ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರ ಸಮಸ್ಯೆಗಳಿಗೆ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ(CM Basavaraj Bommai) ಹಾಗೂ ಸಂಬಂಧಿತ ಸಚಿವರ ಜೊತೆ ಮಾತುಕತೆ ನಡೆಸುವುದಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಭರವಸೆ ನೀಡಿದ್ದಾರೆ.


COMMERCIAL BREAK
SCROLL TO CONTINUE READING

ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ(Anganwadi Workers) ಸಂಘದ ರಾಜ್ಯ ಸಮಿತಿಯ ಮುಖಂಡರು ಸಲ್ಲಿಸಿದ ಮನವಿ ಸ್ವೀಕರಿಸಿದ ನಂತರ ಮಾತನಾಡಿದ ಅವರು, ಈ ಬಗ್ಗೆ ಮುಂದಿನ ವಿಧಾನಮಂಡಲ ಅಧಿವೇಶನದಲ್ಲಿಯೂ ಪ್ರಸ್ತಾಪ ಮಾಡುವುದಾಗಿ ತಿಳಿಸಿದ್ದಾರೆ.


ಇದನ್ನೂ ಓದಿ: ವಿಧಾನಸಭೆಯ ವಿಪಕ್ಷ ಉಪನಾಯಕನಾಗಿ ಯು.ಟಿ ಖಾದರ್ ನೇಮಕ


ಅನೇಕ ವರ್ಷಗಳಿಂದ ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳು(Anganwadi Workers Demands) ನೆನೆಗುದುಗೆ ಬಿದ್ದಿವೆ. ಅವುಗಳನ್ನು ಈಡೇರಿಸಲೇಬೇಕು. ರಾಜ್ಯದಲ್ಲಿ 47.37 ಲಕ್ಷದಷ್ಟು ಅಂಗನವಾಡಿ ಕಾರ್ಯಕರ್ತೆಯರಿದ್ದು, ಕೋವಿಡ್‌ ಸೋಂಕಿನ ಕಾಲದಲ್ಲಿ ಜೀವದ ಹಂಗು ತೊರೆದು ಕೆಲಸ ಮಾಡಿದ್ದಾರೆ. ಆ ವಿಷಮ ಪರಿಸ್ಥಿತಿಯಲ್ಲಿ 59 ಕಾರ್ಯಕರ್ತೆಯರು ಮಾರಕ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಇನ್ನೂ ಅನೇಕರು ಸೋಂಕಿನ ಸಾವಿನ ದವಡೆಯಿಂದ ಪಾರಾಗಿದ್ದಾರೆಂದು ಕುಮಾರಸ್ವಾಮಿ ಹೇಳಿದರು.


ರಾಜ್ಯ ಸರ್ಕಾರ ಮಾನವೀಯ ನೆಲೆಗಟ್ಟಿನಲ್ಲಿ ಅಂಗನವಾಡಿ ಕಾರ್ಯಕರ್ತೆಯರ(Anganwadi Workers) ಸಮಸ್ಯೆಗಳನ್ನು ಬಗೆಹರಿಸಬೇಕು. ಗ್ರಾಮೀಣ ಮಟ್ಟದಲ್ಲಿ ಪರಿಣಾಮಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದಾರೆ. ಇವರನ್ನು ನಿರ್ಲಕ್ಷ್ಯ ಮಾಡುವುದು ಬೇಡ. ಅವರ ಗೌರವ ಧನ ಹೆಚ್ಚಳ ಮಾಡುವುದರ ಜೊತೆಗೆ NPS ವಂಚಿತರಾಗಿ ನಿವೃತ್ತಿಯಾದ ಎಲ್ಲರಿಗೂ ಪರಿಹಾರ ನೀಡಬೇಕು. ಅದಕ್ಕೆ ಅಗತ್ಯವಾದ 339.49 ಲಕ್ಷ ರೂ.ಗಳನ್ನು ರಾಜ್ಯ ಬಜೆಟ್‌ʼನಲ್ಲಿ ತೆಗೆದಿರಿಸಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.


ಇದನ್ನೂ ಓದಿ: ಕರ್ನಾಟಕದ ಸೂಪರ್ ಮಾರ್ಕೆಟ್‌ಗಳಲ್ಲಿ ವೈನ್ ಮಾರಾಟಕ್ಕೆ ತಯಾರಿ ನಡೆಸುತ್ತಿದ್ದೆಯಾ ರಾಜ್ಯ ಸರ್ಕಾರ?


ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ರಾಜ್ಯ ಸಮಿತಿಯ ರಾಜ್ಯಾಧ್ಯಕ್ಷೆ ಎಸ್.ವರಲಕ್ಷ್ಮೀ ಮತ್ತಿತರರು ಬಿಡದಿಯ ಕೇತಿಗಾನಹಳ್ಳಿ ತೋಟದ ಮನೆಯಲ್ಲಿ ಮಾಜಿ ಮುಖ್ಯಮಂತ್ರಿ ಎಚ್​ಡಿಕೆ(HD Kumaraswamy)ಗೆ ಮನವಿ ಸಲ್ಲಿಸಿದರು.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.