ಕೊಪ್ಪಳ : ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್‌ಷನ್ ಸೊಸೈಟಿ, ಬೆಂಗಳೂರು ಇವರ ಅಡಿಯಲ್ಲಿ ಕೊಪ್ಪಳ ಜಿಲ್ಲಾ ಏಡ್ಸ್ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಘಟಕದ ಸಂಚಾರಿ ಐಸಿಟಿಸಿ ವಾಹನಕ್ಕೆ ಒಂದು ವಾಹನ ಚಾಲಕರ ಹುದ್ದೆಯನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ನೇರ ಸಂದರ್ಶನವನ್ನು ಫೆಬ್ರವರಿ 29ರಂದು ಬೆಳಿಗ್ಗೆ 10 ಗಂಟೆಗೆ ನಗರದ ಹಳೇ ಜಿಲ್ಲಾಸ್ಪತ್ರೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ- ಬಿಜೆಪಿ ವಿಷದ ಹೊಗೆ ಬಿಡುತ್ತದೆ ಎಂದು ಜನ ಪಕ್ಕಕ್ಕೆ ತಳ್ಳಿದರು: ಸಿಎಂ ಸಿದ್ದರಾಮಯ್ಯ


ಅಭ್ಯರ್ಥಿಗಳು 45 ವರ್ಷದೊಳಗಿರಬೇಕು. 10ನೇ ತರಗತಿ ಪಾಸ್ ಮತ್ತು ಮಾನ್ಯತಾ ಚಾಲನಾ ಪರವಾನಿಗೆ ಹೊಂದಿರಬೇಕು.ಎರಡು ವರ್ಷಗಳ ಲಘುವಾಹನ ಚಾಲನಾ ಅನುಭವವಿರುವ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ಹೆಚ್.ಐ.ವಿ ಸೋಂಕಿತ ಮತ್ತು ಪೀಡಿತ ಸಮುದಾಯದ ಅಭ್ಯರ್ಥಿಗಳು ಹಾಗೂ ಪ್ರಮುಖ ಸಮುದಾಯದವರು ಸಹ ಭಾಗವಹಿಸಬಹುದಾಗಿದೆ. ಅರ್ಹ ಅಭ್ಯರ್ಥಿಗಳು ತಮ್ಮ ಸ್ವ ವಿವರ, ಪ್ರಮಾಣ ಪತ್ರಗಳೊಂದಿಗೆ ನೇರ ಸಂದರ್ಶನಕ್ಕೆ ಹಾಜರಾಗಬೇಕು.


ಇದನ್ನೂ ಓದಿ- SSLC PUC Exam 2024: ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪರೀಕ್ಷೆ ದಿನಾಂಕ ಪ್ರಕಟ


ವೇತನ, ಅರ್ಜಿ ನಮೂನೆ ಹಾಗೂ ಅವಶ್ಯಕ ದಾಖಲೆಗಳ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಏಡ್ಸ್ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಘಟಕ, ಕೊಪ್ಪಳ ಜಿಲ್ಲಾ ಕ್ಷಯರೋಗ ನಿರ್ಮೂಲನ ಕಚೇರಿ, ಹಳೆಯ ಜಿಲ್ಲಾ ಆಸ್ಪತ್ರೆ ಆವರಣ, ಕೊಪ್ಪಳ ದೂ.ಸಂಖ್ಯೆ: 9449843232/ 9449846981 ಗೆ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.