ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್(ಕೆಪಿಸಿಸಿ) ಅಧ್ಯಕ್ಷರಾಗಿ ದಿನೇಶ್ ಗುಂಡುರಾವ್ ಅವರನ್ನು ನೇಮಕ ಮಾಡಿ ಎಐಸಿಸಿ ಅಧಿಕೃತ ಘೋಷಣೆ ಹೊರಡಿಸಿದೆ.
Congratulations to Shri @dineshgrao on being appointed KPCC President by Congress President Shri @RahulGandhi.
Congratulations also to Shri @eshwar_khandre on been appointed KPCC Working President. pic.twitter.com/VojzfA92RL
— Karnataka Congress (@INCKarnataka) July 4, 2018
ಪೈಪೋಟಿಯ ನಡುವೆಯೂ ದಿನೇಶ್ ಗುಂಡೂರಾವ್ ಗೆ ಅಧ್ಯಕ್ಷ ಸ್ಥಾನ ನೀಡಿರುವ ಎಐಸಿಸಿ ರಾಹುಲ್ ಗಾಂಧಿ, ಈಶ್ವರ ಖಂಡ್ರೆಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸ್ಥಾನ ನೀಡುವ ಮೂಲಕ ಉತ್ತರ ಕರ್ನಾಟಕ ಮತ್ತು ಲಿಂಗಾಯತ ಸಮುದಾಯಕ್ಕೆ ಪ್ರಾತಿನಿಧ್ಯ ನೀಡಿದ್ದಾರೆ.
ಕೊಟ್ಟ ಮಾತು ಉಳಿಸಿಕೊಂಡ ರಾಹುಲ್
ದಿನೇಶ್ ಗುಂಡೂರಾವ್ ಗೆ ಸಚಿವ ಸ್ಥಾನ ಕೈತಪ್ಪಿದಾಗಲೇ ಕೆಪಿಸಿಸಿ ಅಧ್ಯಕ್ಷ ಗಿರಿ ನೀಡುವ ಭರವಸೆ ನೀಡಿದ್ದ ರಾಹುಲ್ ಗಾಂಧಿ ಕೆಪಿಸಿಸಿ ಅಧ್ಯಕ್ಷರಾಗಿ ದಿನೇಶ್ ಗುಂಡುರಾವ್ ಅವರನ್ನು ನೇಮಕ ಮಾಡಿ ನೀಡಿದ್ದ ಭರವಸೆಯನ್ನು ಉಳಿಸಿಕೊಂಡಿದ್ದಾರೆ.