ಹೆಚ್ ಎನ್ ವ್ಯಾಲಿ ನೀರಿನ ಮೂರನೇ ಹಂತದ ಶುದ್ದೀಕರಣದ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚೆ: ಸಚಿವ ಎನ್.ಎಸ್ ಭೋಸರಾಜು
ಹೆಚ್ ಎನ್ ವ್ಯಾಲಿ ಏತ ಯೋಜನೆಯ ಅಡಿಯಲ್ಲಿ ಚಿಕ್ಕಬಳ್ಳಾಪುರ ಹಾಗೂ ಬೆಂಗಳೂರು ಗ್ರಾಮಾಂತರ ಪ್ರದೇಶಕ್ಕೆ ಹರಿಸಲಾಗುತ್ತಿರುವ ನೀರಿನ ಮೂರನೇ ಹಂತದ ಶುದ್ದೀಕರಣ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗುವುದು ಎಂದು ಮಾನ್ಯ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಶ್ರೀ. ಎನ್.ಎಸ್ ಭೋಸರಾಜು ತಿಳಿಸಿದ್ದಾರೆ.
ಚಿಕ್ಕಬಳ್ಳಾಪುರ: ಹೆಚ್ ಎನ್ ವ್ಯಾಲಿ ಏತ ಯೋಜನೆಯ ಅಡಿಯಲ್ಲಿ ಚಿಕ್ಕಬಳ್ಳಾಪುರ ಹಾಗೂ ಬೆಂಗಳೂರು ಗ್ರಾಮಾಂತರ ಪ್ರದೇಶಕ್ಕೆ ಹರಿಸಲಾಗುತ್ತಿರುವ ನೀರಿನ ಮೂರನೇ ಹಂತದ ಶುದ್ದೀಕರಣ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗುವುದು ಎಂದು ಮಾನ್ಯ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಶ್ರೀ. ಎನ್.ಎಸ್ ಭೋಸರಾಜು ತಿಳಿಸಿದ್ದಾರೆ.
ಇಂದು ಹೆಚ್ ಎನ್ ವ್ಯಾಲಿ ಯೋಜನೆಯ ವ್ಯಾಪ್ತಿಯ ಪ್ರದೇಶಗಳಾದ ಹೆಬ್ಬಾಳ, ಹೊರಮಾವು, ಹೆಣ್ಣೂರು, ಬಾಗಲೂರು ಕೆರೆ ಮತ್ತು ಚಿಕ್ಕಬಳ್ಳಾಪುರ ಕೆರೆಯ ಹತ್ತಿರದ ಎಸ್‌ಟಿಪಿ ಜ್ಯಾಕ್‌ವೆಲ್ ಕಂ ಪಂಪ್‌ಹೌಸ್ ಹಾಗೂ ವಿತರಣಾ ತೊಟ್ಟಿಯ ಪರಿವೀಕ್ಷಣೆಯನ್ನು ನಡೆಸಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು, ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಪ್ರಾರಂಭಿಸಿದ್ದ ಕೆ.ಸಿ ವ್ಯಾಲಿ ಮತ್ತು ಹೆಚ್ ಎನ್ ವ್ಯಾಲಿ ಯೋಜನೆಗಳ ಅನುಷ್ಠಾನದಿಂದಾಗಿ ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಯ ಜನಸಾಮಾನ್ಯರು ಹಾಗೂ ರೈತರು ಬಹಳಷ್ಟು ಅನುಕೂಲ ಹೊಂದಿದ್ದಾರೆ. 800 - 900 ಅಡಿಗಳಷ್ಟ ಆಳದಲ್ಲಿ ಸಿಗುತ್ತಿದ್ದ ಅಂತರ್ಜಲ ಈಗ 150 - 200 ಅಡಿಗಳಲ್ಲೇ ಸಿಗುತ್ತಿದೆ. ಈ ಯೋಜನೆಯ ಬಗ್ಗೆ ಇಂದು ನಾನು ಭೇಟಿಯಾದ ಜನಪ್ರತಿನಿಧಿಗಳು ಹಾಗೂ ರೈತರು ಬಹಳ ಸಂತಸ ವ್ಯಕ್ತಪಡಿಸಿದ್ದಾರೆ. ಈ ಯೋಜನೆಗಳನ್ನ ಸಮರ್ಪಕವಾಗಿ ಮುಂದುವರೆಸಲು ತಗೆದುಕೊಳ್ಳಬೇಕಾದ ಕ್ರಮಗಳು, ಕೆರೆಗಳ ಒತ್ತವರಿ ತಡೆಗೆ ಬೇಕಾದ ಅಂಶಗಳು ಹಾಗೂ ಅದರ ಸುತ್ತಲಿನ ಪ್ರದೇಶಗಳ ಸ್ವಚ್ಚತೆಯನ್ನು ಕಾಪಾಡುವ ನಿಟ್ಟಿನಲ್ಲಿ ಅನುಸರಿಸಬೇಕಾದ ಅಂಶಗಳ ಬಗ್ಗೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳೊಂದಿಗೆ ಚರ್ಚಿಸಿದ್ದೇವೆ. ಹಾಗೆಯೇ, ತಗೆದುಕೊಳ್ಳಬೇಕಾದ ಅಗತ್ಯ ಕ್ರಮಗಳ ಬಗ್ಗೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇವೆ ಎಂದು ಹೇಳಿದರು.
ಕೆರೆಗಳ ಸ್ವಚ್ಚತೆಗೆ ಅಧಿಕಾರಿಗಳಿಗೆ ಸೂಚನೆ:
ಈ ಯೋಜನೆಯ ವ್ಯಾಪ್ತಿಯಲ್ಲಿ ಇನ್ನಷ್ಟು ಕೆರೆಗಳನ್ನು ಸೇರಿಸುವಂತೆ ಮನವಿಗಳು ಬಂದಿದ್ದು ಇದನ್ನ ಪರಿಶೀಲಿಸಲಾಗುವುದು. ಕೆರೆಗಳ ಒತ್ತುವರಿ ಆಗದಂತೆ ಹಾಗೂ ಕೆರೆಗಳನ್ನು ಮತ್ತು ಅದರ ಸುತ್ತಲಿನ ಪರಿಸರವನ್ನು ಸ್ವಚ್ಚವಾಗಿ ಇಡುವಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಇದನ್ನೂ ಓದಿ: ʼನಮಸ್ಕಾರ ದೇವ್ರುʼ Dr Bro ವಿಡಿಯೋ ಮಾಡಿದ್ದಕ್ಕೆ ಅಲ್ಲಿನ ಜನ ಏನ್ ಮಾಡಿದ್ರು ನೀವೆ ನೋಡಿ..!
ಮೂರನೇ ಹಂತದ ಶುದ್ದೀಕರಣ:
ಕೆ ಸಿ ವ್ಯಾಲಿ ಮತ್ತು ಹೆಚ್ ಎನ್ ವ್ಯಾಲಿ ಯೋಜನೆಯ ಅಡಿಯಲ್ಲಿ ಕೆರೆಗಳಿಗೆ ನೀರು ತುಂಬಿಸುವ ಪ್ರಮಖ ಉದ್ದೇಶ ಜಿಲ್ಲೆಗಳಲ್ಲಿ ಅಂತರ್ಜಲವನ್ನು ಹೆಚ್ಚಿಸುವುದಾಗಿದೆ. ಈ ಯೋಜನೆಯ ಫಲಶೃತಿಯಾಗಿ ಈಗಾಗಲೇ ನೀರಿನ ಅಂತರ್ಜಲ ಮಟ್ಟ ಹೆಚ್ಚಾಗಿದೆ. ಈ ನೀರನ್ನ ಕುಡಿಯಲು ಹಾಗೂ ಬೆಳೆಗಳನ್ನು ಬೆಳೆಯಲು ನೇರವಾಗಿ ಬಳಸಬಾರದ. ಈ ಯೋಜನೆಯ ಮತ್ತಷ್ಟು ಲಾಭವನ್ನು ಪಡೆಯುವ ಉದ್ದೇಶದಿಂದಾಗಿ ನೀರನ್ನ ಮೂರನೇ ಹಂತದ ಶುದ್ದೀಕರಣ ಪ್ರಕ್ರಿಯೆಗೆ ಒಳಪಡಿಸಬೇಕು ಎನ್ನುವ ಬೇಡಿಕೆ ಹಾಗೂ ಮನವಿಗಳು ಹೆಚ್ಚಾಗಿವೆ. ಈ ಹಿನ್ನಲೆಯಲ್ಲಿ ಮಾನ್ಯ ಮುಖ್ಯಮಂತ್ರಿಗಳೊಂದಿಗೆ ಮೂರನೇ ಹಂತದ ನೀರಿನ ಶುದ್ದೀಕರಣದ ಬಗ್ಗೆ ಚರ್ಚಿಸಿ ತೀರ್ಮಾನಿಸಲಾಗುವುದು ಎಂದು ಹೇಳಿದರು.
ಹೆಚ್.ಎನ್ ವ್ಯಾಲಿ ಯೋಜನೆ ಎರಡನೇ ಹಂತ - ಕಾಮಗಾರಿ ಚುರುಕುಗೊಳಿಸಲು ಸೂಚನೆ:
ಯೋಜನೆಯ ಮೊದಲ ಹಂತವಾಗಿ ಚಿಕ್ಕಬಳ್ಳಾಪುರ ಮತ್ತು ಗೌರಿಬಿದನೂರು ತಾಲ್ಲೂಕಿನ ಗ್ರಾಮಗಳ ಕೆರೆಗಳಿಗೆ ನೀರು ಹರಿಸಲಾಗಿತ್ತು. ಎರಡನೇ ಹಂತವಾಗಿ ಈ ಯೋಜನೆಯನ್ನು ಶಿಢ್ಲಘಟ್ಟ ಹಾಗೂ ಬಾಗೇಪಲ್ಲಿಗೆ ವಿಸ್ತರಣೆ ಮಾಡಲು ಟೆಂಡರ್ ಮುಗಿದು ವರ್ಕ್ ಆರ್ಡರ್ ಕೂಡಾ ನೀಡಲಾಗಿದೆ. ಆದರೆ, ಕಾಮಗಾರಿ ನಿಧಾನಗತಿಯಲ್ಲಿ ಸಾಗುತ್ತಿದೆ ಎನ್ನುವ ದೂರುಗಳ ಹೆಚ್ಚಾಗಿದ್ದ ಹಿನ್ನಲೆಯಲ್ಲಿ ಸಚಿವರು ಈ ಭಾಗದಲ್ಲಿ ಕೈಗೊಳ್ಳಲಾಗುತ್ತಿರುವ ಕಾಮಗಾರಿಗಳ ಪರಿವೀಕ್ಷಣೆ ನಡೆಸಿದರು.
ಜನವರಿ 2023 ರಲ್ಲಿ ಕಾರ್ಯಾದೇಶ ನೀಡಿದ್ದರೂ ಹೆಚ್ಚಿನ ಪ್ರಗತಿಯನ್ನು ಸಾಧಿಸದ ಗುತ್ತಿಗೆದಾರರು ಹಾಗೂ ಸಂಬಂಧಪಟ್ಟ ಆಧಿಕಾರಿಗಳನ್ನ ತರಾಟೆಗೆ ತಗೆದುಕೊಂಡರು. 18 ತಿಂಗಳ ಗಡುವಿನಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸಬೇಕು ಇಲ್ಲದಿದ್ದಲ್ಲಿ ಕಠಿಣ ಕ್ರಮ ಕೈಗೊಳ್ಳುವುದಾಗಿ ಸಚಿವರು ಎಚ್ಚರಿಕೆ ನೀಡಿದರು. ಈ ಸಂಧರ್ಭದಲ್ಲಿ ಬಾಗೇಪಲ್ಲಿ ಶಾಸಕರಾದ ಸುಬ್ಬಾರೆಡ್ಡಿ, ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳು ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯ ಜಿಲ್ಲಾಧಿಕಾರಿಗಳು ಉಪಸ್ಥಿತರಿದ್ದರು.https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.