ಮೋಡ ಬಿತ್ತನೆ ವಿಚಾರವಾಗಿ ಆರ್ಥಿಕ ಇಲಾಖೆ ಜೊತೆ ಚರ್ಚೆ ಮಾಡಿ ತೀರ್ಮಾನ: ಡಿಸಿಎಂ ಡಿ.ಕೆ. ಶಿವಕುಮಾರ್
“ರಾಜ್ಯದಲ್ಲಿ ಬರಗಾಲ ಹಿನ್ನೆಲೆಯಲ್ಲಿ ಮೋಡಬಿತ್ತನೆ ಮಾಡುವ ಬಗ್ಗೆ ನಾನು ಸಕಾರಾತ್ಮಕ ಭಾವನೆ ಹೊಂದಿದ್ದು, ಈ ವಿಚಾರವಾಗಿ ಆರ್ಥಿಕ ಇಲಾಖೆ ಅಧಿಕಾರಿಗಳ ಜೊತೆ ಚರ್ಚೆ ಮಾಡಿ ತೀರ್ಮಾನ ಮಾಡುತ್ತೇವೆ” ಎಂದು ತಿಳಿಸಿದರು.
ಬೆಳಗಾವಿ, ಡಿ.8: “ರಾಜ್ಯದಲ್ಲಿ ಬರಗಾಲ ಹಿನ್ನೆಲೆಯಲ್ಲಿ ಮೋಡಬಿತ್ತನೆ ಮಾಡುವ ಬಗ್ಗೆ ನಾನು ಸಕಾರಾತ್ಮಕ ಭಾವನೆ ಹೊಂದಿದ್ದು, ಈ ವಿಚಾರವಾಗಿ ಆರ್ಥಿಕ ಇಲಾಖೆ ಅಧಿಕಾರಿಗಳ ಜೊತೆ ಚರ್ಚೆ ಮಾಡಿ ತೀರ್ಮಾನ ಮಾಡುತ್ತೇವೆ” ಎಂದು ತಿಳಿಸಿದರು.
ಇದನ್ನೂ ಓದಿ: "ಪ್ರಧಾನಿ ಮೋದಿ ಮುಜುಗರಕ್ಕೀಡಾಗಲಿ ಎನ್ನುವ ದುರುದ್ದೇಶದಿಂದ ಯತ್ನಾಳ್ ಆರೋಪ ಮಾಡುತ್ತಿದ್ದಾರೆ"
ಚಳಿಗಾಲ ಅಧಿವೇಶನದ ವಿಧಾನಸಭೆಯ ಕಲಾಪದ ಶೂನ್ಯ ವೇಳೆಯಲ್ಲಿ ಕಾಂಗ್ರೆಸ್ ಶಾಸಕ ಪ್ರಕಾಶ್ ಕೋಳಿವಾಡ್ ಅವರು ‘ಬರಗಾಲದ ಪರಿಸ್ಥಿತಿಯಲ್ಲಿ ತುಂಗಭದ್ರಾ ಆಣೆಕಟ್ಟಿನ ಕೆಳಭಾಗದ ರೈತರ ಬೆಳೆ ನೀರು ಒದಗಿಸಬೇಕಿದೆ. ಈ ವಿಚಾರವಾಗಿ ಸಚಿವ ತಂಗಡಗಿ ಅವರಿಗೆ ಮನವಿ ಸಲ್ಲಿಸಿದಾಗ, ಆಣೆಕಟ್ಟಿನ ಒಳಹರಿವು ಹೆಚ್ಚಾದರೆ ನೀರು ಬಿಡುವುದಾಗಿ ಅವರು ಹೇಳಿದರು. ನಾನು ಹವಾಮಾನ ಇಲಾಖೆ ಹಾಗೂ ಇತರೆ ವಿಜ್ಞಾನಿಗಳ ಜತೆ ಚರ್ಚೆ ಮಾಡಿದ್ದು, ಮುಂದಿನ ನಾಲ್ಕು ದಿನಗಳಲ್ಲಿ ಉತ್ತಮ ಮೋಡಗಳಿದ್ದು, ಈ ಸಂದರ್ಭದಲ್ಲಿ ಮೋಡ ಬಿತ್ತನೆ ಮಾಡಿದರೆ ಉತ್ತಮ ಪ್ರಮಾಣದ ನೀರು ಲಭ್ಯವಾಗಲಿದೆ ಎಂದು ತಿಳಿಸಿದ್ದಾರೆ. ಹೀಗಾಗಿ ಸರ್ಕಾರ ಕೂಡಲೇ ಮೋಡ ಬಿತ್ತನೆ ಮಾಡಬೇಕು ಎಂದು ಮನವಿ ಮಾಡಿದರು.
ಇದನ್ನೂ ಓದಿ: ವಿಧಾನಸಭೆಯಲ್ಲಿ ಸಾರ್ವಕರ್ ಫೋಟೋ ತೆರವು ವಿಚಾರ
ಇದಕ್ಕೆ ಪ್ರತಿಕ್ರಿಯಿಸಿದ ನೀರಾವರಿ ಸಚಿವರಾದ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಿಷ್ಟು:
ಮೋಡ ಬಿತ್ತನೆ ವಿಚಾರವಾಗಿ ಅನೇಕ ರಾಜ್ಯಗಳಲ್ಲಿ ಪ್ರಯೋಗ ಮಾಡಲಾಗುತ್ತಿದೆ. ನಮ್ಮ ರಾಜ್ಯದಲ್ಲಿ ಹೆಚ್.ಕೆ ಪಾಟೀಲ್ ಅವರು ಸಚಿವರಾಗಿದ್ದಾಗಲೂ ಈ ಪ್ರಯೋಗ ಮಾಡಲಾಗಿತ್ತು. ರಾಜ್ಯದಲ್ಲಿ ಬರ ಪರಿಸ್ಥಿತಿ ಇದೆ. ಶಾಸಕ ಪ್ರಕಾಶ್ ಅವರು ತಮ್ಮ ಜಿಲ್ಲೆಯಲ್ಲಿ ಉಚಿತವಾಗಿ ಈ ಪ್ರಯತ್ನ ಮಾಡಿದ್ದು, ಉತ್ತಮ ಫಲಿತಾಂಶ ಬಂದಿರುವ ಬಗ್ಗೆ ವರದಿ ಇದೆ. ಈಗ ಬೇರೆ ಕಡೆಗಳಲ್ಲೂ ಇದಕ್ಕೆ ತಗುಲುವ ವೆಚ್ಚದಲ್ಲಿ (ಕಾಸ್ಟ್ ಪ್ರೈಸ್) ಈ ಮೋಡ ಬಿತ್ತನೆ ಮಾಡಲು ತಾವು ಸಿದ್ಧ ಎಂದು ಹೇಳಿದ್ದಾರೆ.
ಇದನ್ನೂ ಓದಿ: ಯತ್ನಾಳ್, ವಿಜಯೇಂದ್ರ ಸೇರಿ ಎಲ್ಲರೂ ತೀರ್ಮಾಸಿದ್ದೆವು
ಈ ವಿಚಾರದಲ್ಲಿ ಟೆಂಡರ್ ಹಾಗೂ ಇತರೆ ಪ್ರಕ್ರಿಯೆಯ ತಾಂತ್ರಿಕ ವಿಚಾರಗಳನ್ನು ಪರಿಗಣಿಸಬೇಕಾಗುತ್ತದೆ. ಇಲ್ಲದಿದ್ದರೆ ವಿರೋಧ ಪಕ್ಷಗಳು ಇದನ್ನು ನಿಮ್ಮ ಶಾಸಕರಿಗೆ ನೀಡಿದ್ದೀರಿ ಎಂದು ಪ್ರಶ್ನೆ ಮಾಡುವ ಸಾಧ್ಯತೆ ಇದೆ. ಇದಕ್ಕೆ 50 ಲಕ್ಷದಿಂದ 1 ಕೋಟಿವರೆಗೂ ವೆಚ್ಚ ತಗುಲಬಹುದು. ಈ ಬಗ್ಗೆ ಆರ್ಥಿಕ ಇಲಾಖೆ ಜತೆ ಚರ್ಚೆ ಮಾಡುತ್ತೇನೆ. ಈ ವಿಚಾರವಾಗಿ ಮತ್ತೊಮ್ಮೆ ಪ್ರಯತ್ನ ಮಾಡುವುದರಲ್ಲಿ ತಪ್ಪಿಲ್ಲ. ಈ ಬಗ್ಗೆ ನಾನು ಸಕಾರಾತ್ಮಕ ಭಾವನೆ ಹೊಂದಿದ್ದೇನೆ” ಎಂದರು.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://youtu.be/--phA9ji8NM
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.