ಬೆಂಗಳೂರು: ಆರ್.ಎಂ.ಆರ್. ಫೌಂಡೇಷನ್ ಟ್ರಸ್ಟ್ ವತಿಯಿಂದ ಬೆಂಗಳೂರಿನ ಜಯನಗರದಲ್ಲಿ ಭಾನುವಾರ ಆಯೋಜಿಸಿದ್ದ ಹಳ್ಳಿಕಾರ್ ಸಮುದಾಯದ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸಣ್ಣ- ಸಣ್ಣ ಸಮುದಾಯಗಳ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಶೇಷ ಕಾಳಜಿ ಹೊಂದಿದ್ದು, ಆ ಸಮುದಾಯಗಳನ್ನು ಮುಖ್ಯವಾಹಿನಿಗೆ ತರುವಲ್ಲಿ ಶ್ರಮಿಸುತ್ತಿದ್ದಾರೆ. ಹಳ್ಳಿಕಾರ್ ಸಮುದಾಯವನ್ನು ಹಿಂದುಳಿದ ವರ್ಗಕ್ಕೆ ಸೇರಿಸಬೇಕೆಂಬ ಸಮುದಾಯದ ಮನವಿಯನ್ನು ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗುವುದು.
ಈಗಾಗಲೇ ಸಮುದಾಯಕ್ಕೆ ಸೇರಿದ ಕಡತ ಸರ್ಕಾರದ ಮಟ್ಟದಲ್ಲಿದೆ ಎಂಬುದು ನನ್ನ ಗಮನಕ್ಕೆ ಬಂದಿದೆ. ಹಳ್ಳಿಕಾರ್ ಸಮುದಾಯವನ್ನು ಹಿಂದುಳಿದ ವರ್ಗಕ್ಕೆ ಸೇರಿಸುವುದರಿಂದ ಈ ಸಮಾಜಕ್ಕೆ ಸಾಮಾಜಿಕ ನ್ಯಾಯ ಸಿಗಲಿದೆ ಎಂಬುದು ನನ್ನ ಅಭಿಪ್ರಾಯ. ಸಮುದಾಯದ ಬೆಳವಣಿಗೆಗೆ ಸರ್ಕಾರ ಬದ್ಧವಾಗಿದ್ದು, ಎಲ್ಲ ರೀತಿಯ ನೆರವು ನೀಡಲಾಗುವುದು ಎಂದು ತಿಳಿಸಿದರು.
ಇದನ್ನೂ ಓದಿ-Ishwara Khandre: 5 ಪ್ಲಾಸ್ಟಿಕ್ ಮುಕ್ತ ನಗರಗಳ ಪೈಕಿ 2 ನಗರಗಳ ಹೆಸರು ಘೋಷಿಸಿದ ಈಶ್ವರ್ ಖಂಡ್ರೆ
ರಾಜಕೀಯ ಪ್ರಾತಿನಿಧ್ಯ ಇಲ್ಲದಂತಹ ಸಣ್ಣ ಸಮಾಜಕ್ಕೆ ಕಳೆದ ಬಜೆಟ್ ನಲ್ಲಿ ಅನುದಾನವನ್ನು ಮೀಸಲಿಟ್ಟ ಕೀರ್ತಿ ಸಿದ್ದರಾಮಯ್ಯ ಅವರದ್ದು. ದೇವರಾಜ ಅರಸು ಅವರ ಆಡಳಿತದ ಬಗ್ಗೆ ತಿಳಿದಿದ್ದೇವೆ. ಅದೇ ರೀತಿಯಲ್ಲಿ ಹೆಜ್ಜೆ ಹಾಕಿರುವವರು ಸಿದ್ದರಾಮಯ್ಯ ಎಂದು ಶ್ಲಾಘಿಸಿದರು.
ಹಳ್ಳಿಕಾರ್ ಸಮಾಜ ಸಣ್ಣದಿದ್ದರೂ ದೊಡ್ಡ ಕಾರ್ಯಕ್ರಮವನ್ನು ಮಾಡುತ್ತಿರುವುದು ಸಂತಸದ ವಿಚಾರ. ಇಂತಹ ಕಾರ್ಯಕ್ರಮ ಮಾಡುವುದರಿಂದ ಸಮಾಜಕ್ಕೆ ಶಕ್ತಿ ಬರಲಿದೆ. ಒಗ್ಗಟ್ಟು ಇದ್ದಲ್ಲಿ ಮಾತ್ರ ಆ ಸಮುದಾಯಗಳು ಬೆಳೆಯಲು ಸಾಧ್ಯ ಎಂದರು.
ಇದನ್ನೂ ಓದಿ-ಕಲಘಟಗಿ ಮಾಜಿ ಶಾಸಕ ಸಿ.ಎಂ.ನಿಂಬಣ್ಣವರ ನಿಧನ
ಹಳ್ಳಿಕಾರ್ ತಳಿಯ ಹಸುಗಳನ್ನು ಸಮಾಜಕ್ಕೆ ಕೊಟ್ಟ ಕೀರ್ತಿ ಹಳ್ಳಿಕಾರ್ ಸಮಾಜದ್ದು. ಮುಂದಿನ ದಿನಗಳಲ್ಲಿ ಈ ಸಮುದಾಯದ ವಿದ್ಯಾರ್ಥಿಗಳು ಉನ್ನತ ಹುದ್ದೆಯನ್ನು ಪಡೆಯಲಿ. ರಾಜಕೀಯವಾಗಿ, ಆರ್ಥಿಕವಾಗಿ ಹಾಗೂ ಸಮಾಜಿಕವಾಗಿ ದೊಡ್ಡ ಮಟ್ಟದಲ್ಲಿ ಬೆಳೆಯಲಿ ಎಂದು ಹಾರೈಸಿದರು.
ಕಾರ್ಯಕ್ರಮದಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಮಾಜಿ ಸಚಿವ ಎಚ್.ಎಂ.ರೇವಣ್ಣ, ವಿಧಾನ ಪರಿಷತ್ ಸದಸ್ಯರಾದ ಶ್ರೀ ಯು.ಬಿ.ವೆಂಕಟೇಶ್, ಮಾಜಿ ಶಾಸಕ ಕೆ.ಚಂದ್ರಶೇಖರ್, ಮಾಜಿ ವಿಧಾನ ಪರಿಷತ್ ಸದಸ್ಯರಾದ ಪಿ.ಆರ್. ವೆಂಕಟೇಶ್, ಆರ್.ಎಂ.ಆರ್.ಫೌಂಡೇಷನ್ ಟ್ರಸ್ಟ್ ನ ಅಧ್ಯಕ್ಷ ಕೆ.ಎಂ.ನಾಗರಾಜ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.