Assembly session: ಬಿಜೆಪಿ ನಾಯಕರಿಗೆ ಬಹಿರಂಗ ಸವಾಲ್ ಹಾಕಿದ ಸಚಿವ ದಿನೇಶ್ ಗುಂಡೂರಾವ್

9 ವರ್ಷಗಳಲ್ಲಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ರಾಜ್ಯಕ್ಕೆ ಏನು ಕೊಟ್ಟಿದೆ ಎಂಬುದರ ಬಗ್ಗೆ ನೀವು ಅಂಕಿ ಅಂಶ ನೀಡಿ. ಏಲ್ಲೆಲ್ಲಿ ಅನ್ಯಾಯ ಆಗಿದೆ ಎಂಬ ಅಂಕಿ ಅಂಶಗಳ ಸಮೇತ ಚರ್ಚೆ ನಡೆಸಲು ನಾವು ಸಿದ್ಧರಿದ್ದೇವೆ ಎಂದು ಸಚಿವ ದಿನೇಶ್ ಗುಂಡೂರಾವ್ ಬಹಿರಂಗ ಸವಾಲ್ ಹಾಕಿದ್ದಾರೆ.

Written by - Prashobh Devanahalli | Edited by - Puttaraj K Alur | Last Updated : Jul 14, 2023, 03:05 PM IST
  • ಕೇಂದ್ರವು ಕರ್ನಾಟಕಕ್ಕೆ ಕೊಡಬೇಕಾಗಿದ್ದನ್ನೂ ಕೊಡದಿದ್ದಾಗ ಅನ್ಯಾಯ ಅನ್ನದೆ ಏನನ್ನಬೇಕು?
  • ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆ ಆಗಿರುವ ನಿರ್ಮಲಾ ಸೀತಾರಾಮನ್ ರಾಜ್ಯಕ್ಕೆ ಮೋಸವಾಗಿದೆ
  • ಬಿಜೆಪಿ ನಾಯಕರಿಗೆ ಬಹಿರಂಗ ಸವಾಲು ಹಾಕಿದ ಸಚಿವ ದಿನೇಶ್ ಗುಂಡೂರಾವ್
Assembly session: ಬಿಜೆಪಿ ನಾಯಕರಿಗೆ ಬಹಿರಂಗ ಸವಾಲ್ ಹಾಕಿದ ಸಚಿವ ದಿನೇಶ್ ಗುಂಡೂರಾವ್ title=
ಬಿಜೆಪಿ ನಾಯಕರಿಗೆ ಬಹಿರಂಗ ಸವಾಲ್!

ಬೆಂಗಳೂರು: ಅಕ್ಕಿ ವಿಚಾರ ಒಂದೇ ಅಲ್ಲ. ಕರ್ನಾಟಕಕ್ಕೆ ಸಿಗಬೇಕಾದ ಸ್ಪೆಷಲ್ ಗ್ರಾಂಟ್ಸ್‍ಗೂ ಕೇಂದ್ರ ಹಣಕಾಸು ಸಚಿವರು ಅಡ್ಡಿಪಡಿಸಿದ್ದಕ್ಕೆ ನಿಮ್ಮ ಉತ್ತರ ಏನು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಬಿಜೆಪಿ ನಾಯಕರನ್ನು ಪ್ರಶ್ನಿಸಿದ್ದಾರೆ‌. ವಿಧಾನ ಸಭೆಯಲ್ಲಿ ರಾಜ್ಯಪಾಲರ ವಂದನಾ ನಿರ್ಣಯದ ಮೇಲಿನ ಚರ್ಚೆ ವೇಳೆ ಮಾತನಾಡಿದ ಅವರು, ಬಿಜೆಪಿ ನಾಯಕರನ್ನು ತರಾಟೆಗೆ ತೆಗೆದುಕೊಂಡರು.

ಪ್ರಧಾನಿ ಮೋದಿಯವರು ಹಾಗೂ ಕೇಂದ್ರ ಬಿಜೆಪಿ ಸರ್ಕಾರದಿಂದ ರಾಜ್ಯಕ್ಕೆ ಅನ್ಯಾಯವಾಗ್ತಿದೆ ಎಂಬದರ ಬಗ್ಗೆ ಕಾಂಗ್ರೆಸ್ ಟೀಕೆ ಮಾಡುವುದನ್ನು ಬಿಡಲಿ ಎಂಬ ಬಿಜೆಪಿ ನಾಯಕರ ವಾದಗಳಿಗೆ ಪ್ರತಿಕ್ರಿಯಿಸಿದ ಸಚಿವ ದಿನೇಶ್ ಗುಂಡೂರಾವ್, ಕೇಂದ್ರ ಸರ್ಕಾರ ಅನ್ಯಾಯ ಮಾಡ್ತಿರೋದು ಕಣ್ಮುಂದೆ ಇರುವಾಗ ನೀವು ಏಕೆ ಕೇಂದ್ರ ಬಿಜೆಪಿ ನಾಯಕರ ಮುಂದೆ ಬಾಯಿ ಬಿಡ್ತಿಲ್ಲ ಎಂದು ಪ್ರಶ್ನಿಸಿದರು.

ಇದನ್ನೂ ಓದಿ: ಭಕ್ತರ ಹರ್ಷೋದ್ಗಾರಗಳ ನಡುವೆ ಮಾರಿ ಮೂರ್ತಿ ನಿಮಜ್ಜನ

ಜಿಎಸ್‍ಟಿಯಲ್ಲಿ ರಾಜ್ಯಕ್ಕೆ ಆಗುವ ನಷ್ಠ ಪರಿಹಾರವಾಗಿ 15ನೇ ಹಣಕಾಸು ಆಯೋಗ ಕರ್ನಾಟಕಕ್ಕೆ 5495 ಕೋಟಿ ರೂ. ಹಣವನ್ನು ವಿಶೇಷ ಅನುದಾನವನ್ನಾಗಿ ನೀಡಲು ವರದಿಯಲ್ಲಿ ಹೇಳಿತ್ತು. ಆದರೆ ಈ ಸ್ಷೆಷಲ್ ಗ್ರಾಂಟ್ಸ್ ಕೊಡುವ ಕುರಿತು ಮರುಪರಿಶೀಲನೆ ನಡೆಸುವಂತೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಆಯೋಗಕ್ಕೆ ಪತ್ರ ಬರೆದು ರಾಜ್ಯಕ್ಕೆ ಸಿಗಬೇಕಾದ ಅನುದಾನಕ್ಕೆ ಅಡ್ಡಿಯಾದರು. ನಮ್ಮ ರಾಜ್ಯದಿಂದ ರಾಜ್ಯಸಭೆಗೆ ಆಯ್ಕೆ ಆಗಿರುವ ನಿರ್ಮಲಾ ಸೀತಾರಾಮನ್ ಅವರು ಹಣಕಾಸು ಸಚಿವರಾಗಿ ಕರ್ನಾಟಕಕ್ಕೆ ಸಹಾಯ ಮಾಡುವ ಬದಲು ಅಡ್ಡಿಪಡಿಸುವ ಕೆಲಸ ಮಾಡಿದ್ದಾರೆ. ಇದನ್ನು ಅನ್ಯಾಯ ಅನ್ನದೇ ಏನನ್ನಬೇಕು ಎಂದು ಬಿಜೆಪಿ ನಾಯಕರಿಗೆ ದಿನೇಶ್ ಗುಂಡೂರಾವ್ ಕುಟುಕಿದರು.

ಈ ಬಗ್ಗೆ ಪ್ರಶ್ನಿಸಿದರೆ ಬಿಜೆಪಿ ನಾಯಕರು ಬಾಯಿ ಬಿಡ್ತಿಲ್ಲ ಏಕೆ? ನಮ್ಮದೇ ರಾಜ್ಯದಿಂದ ಆಯ್ಕೆ ಆಗಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ನೀವು ಪ್ರಶ್ನಿಸಿ ರಾಜ್ಯಕ್ಕೆ ಸಿಗಬೇಕಾದ ಗ್ರಾಂಟ್ಸ್ ಕೊಡಿಸಬಹುದಿತ್ತು. ಆದರೆ ನೀವು ಬಾಯಿ ಬಿಡ್ತಿಲ್ಲ. 9 ವರ್ಷಗಳಲ್ಲಿ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ರಾಜ್ಯಕ್ಕೆ ಏನು ಕೊಟ್ಟಿದೆ ಎಂಬುದರ ಬಗ್ಗೆ ನೀವು ಅಂಕಿ ಅಂಶಗಳನ್ನು ನೀಡಿ. ಏಲ್ಲೆಲ್ಲಿ ಅನ್ಯಾಯ ಆಗಿದೆ ಎಂಬ ಅಂಕಿ ಅಂಶಗಳ ಸಮೇತ ಚರ್ಚೆ ನಡೆಸಲು ನಾವು ಸಿದ್ಧರಿದ್ದೇವೆ ಎಂದು ಇದೇ ವೇಳೆ ಸಚಿವ ದಿನೇಶ್ ಗುಂಡೂರಾವ್ ಬಿಜೆಪಿ ನಾಯಕರಿಗೆ ಬಹಿರಂಗ ಸವಾಲ್ ಹಾಕಿದರು.

ಇದನ್ನೂ ಓದಿ: ಮೊಟ್ಟೆ ವಿಚಾರ ಕ್ಯಾಬಿನೆಟ್ ನಲ್ಲಿ ಪ್ರಸ್ತಾಪ ಮಾಡುತ್ತೇನೆ- ಲಕ್ಷ್ಮಿ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News