ಬೆಂಗಳೂರು: ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಜೂನ್ 5ರಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಅರಣ್ಯ ವಿಭಾಗದ ಸಸ್ಯಕ್ಷೇತ್ರಗಳಿಂದ ಸಾರ್ವಜನಿಕರು ಹಾಗೂ ಸಂಘ-ಸಂಸ್ಥೆಗಳಿಗೆ ಉಚಿತವಾಗಿ ಸಸಿಗಳನ್ನು ವಿತರಿಸಲು ಮುಖ್ಯ ಆಯುಕ್ತರು ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: Karanataka State Ministers: ಕಾಫಿನಾಡು ಚಿಕ್ಕಮಗಳೂರಿನಲ್ಲಿ ಯಾರ ಕೈ ಹಿಡಿಯಲಿದೆ ಮಂತ್ರಿಗಿರಿ..?


ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಅರಣ್ಯ ವಿಭಾಗದ ವಿವಿಧ ವಲಯಗಳ ವ್ಯಾಪ್ತಿಯ ಸಸ್ಯ ಕ್ಷೇತ್ರಗಳಲ್ಲಿ "8*12" ಅಳತೆಯ ವಿವಿಧ ಮರದ ಜಾತಿಯ ಸಸಿಗಳು ಲಭ್ಯವಿದ್ದು, ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಹಾಗೂ ಮಳೆಗಾಲ ಪ್ರಾರಂಭವಾಗುತ್ತಿರುವುದರಿಂದ ಬೆಂಗಳೂರು ನಗರವನ್ನು ಹಸಿರೀಕರಣ ಮಾಡಲು ಸಾರ್ವಜನಿಕರ ಸಹಯೋಗವನ್ನು ಬಯಸಿ ಸಾರ್ವಜನಿಕರಿಗೆ, ಸಂಘ ಸಂಸ್ಥೆಗಳಿಗೆ ಉಚಿತವಾಗಿ ಸಸಿಗಳನ್ನು ನೀಡಲು ಮುಂದಾಗಿದೆ. 


ಬೊಮ್ಮನಹಳ್ಳಿ, ಯಲಹಂಕ, ರಾಜರಾಜೇಶ್ವರಿ ನಗರ ಹಾಗೂ ಮಹದೇವಪುರ ವಲಯಗಳಲ್ಲಿ ಬಿಬಿಎಂಪಿ ಅರಣ್ಯ ಘಟಕ ವತಿಯಿಂದ ವಿತರಿಸಲು ಅಗತ್ಯ ವ್ಯವಸ್ಥೆಗೊಳಿಸಲಾಗಿದೆ.  ಅದರಂತೆ, ಸಾರ್ವಜನಿಕರು/ಸ್ವಯಂ ಸೇವಾ ಸಂಘ ಸಂಸ್ಥೆಗಳ ಆಸಕ್ತರು ಈ ಕೆಳಕಂಡ ಅಧಿಕಾರಿಗಳಿಗೆ ಮನವಿ ಪತ್ರಗಳನ್ನು ಸಲ್ಲಿಸಬಹುದಾಗಿದೆ.


ಇದನ್ನೂ ಓದಿ: ಸಿಇಟಿ ಪರೀಕ್ಷೆ ದಿನವೇ ಸಿದ್ದರಾಮಯ್ಯ-ಡಿಕೆ ಶಿವಕುಮಾರ್ ಪ್ರಮಾಣ ವಚನ: ವಿದ್ಯಾರ್ಥಿಗಳಿಗೆ ಟ್ರಾಫಿಕ್‌ ಸಮಸ್ಯೆ ಭೀತಿ


ಉಚಿತವಾಗಿ ಸಸಿಗಳನ್ನು ಪಡೆದುಕೊಂಡು ಸಸಿಗಳನ್ನು ನೆಟ್ಟು ಪೋಷಣೆ ಮಾಡುವಂತೆ  ಉಪ ಅರಣ್ಯ ಸಂರಕ್ಷಣಾಧಿಕಾರಿ  ರವರು ಸಾರ್ವಜನಿಕ ಪ್ರಕಟಣೆ ಮೂಲಕ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿ ಹಾಗೂ ಲಭ್ಯವಿರುವ ಸಸಿಗಳ ಸ್ಥಳದ/ಸಸ್ಯಕ್ಷೇತ್ರದ ಹಾಗೂ ಸಂಬಂಧಪಟ್ಟ ವಲಯ ಅರಣ್ಯ  ಅಧಿಕಾರಿಗಳ ಹೆಸರು ಹಾಗೂ ಮೊಬೈಲ್ ಸಂಖ್ಯೆಯ ವಿವರವುಳ್ಳ ಪ್ರತಿಯನ್ನು ಲಗತ್ತಿಸಿದೆ.  https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.