ಚಾಮರಾಜನಗರ: ಗುಂಡ್ಲುಪೇಟೆ ಪಟ್ಟಣ ವ್ಯಾಪ್ತಿಯ 27 ಮಂದಿ ಖಾಯಂ ಪೌರ ಕಾರ್ಮಿಕರಿಗೆ ಲಾಟರಿ ಎತ್ತುವ ಮೂಲಕ ನಿವೇಶನಗಳ ಹಕ್ಕು ಪತ್ರವನ್ನು ಶಾಸಕ ಎಚ್.ಎಂ.ಗಣೇಶಪ್ರಸಾದ್ ಹಂಚಿಕೆ ಮಾಡಿದರು.


COMMERCIAL BREAK
SCROLL TO CONTINUE READING

ಪುರಸಭೆ ಸಭಾ ಭವನದಲ್ಲಿ ಪೌರ ಕಾರ್ಮಿಕರ ಗೃಹ ಭಾಗ್ಯ ಯೋಜನೆಯಡಿ ಹಾಲಿ ಇರುವ 40 ಖಾಯಂ ಪೌರ ಕಾರ್ಮಿಕರ ಪೈಕಿ 27 ಮಂದಿಗೆ ಪಿಕೆಜಿಬಿ ಯೋಜನೆಯಡಿ, 21ನೇ ವಾರ್ಡ್ ನ ಹುಣಸೇತೋಪು ಬಡಾವಣೆಯ ಹೊಸೂರು ರಸ್ತೆಯಲ್ಲಿ 20/30 ಅಳತೆಯಲ್ಲಿ ಗುರುತಿಸಲಾದ ನಿವೇಶನಗಳನ್ನು ವಿತರಣೆ ಮಾಡಲಾಯಿತು.


ಇದನ್ನೂ ಓದಿ: ಪುಣೆಯಲ್ಲಿ ಝಿಕಾ ವೈರಸ್ ಪತ್ತೆ, ವೈದ್ಯ ಹಾಗೂ ಮಗಳಿಗೆ ಪಾಸಿಟಿವ್


ಈ ವೇಳೆ ಶಾಸಕ ಎಚ್.ಎಂ.ಗಣೇಶಪ್ರಸಾದ್ ಮಾತನಾಡಿ, ಪೌರ ಕಾರ್ಮಿಕರು ಕೇವಲ ಸ್ವಚ್ಛತೆ ಮಾಡಲು ಮಾತ್ರ ಸೀಮಿತವಲ್ಲ ಎಂಬುದನ್ನು ಅರಿತುಕೊಳ್ಳಬೇಕು. 27 ಮಂದಿ ಖಾಯಂ ಪೌರಕಾರ್ಮಿಕರಿಗೆ ಪುರಸಭೆಯಿಂದ ಹಂಚಿಕೆ ಮಾಡಿರುವ ನಿವೇಶನಗಳನ್ನು ಉಪಯೋಗಿಕೊಂಡು ಮನೆ ನಿರ್ಮಾಣ ಮಾಡಿಕೊಳ್ಳಿ. ಮನೆ ಸಂಖ್ಯೆ ಹೆಚ್ಚಳವಾಗುತ್ತಿದ್ದಂತೆ ಬಳಕೆ ಮಾಡುವ ವಸ್ತುಗಳು ಸಹ ಹೆಚ್ಚಾಗಿದೆ. ಆದ್ದರಿಂದ ಪಟ್ಟಣ ಸುಂದರವಾಗಲು ಇನ್ನೂ ಹೆಚ್ಚಿನ ಒತ್ತು ಕೊಟ್ಟು ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು.


ಪಟ್ಟಣದ ಅಭಿವೃದ್ಧಿಗೆ ಮಾಜಿ ಸಚಿವ ಎಚ್.ಎಸ್.ಮಹದೇವಪ್ರಸಾದ್ ಕೂಡ ಸಾಕಷ್ಟು ಕೆಲಸ ಮಾಡಿದ್ದಾರೆ. ಅವರನ್ನು ಪೌರ ಕಾರ್ಮಿಕರು ನೆನೆಪು ಮಾಡಿಕೊಳ್ಳುತ್ತಿರುವುದು ಖುಷಿಯ ಸಂಗತಿ. ಪೌರ ಕಾರ್ಮಿಕರಿಗೆ ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಕೊಡಿಸಲು ಪ್ರಾಮಾಣಿಕವಾಗಿ ಪ್ರಯತ್ನ ಮಾಡುತ್ತೇನೆ. ಜೊತೆಗೆ ಮುಂದಿನ ದಿನಗಳಲ್ಲಿ ನಿಮಗೆ ಸಹಕಾರ ನೀಡಲು ಸಿದ್ದನಿದ್ದೇನೆ ಎಂದು ಅಭಯ ನೀಡಿದರು.


ಈ ವೇಳೆ ಆಡಳಿತಾಧಿಕಾರಿ ಹಾಗೂ ಉಪ ವಿಭಾಗಾಧಿಕಾರಿ ಮಹೇಶ್, ತಹಸೀಲ್ದಾರ್ ರಮೇಶ್ ಬಾಬು‌ ಇತರರು ಹಾಜರಿದ್ದರು.


ಇದನ್ನೂ ಓದಿ: ಕರ್ನಾಟಕದ ಈ ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ.. ಧಾರಾಕಾರ ಮಳೆ ಹಿನ್ನೆಲೆ ಮುನ್ನೆಚ್ಚರಿಕೆ 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.