ಬೆಂಗಳೂರು: ಬೆಂಗಳೂರಿನ ಬಿಇಎಲ್ ಲೇಔಟ್ ಬಳಿ ಹೊಸದಾಗಿ ಆರಂಭಿಸಲಾಗಿರುವ ಸುಕೂನ್ ಮಾನಸಿಕ ಆರೋಗ್ಯ ಕೇಂದ್ರಕ್ಕೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಚಾಲನೆ ನೀಡಿದರು.


COMMERCIAL BREAK
SCROLL TO CONTINUE READING

ಇದನ್ನು ಓದಿ : The Rulers : ಸಂವಿಧಾನದ ಮಹತ್ವ ಸಾರುತ್ತದೆ ಈ ಸಿನಿಮಾ , "ದಿ ರೂಲರ್ಸ್" ಚಿತ್ರದ ಟ್ರೈಲರ್ ಬಿಡುಗಡೆ


ಬಳಿಕ ಮಾತನಾಡಿದ ಅವರು, ಇಂದಿನ ಯುವಕರು ಒತ್ತಡದ ನಡುವೆ ಕೆಲಸ ನಿರ್ವಹಿಸುತ್ತಾ ಮಾನಸಿಕವಾಗಿ ತಮ್ಮ ಸ್ಥಿಮತವನ್ನು ಕಳೆದುಕೊಳ್ಳುವ ಸಾಧ್ಯತೆ ಇದೆ.ಜತೆಗೆ ಖಿನ್ನತೆಗೆ ಒಳಗಾಗಿ ಸಾವನ್ನಪ್ಪುವ ಸಾಧ್ಯತೆ ಇದೆ. ಈ ಹಿನ್ನಲೆಯಲ್ಲಿ ಅವರಿಗೆ ಉತ್ತಮ ಮಾನಸಿಕ ಚಿಕಿತ್ಸೆ ಅಗತ್ಯವಾಗಿದೆ.ಯುವಕರು ಪಡೆ ಸುಕೂನ್ ಚಿಕಿತ್ಸಾ ಕೇಂದ್ರವನ್ನು ಆರಂಭಿಸಿರುವುದು ಶ್ಲಾಘನೀಯ.ಇಂತಹ ಮಾನಸಿಕ ಚಿಕಿತ್ಸಾ ಕೇಂದ್ರಗಳು ಎಲ್ಲ ಜಿಲ್ಲಾ ಕೇಂದ್ರ ಗಳಲ್ಲಿ ಪ್ರಾರಂಭವಾಗಬೇಕು, ರಾಜ್ಯ ಸರ್ಕಾರ ನಿಮ್ಹಾನ್ಸ್ ಸಹಯೋಗದಲ್ಲಿ ಎಲ್ಲ ಜಿಲ್ಲಾ ಆಸ್ಪತ್ರೆಯ ಕೇಂದ್ರಗಳಲ್ಲಿ ಮಾನಸಿಕ ಕೇಂದ್ರಗಳನ್ನು ಆರಂಭಿಸಲಾಗಿದೆ. ಮುಂದಿನ ದಿನಗಳಲ್ಲಿ ಕರ್ನಾಟಕ ನಿಮ್ಹಾನ್ಸ್ ನೇತೃತ್ವದಲ್ಲಿ ಮೆಂಟಲ್ ಹೆಲ್ತ್ ಹಬ್ ಆಗಿ ಪರಿವರ್ತನೆಗೊಳ್ಳಲಿದೆ ಎಂದು ಹೇಳಿದರು.


ಇದನ್ನು ಓದಿ : ‘ವೆಂಕ್ಯಾ’ನಿಗೆ ಸಿಕ್ತು ಸಿದ್ಧಾರೂಢರ ಆಶೀರ್ವಾದ.. ಸೆಟ್ಟೇರಿತು ಪವನ್ ಒಡೆಯರ್ ನಿರ್ಮಾಣದ ಮತ್ತೊಂದು ಸಿನಿಮಾ


ಮಾನಸಿಕ ತಜ್ಞ ಡಾ.ಸತೀಶ್ ರಾಮಯ್ಯ ಮಾತನಾಡಿ,ಮಾನಸಿಕವಾಗಿ ತೊಂದರೆಗೆ ಒಳಗಾದವರಿಗೆ ಉತ್ತಮ ಚಿಕಿತ್ಸೆ ನೀಡಲು ಸುಕೂನ್ ಎಂಬ ನಾಲ್ಕನೇ ಕೇಂದ್ರವನ್ನು ಆರಂಭಿಸಲಾಗಿದೆ ಎಂದು ತಿಳಿಸಿದರು.ಸುಕೂನ್ ನಿರ್ದೇಶಕ ನಚಿಕೇತ್ ಮೊರ್ ಸೇರಿದಂತೆ ಅನೇಕರು ಭಾಗವಹಿಸಿದ್ದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.