ಕೆಪಿಸಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ದಿನೇಶ್ ಗುಂಡುರಾವ್
ಬೆಂಗಳೂರು: ದಿನೇಶ್ ಗುಂಡು ರಾವ್ ಬುಧವಾರದಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ (ಕೆಪಿಸಿಸಿ) ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡರು.
ಈ ವೇಳೆ ರಾಜ್ಯದ ಉಪಮುಖ್ಯಮಂತ್ರಿಯಾದ ನಂತರ ಕೆಪಿಸಿಸಿ ಅಧ್ಯಕ್ಷ ಪದವಿಗೆ ಸುಮಾರು 8 ವರ್ಷಗಳ ಕಾಲ ಈ ಹುದ್ದೆಯನ್ನು ಯಶಸ್ವಿಯಾಗಿ ನಿರ್ವಹಿಸಿ ಜಿ ಪರಮೇಶ್ವರ್ ಅವರು ರಾಜೀನಾಮೆ ನೀಡಿದ್ದರು. ಇದರಿಂದ ಆ ಹುದ್ದೆ ಖಾಲಿ ಉಳಿದಿತ್ತು. ಈಗ ಪಕ್ಷವನ್ನು ಯುವಕರ ಬಳಿ ಕೊಂಡೊಯ್ಯುವ ನಿಟ್ಟಿನಲ್ಲಿ ಕಾಂಗ್ರೆಸ್ ಮುಖ್ಯಸ್ಥ ರಾಹುಲ್ ಗಾಂಧೀ ಯವರು ಈಗ ದಿನೇಶ್ ಗುಂಡುರಾವ್ ಅವರಿಗೆ ಮಣೆ ಹಾಕಿದ್ದಾರೆ.
ಮಾಜಿ ಮುಖ್ಯಮಂತ್ರಿ ಗುಂಡುರಾವ್ ಅವರ ಪುತ್ರ ರಾಗಿರುವ ದಿನೇಶ್ ಇಂಜನಿಯರ್ ಪದವಿಧರ ರಾಗಿರುವ ಅವರು ಕಾಂಗ್ರೆಸ್ ಪಕ್ಷದ ಕಾರ್ಯಾಧ್ಯಕ್ಷರಾಗಿಯೂ ಅವರು ಕಾರ್ಯನಿರ್ವಹಿಸಿದ್ದಾರೆ ಅಲ್ಲದೆ ರಾಷ್ಟ್ರೀಯ ಮಟ್ಟದಲ್ಲಿ ಕಾಂಗ್ರೆಸ್ ಪಕ್ಷದ ವಕ್ತಾರರು ಆಗಿದ್ದಾರೆ.
ಕಳೆದ ವಾರ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ದಿನೇಶ್ ಗುಂಡು ರಾವ್ ಅವರನ್ನು ಕೆಪಿಸಿಸಿ ಅಧ್ಯಕ್ಷರಾಗಿ ನೇಮಕ ಮಾಡಿದ್ದರು. ದಿನೇಶ್ ಗುಂಡು ರಾವ್ ಅವರು ಬೆಂಗಳೂರಿನ ಗಾಂಧಿನಗರ ಕ್ಷೇತ್ರದಿಂದ ಐದು ಬಾರಿಯ ಶಾಸಕರಾಗಿದ್ದಾರೆ.