ಬೆಂಗಳೂರು : ಆರೋಗ್ಯ ವಿಮೆಯ ಮೇಲಿನ ಶೇ 18 ರಷ್ಟು ಜಿ.ಎಸ್.ಟಿಯನ್ನ ಮರು ಪರಿಶೀಲಿಸುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಒತ್ತಾಯಿಸಿದ್ದಾರೆ. ಈ ಬಗ್ಗೆ ಪ್ರಧಾನಿ ಮೋದಿಯವರಿಗೆ ಪತ್ರ ಬರೆದಿರುವ ಆರೋಗ್ಯ ಸಚಿವರು, ಸೆಪ್ಟೆಂಬರ್ 9 ರಂದು ಸಭೆ ಸೇರಲಿರುವ GST ಕೌನ್ಸಿಲ್‌ಗೆ ಮಧ್ಯಮ ಮತ್ತು ಕಡಿಮೆ ಆದಾಯದ ಪಾಲಿಸಿದಾರರಿಗೆ ಆರೋಗ್ಯ ವಿಮೆಯ ಮೇಲಿನ 18% ತೆರಿಗೆಯನ್ನು ಮರು ಪರಿಶೀಲಿಸುವಂತೆ ಶಿಫಾರಸು ಮಾಡಲು ಮನವಿ ಮಾಡಿದ್ದಾರೆ. 


COMMERCIAL BREAK
SCROLL TO CONTINUE READING

ಆರೋಗ್ಯ ವಿಮೆ ಮೇಲೂ ಶೇ 18 ರಷ್ಟು ಜಿಎಸ್.ಟಿ ತೆರಿಗೆ ಹಾಕುವುದು ಮಧ್ಯಮ ಹಾಗೂ ಕೆಳ ಮಧ್ಯಮ ವರ್ಗದವರ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ. ಹೆಚ್ಚಿನ ತೆರಿಗೆಯಿಂದಾಗಿ ಹೆಲ್ತ್ ಇನ್ಸೂರೆನ್ಸ್ ಪ್ರೀಮಿಯಂ ದುಬಾರಿಯಾಗಿದ್ದು, ಜನಸಾಮಾನ್ಯರಿಗೆ ಕೈಗೆಟುಕುವ ದರದಲ್ಲಿ ಸಿಗುತ್ತಿಲ್ಲ.ಬಹುತೇಕ ಮಧ್ಯಮ ವರ್ಗದವರು ಇಂದು ಆರೋಗ್ಯ ವಿಮೆಗಳಿಂದ ದೂರವೇ ಉಳಿಯುತ್ತಿದ್ದಾರೆ.ಆದರೆ  ವೈದ್ಯಕೀಯ ತುರ್ತು ಪರಿಸ್ಥಿತಿಗಳ ಸಂದರ್ಭಗಳಲ್ಲಿ ಆರೋಗ್ಯ ವಿಮೆಯ ರಕ್ಷಣೆ ಸಿಗದೆ ಇಡೀ ಕುಟುಂಬ ವರ್ಗವೇ ಆರ್ಥಿಕ ಸಂಕಷ್ಟಕ್ಕೆ ಸಿಲುಕುವುದನ್ನ ನಾವು ಕಾಣುತ್ತಿದ್ದೇವೆ ಎಂದು ಸಚಿವ ದಿನೇಶ್ ಗುಂಡೂರಾವ್ ತಮ್ಮ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. 


ಇದನ್ನೂ ಓದಿ : ಮೆಟ್ರೋ ಪ್ರಯಾಣಿಕರೇ ಗಮನಿಸಿ !ಹಸಿರು ಮಾರ್ಗದ ಮೆಟ್ರೋ ರೈಲು ಸೇವೆಯಲ್ಲಿ‌ ವ್ಯತ್ಯಯ !ಬದಲಾದ ಸಮಯವನ್ನು ಒಮ್ಮೆ ಗಮನಿಸಿ


ಸಾರ್ವತ್ರಿಕ ಆರೋಗ್ಯ ರಕ್ಷಣೆಗೆ ಸರ್ಕಾರಗಳು ಸತತ ಪ್ರಯತ್ನಗಳನ್ನ ಮುಂದುವರಿಸಿವೆ.ದೇಶದಲ್ಲಿ ಆಯುಷ್ಮಾನ್ ಭಾರತ್ ಯೋಜನೆ ಜಾರಿಗೆ ಬರುವ ಮೊದಲೇ ಕರ್ನಾಟಕದಲ್ಲಿ ನಾವು 2018 ರಲ್ಲೇ ಆರೋಗ್ಯ ಕರ್ನಾಟಕ ಯೋಜನೆಯನ್ನ ಜಾರಿಗೊಳಿಸಿದ್ದೆವು.ಕೇಂದ್ರ ಸರ್ಕಾರವು "2047 ರ ವೇಳೆಗೆ ಸಾರ್ವತ್ರಿಕ ವಿಮಾ ಕವರೇಜ್" ಗುರಿಯೊಂದಿಗೆ ರಾಷ್ಟ್ರವ್ಯಾಪಿ ಮಿಷನ್ ಪ್ರಾರಂಭಿಸಿದೆ ಆದರೆ  ಆರೋಗ್ಯ ವಿಮೆಯನ್ನು ಸಂಪೂರ್ಣವಾಗಿ ನಿರಾಕರಿಸುವಷ್ಟು ಹೆಚ್ಚಿನ ದರದಲ್ಲಿ ತೆರಿಗೆ ವಿಧಿಸುವುದು ವಿಪರ್ಯಾಸ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.‌


2017 ರಿಂದಲೂ ಆರೋಗ್ಯ ವಿಮೆಯ ಮೇಲೆ ಶೇ 18 ರಷ್ಟು ಜಿಎಸ್.ಟಿ ಹೇರಲಾಗಿದೆ. GST ಯ ಹೆಚ್ಚಿನ ದರವು ಪ್ರೀಮಿಯಂಗಳ ವೆಚ್ಚದ ಮೇಲೆ ನೇರ ಪರಿಣಾಮ ಬೀರುತ್ತದೆ.  ಪರಿಣಾಮ ಆರೋಗ್ಯ ವಿಮೆಯು ಈಗ ಹೆಚ್ಚು ದುಬಾರಿಯಾಗಿದೆ. ಹೆಚ್ಚುತ್ತಿರುವ ವೆಚ್ಚವು ಆರ್ಥಿಕ ದುರ್ಬಲ ವರ್ಗಗಳ ಮೇಲೆ ವಿನಾಶಕಾರಿ ಪರಿಣಾಮವನ್ನು ಬೀರುತ್ತದೆ.ಅವರಿಗೆ ಪ್ರೀಮಿಯಂನಲ್ಲಿ ಸ್ವಲ್ಪ ಹೆಚ್ಚಳವಾದರೂ ಅದನ್ನು ಖರೀದಿಸಲು ಸಾಧ್ಯವಿಲ್ಲ. ಹೀಗಾಗಿ ಆರೋಗ್ಯ ವಿಮೆಗಳನ್ನ ಜನರು ತಿರಸ್ಕರಿಸುತ್ತಿದ್ದಾರೆ.ವಿಮಾ ರಕ್ಷಣೆಯಿಂದ ವಂಚಿತರಾಗುತ್ತಿದ್ದಾರೆ ಎಂದು ಸಚಿವ ದಿನೇಶ್ ಗುಂಡೂರಾವ್ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. 


ಇದನ್ನೂ ಓದಿ : ಕೋವಿಡ್ ಭ್ರಷ್ಟಾಚಾರ: ಕುನ್ಹಾ ವರದಿ ಅಧ್ಯಯನಕ್ಕೆ ಅಧಿಕಾರಿಗಳ ಸಮಿತಿ


ಆರೋಗ್ಯ ವಿಚಾರಗಳಲ್ಲಿ ತೆರಿಗೆ ನೀತಿಗಳು ಜನಪರವಾಗಿರಬೇಕು.ತೆರಿಗೆ ಪ್ರಮಾಣವನ್ನ ಕಡಿತಗೊಳಿಸುವುದರಿಂದ ಹೆಚ್ಚಿನ ಸಂಖ್ಯೆಯ ಜನರು ಆರೋಗ್ಯ ವಿಮೆಯ ರಕ್ಷಣೆ ಪಡೆಯುವಂತೆ ಪ್ರೋತ್ಸಾಹಿಸಬಹುದು. ಇದರಿಂದ ಮಧ್ಯಮ ಹಾಗೂ ಕೆಳ ಮಧ್ಯಮ ವರ್ಗಗಳ ಆರ್ಥಿಕ ಸ್ಥಿತಿಯನ್ನು ಕಾಪಾಡಬಹುದಾಗಿದೆ.2047 ರ ವೇಳೆಗೆ ಯುನಿವರ್ಸಲ್ ಇನ್ಸೂರೆನ್ಸ್ ಎಂಬ ಆಶಯವನ್ನ ಸಾಧಿಸುವತ್ತ ಧನಾತ್ಮಕ ಹೆಜ್ಜೆ ಇಡಬೇಕೆಂದು ಸಚಿವ ದಿನೇಶ್ ಗುಂಡೂರಾವ್ ಪತ್ರದಲ್ಲಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ