ಧಾರವಾಡ : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಆಗಿರುವ ಎ.ಎ. ಅಳವಂಡಿ ಅವರು ಚುನಾವಣಾ ಕೆಲಸಗಳನ್ನು ನಿರ್ವಹಿಸುವಲ್ಲಿ ನಿರ್ಲಕ್ಷ್ಯ ವಹಿಸಿ ಕರ್ತವ್ಯಲೋಪ ಮಾಡುವುದಲ್ಲದೇ ಚುನಾವಣಾ ಕಾರ್ಯಕ್ಕೆ ತೊಂದರೆಯುಂಟು ಮಾಡಿದ್ದರಿಂದ, ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸರ್ಕಾರಿ ಸೇವೆಯಿಂದ ಅಮಾನತ್ತುಗೊಳಿಸಿ ಜಿಲ್ಲಾ ಚುನಾವಣಾಧಿಕಾರಿಗಳಾಗಿರುವ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಆದೇಶ ಹೊರಡಿಸಿದ್ದಾರೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ರಾಹುಲ್‌ ಗಾಂಧಿಯಿಂದ ಚಿಕ್ಕೋಡಿಯಲ್ಲಿ ಭರ್ಜರಿ ಕ್ಯಾಂಪೇನ್


ಕರ್ನಾಟಕ ವಿಧಾನಸಭೆ ಸಾರ್ವತ್ರಿಕ ಚುನಾವಣೆ-2023 ಕ್ಕೆ ಸಂಬಂಧಿಸಿದಂತೆ, ಆರೋಗ್ಯ ನಿರೀಕ್ಷಣಾಧಿಕಾರಿ ಎ.ಎ. ಅಳವಂಡಿ ಅವರಿಗೆ ನಿಯೋಜಿಸಿದ್ದ ಕೆಲಸ ಕಾರ್ಯಗಳನ್ನು ಸರಿಯಾಗಿ ಮಾಡದೇ ಚುನಾವಣಾ ಕೆಲಸಗಳನ್ನು ನಿರ್ವಹಿಸುವಲ್ಲಿ ನಿರ್ಲಕ್ಷ್ಯ ವಹಿಸಿ ಕರ್ತವ್ಯಲೋಪ ಮಾಡಿದ್ದಾರೆ. ಮತ್ತು ಚುನಾವಣಾ ಕಾರ್ಯಕ್ಕೆ ತೊಂದರೆಯುಂಟು ಮಾಡಿದ್ದರಿಂದ ಪ್ರಜಾಪ್ರಾತಿನಿಧ್ಯ ಕಾಯ್ದೆ 1951 ರ ಕಲಂ 28(ಎ) ರಡಿ ಹಾಗೂ ಕರ್ನಾಟಕ ನಾಗರಿಕ ಸೇವಾ ನಿಯಮಾವಳಿಗಳು 1957 ರ ನಿಯಮ 10(1) (ಡಿ) ಪ್ರಕಾರ ಎ.ಎ. ಅಳವಂಡಿ ಅವರ ಮೇಲಿನ ಇಲಾಖಾ ವಿಚಾರಣೆ ಬಾಕಿ ಇರಿಸಿ ಸರ್ಕಾರಿ ಸೇವೆಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತ್ತುಗೊಳಿಸಿ ಆದೇಶಿಸಲಾಗಿದೆ.


ಇದನ್ನೂ ಓದಿ: ನಿಮ್ಮ ಹೊಲಸು ರಾಜಕೀಯಕ್ಕೆ ಅಪ್ಪು ಹೆಸರು ತರಬೇಡಿ: ಪ್ರಕಾಶ್ ರೈ


ಅಮಾನತ್ತು ಅವಧಿಯಲ್ಲಿ ತಮ್ಮ ಕಾರ್ಯಾಲಯದ ಮುಖ್ಯಸ್ಥರ ಪರವಾನಿಗೆ ಪಡೆಯದೇ ಕೇಂದ್ರಸ್ಥಾನ ಬಿಡುವಂತಿಲ್ಲ. ಮತ್ತು ಅಮಾನತ್ತು ಅವಧಿಯಲ್ಲಿ ಕರ್ನಾಟಕ ನಾಗರೀಕ ಸೇವಾ ನಿಯಮಾವಳಿ 1958 ರ ನಿಯಮ 98 ರ ಪ್ರಕಾರ ಜೀವನಾಂಶ ಭತ್ಯೆ ಪಡೆಯಲು ಅರ್ಹರಿರುತ್ತಾರೆ ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.


ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಆಧ್ಯಾತ್ಮ, ಜೀವನಶೈಲಿ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.