ಕೊಡಗು: ಕರ್ನಾಟಕದಲ್ಲಿ ಮುಂಬರುವ ದಿನಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ಆಯುಕ್ತರು ಜಿಲ್ಲೆಯಲ್ಲಿ ಹಳದಿ ಅಲರ್ಟ್ ಘೋಷಿಸಿದ್ದಾರೆ.


COMMERCIAL BREAK
SCROLL TO CONTINUE READING

ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಮುಂದಿನ ಐದು ದಿನಗಳವರೆಗೆ ಹಳದಿ ಅಲರ್ಟ್ ಘೋಷಿಸಲಾಗಿದೆ ಎಂದು ಕೊಡಗು ಜಿಲ್ಲಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 


ಕೊಡಗು ಜಿಲ್ಲಾಡಳಿತ ಸ್ಥಳೀಯ ನಿವಾಸಿಗಳು ಮತ್ತು ಪ್ರವಾಸಿಗರಿಗೆ ಅಗತ್ಯ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವಂತೆ ಕೇಳಿದೆ. ತುರ್ತು ಸಂದರ್ಭದಲ್ಲಿ ಸಹಾಯಕ್ಕಾಗಿ ಸಂಪರ್ಕಿಸಲು 08272-221077 ಮತ್ತು 8550001077 ಸಂಖ್ಯೆಗಳನ್ನು ನೀಡಲಾಗಿದೆ.


ಐಎಂಡಿ ತನ್ನ ಅಖಿಲ ಭಾರತ ಹವಾಮಾನ ಬುಲೆಟಿನ್ ನಲ್ಲಿ ಕೊಡಗು ಮಾತ್ರವಲ್ಲದೆ, ಇಡೀ ರಾಜ್ಯದಲ್ಲಿ ಜುಲೈ 21 ರವರೆಗೆ ಭಾರಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.


ಕರ್ನಾಟಕದ ಹೊರತಾಗಿ, ಕೇರಳದಲ್ಲಿ ಭಾರಿ ಮಳೆ ಬೀಳಲಿದೆ ಎಂದು  ಐಎಂಡಿ ಭವಿಷ್ಯ ನುಡಿದಿದೆ. 


ಜುಲೈ 18 ರಿಂದ 20ರವರೆಗೆ ಇಡುಕ್ಕಿ, ಮಲಪ್ಪುರಂ, ವಯನಾಡ್, ಕಣ್ಣೂರು, ಎರ್ನಾಕುಲಂ ಮತ್ತು ತ್ರಿಶೂರ್ ಈ ಆರು ಜಿಲ್ಲೆಗಳಲ್ಲಿ 'ರೆಡ್ ಅಲರ್ಟ್' ಘೋಷಿಸಲಾಗಿದೆ.