ಆರೆಸೆಸ್ಸ್ ಕಾರ್ಯಕ್ರಮದಲ್ಲಿ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಹೆಸರು..! ಸ್ಪಷ್ಟನೆ ನೀಡಿದ ನಿರ್ದೇಶಕರು
ನಗರದಲ್ಲಿ ಜುಲೈ 16 ರಂದು ನಡೆಯಲಿರುವ ಆರೆಸ್ಸೆಸ್ ನ ಕಾರ್ಯಕ್ರಮದಲ್ಲಿ ಚಲನಚಿತ್ರ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಅವರು ಅಧ್ಯಕ್ಷರಾಗಿ ಭಾಗವಹಿಸಲಿದ್ದಾರೆ ಎನ್ನುವ ಪೋಸ್ಟರ್ ವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿರುವ ಬೆನ್ನಲ್ಲೇ ಈಗ ಈಗ ಸ್ವತಃ ಅವರೇ ಸ್ಪಷ್ಟನೆ ನೀಡಿದ್ದಾರೆ.
ಬೆಂಗಳೂರು: ನಗರದಲ್ಲಿ ಜುಲೈ 16 ರಂದು ನಡೆಯಲಿರುವ ಆರೆಸ್ಸೆಸ್ ನ ಕಾರ್ಯಕ್ರಮದಲ್ಲಿ ಚಲನಚಿತ್ರ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಅವರು ಅಧ್ಯಕ್ಷರಾಗಿ ಭಾಗವಹಿಸಲಿದ್ದಾರೆ ಎನ್ನುವ ಪೋಸ್ಟರ್ ವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿರುವ ಬೆನ್ನಲ್ಲೇ ಈಗ ಈಗ ಸ್ವತಃ ಅವರೇ ಸ್ಪಷ್ಟನೆ ನೀಡಿದ್ದಾರೆ.
ಈ ಪೋಸ್ಟರ್ ವೈರಲ್ ಆದ ಬೆನ್ನಲ್ಲೇ ಸೋಶಿಯಲ್ ಮೀಡಿಯಾದಲ್ಲಿ ನಾಗತಿಹಳ್ಳಿ ಚಂದ್ರಶೇಖರ್ ಅವರ ನಡೆಯನ್ನು ನೆಟ್ಟಿಗರು ಪ್ರಶ್ನಿಸಿದ್ದರು.
ಇದನ್ನೂ ಓದಿ: ರಾಮ್‌ಚರಣ ಮಗಳ ನಾಮಕರಣಕ್ಕೆ 24 ಕ್ಯಾರೆಟ್ ಬಂಗಾರದ ತೊಟ್ಟಿಲು ಗಿಪ್ಟ್ ನೀಡಿದ ಅಂಬಾನಿ..!
ಈ ಹಿನ್ನೆಲೆಯಲ್ಲಿ ಈಗ ಸ್ಪಷ್ಟನೆ ನೀಡಿರುವ ಅವರು ಈ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿಲ್ಲ ಎಂದು ಹೇಳಿದ್ದಾರೆ."ಈ ಸಮಾರಂಭದಲ್ಲಿ ನಾನು ಭಾಗವಹಿಸುತ್ತಿಲ್ಲ.ಅದನ್ನು ನಾನು ಸ್ಪಷ್ಟಪಡಿಸಿಯೂ ಆಮಂತ್ರಣದಲ್ಲಿ ನನ್ನ ಹೆಸರು ಅಚ್ಚಾಗಿದೆ.ಅದು ‘ಆಕಸ್ಮಿಕ’ಎಂದು ಅವರು ಕ್ಷಮೆ ಯಾಚಿಸಿದ್ದಾರೆ. ಅಲ್ಲಿಗೆ ವಿಷಯ ಮುಕ್ತಾಯಗೊಂಡಿದೆ. ಆ ದಿನಾಂಕದಂದು ನಾನು ದೂರದ ದೇಶದಲ್ಲಿ ಚಿತ್ರೀಕರಣದಲ್ಲಿರುವುದು ನನ್ನನ್ನು ಬಲ್ಲವರಿಗೆಲ್ಲ ತಿಳಿದಿದೆ" ಎಂದು ಅವರು ತಿಳಿಸಿದ್ದಾರೆ.
ಇನ್ನೂ ಮುಂದುವರೆದು ಅವರು "ನನ್ನನ್ನು ಅತ್ಯಂತ ಹತ್ತಿರದಿಂದ ಬಲ್ಲ, ನನ್ನನ್ನು ನಂಬುವ,ನನ್ನನ್ನು ಪ್ರೀತಿಸುವ, ನನ್ನನ್ನು ಬೆಳೆಸಿರುವ,ನನ್ನೊಂದಿಗೆ ಹಳ್ಳಿಯ ಕೆಲಸದಲ್ಲಿ ಕೈಜೋಡಿಸಿರುವ ಅಕ್ಕರೆಯ ಎಲ್ಲ ಮನಸ್ಸುಗಳಿಗೆ ಹೇಳುವ ಒಂದು ಮಾತು: ನಾನು ಏನಾಗಿದ್ದೀನೋ ಅದೇ ಆಗಿ ಇರುತ್ತೇನೆ. ನಾನು ಏನು ಮಾಡುತ್ತಿದ್ದೀನೋ ಅದು ಸರಿ ಇದೆ.ಅದನ್ನೇ ಮುಂದುವರೆಸುತ್ತೇನೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: ಅಮೀರ್ ಖಾನ್ ಅವರ 3 Idiots 2 ಕನ್ಫರ್ಮ್? ರಾಜು ರಸ್ತೋಗಿ ಕೊಟ್ರು ಬಿಗ್ ಅಪ್‌ಡೇಟ್!
"ತಪ್ಪು ತಿಳಿಯಲು,ತಪ್ಪು ಹರಡಲು ತುದಿಗಾಲಲ್ಲಿ ನಿಂತವರನ್ನು, ನಿತ್ಯ ಹೊಸ,ಹುಸಿ ರೋಮಾಂಚನ ಬಯಸುವ ಮಹನೀಯರನ್ನು ಮನ್ನಿಸಿ ಮುಂದೆ ಹೋಗೋಣ. ಇಲ್ಲಿ ನಾವೆಲ್ಲ ಮಾಡಲೇಬೇಕಾದ ಜನಪರ ಕೆಲಸಗಳು ಬಹಳಷ್ಟಿವೆ. ಮಾಡೋಣ. ಇನ್ನು ಮಾತು ಸಾಕು ಎಂದು ಅವರು ಆರೆಸೆಸ್ಸ್ ನ ಕಾರ್ಯಕ್ರಮದಲ್ಲಿನ ತಮ್ಮ ಉಪಸ್ಥಿತಿಯ ಬಗ್ಗೆ ಪೂರ್ಣ ವಿರಾಮ ಎಳೆದಿದ್ದಾರೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.