಬಂದು ಹಾಸನಾಂಬೆ ದರ್ಶನ ಪಡೆದ ಮಾಜಿ ಪ್ರಧಾನಿ ದೇವೇಗೌಡರು
65 ಪ್ರಾಥಮಿಕ ಆರೋಗ್ಯ ಕೇಂದ್ರ!
ಕಲ್ಯಾಣ ಕರ್ನಾಟಕದಲ್ಲಿ ಸುಮಾರು 65 ಪ್ರಾಥಮಿಕ ಆರೋಗ್ಯ ಕೇಂದ್ರಗಳ ಕೊರತೆ ಇದ್ದು, ಈ ಅಸಮತೋಲನ ಸರಿಪಡಿಸಲು ನಮ್ಮ ಸರ್ಕಾರ ಬದ್ಧವಾಗಿದೆ.
ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯ ಸಹಯೋಗದೊಂದಿಗೆ 65 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಪ್ರಸಕ್ತ ವರ್ಷದಿಂದಲೇ ಪ್ರಾರಂಭಿಸಲು ಯೋಜಿಸಲಾಗಿದೆ.
ರಾಜ್ಯದ ಎಲ್ಲಾ ಜಿಲ್ಲಾ ಆಸ್ಪತ್ರೆಗಳು, ತಾಲ್ಲೂಕು…
— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) November 3, 2023
‘ಕಲ್ಯಾಣ ಕರ್ನಾಟಕದಲ್ಲಿ ಸುಮಾರು 65 ಪ್ರಾಥಮಿಕ ಆರೋಗ್ಯ ಕೇಂದ್ರಗಳ ಕೊರತೆ ಇದ್ದು, ಈ ಅಸಮತೋಲನ ಸರಿಪಡಿಸಲು ನಮ್ಮ ಸರ್ಕಾರ ಬದ್ಧವಾಗಿದೆ. ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯ ಸಹಯೋಗದೊಂದಿಗೆ 65 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಪ್ರಸಕ್ತ ವರ್ಷದಿಂದಲೇ ಪ್ರಾರಂಭಿಸಲು ಯೋಜಿಸಲಾಗಿದೆ. ರಾಜ್ಯದ ಎಲ್ಲಾ ಜಿಲ್ಲಾ ಆಸ್ಪತ್ರೆಗಳು, ತಾಲೂಕು ಆಸ್ಪತ್ರೆಗಳು, ಸಮುದಾಯ ಆರೋಗ್ಯ ಕೇಂದ್ರಗಳ ಕಟ್ಟಡಗಳನ್ನು ದುರಸ್ತಿ ಮಾಡುವುದು ನಮ್ಮ ಆದ್ಯತೆಗಳಲ್ಲಿ ಪ್ರಮುಖವಾಗಿದೆ’ ಎಂದು ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.