ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಪ್ರಕರಣ ಪುನರ್ ಪರಿಶೀಲನೆ

2021 ರಲ್ಲಿ ನಡೆದ ಡಿಜೆ ಹಳ್ಳಿ ಕೆಜಿ ಹಳ್ಳಿ ಗಲಭೆ ಆರೋಪಿಗಳ ಪ್ರಕರಣ ಪುನರ್ ಪರಿಶೀಲನೆ ಕುರಿತಂತೆ ಶಾಸಕ ತನ್ವೀರ್ ಸೇಠ್ ಪತ್ರ ರಾಜ್ಯದಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು. ಇದೇ ವಿಚಾರದ ಬಗ್ಗೆ ಮಾಧ್ಯಮಗಳು ಕೇಳಿದೆ ಪ್ರಶ್ನೆಗೆ ನೋ ಕಮೇಂಟ್ಸ್  ಎಂದು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಉತ್ತರಿಸಿದ್ದಾರೆ‌.

Written by - Zee Kannada News Desk | Last Updated : Jul 28, 2023, 06:54 PM IST
ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಪ್ರಕರಣ ಪುನರ್ ಪರಿಶೀಲನೆ  title=

ಬೆಂಗಳೂರು: 2021 ರಲ್ಲಿ ನಡೆದ ಡಿಜೆ ಹಳ್ಳಿ ಕೆಜಿ ಹಳ್ಳಿ ಗಲಭೆ ಆರೋಪಿಗಳ ಪ್ರಕರಣ ಪುನರ್ ಪರಿಶೀಲನೆ ಕುರಿತಂತೆ ಶಾಸಕ ತನ್ವೀರ್ ಸೇಠ್ ಪತ್ರ ರಾಜ್ಯದಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು. ಇದೇ ವಿಚಾರದ ಬಗ್ಗೆ ಮಾಧ್ಯಮಗಳು ಕೇಳಿದೆ ಪ್ರಶ್ನೆಗೆ ನೋ ಕಮೇಂಟ್ಸ್  ಎಂದು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಉತ್ತರಿಸಿದ್ದಾರೆ‌.

ಮೈಸೂರು ರಸ್ತೆಯಲ್ಲಿರುವ ನಗರ ಸಶಸ್ತ್ರ ಮೀಸಲು ಪಡೆಯ ಕೇಂದ್ರ ಕಚೇರಿಯಲ್ಲಿ ನಡೆದ ಸೇವಾ ಕವಾಯತು ಗೌರವ ಸ್ವೀಕರಿಸಿದ ಬಳಿಕ ಅವರು ಪ್ರತಿಕ್ರಿಯಿಸಿ ನಗರದಲ್ಲಿ ಅಪರಾಧ ಪ್ರಕರಣಗಳ ಕುರಿತು ಮಾತನಾಡಿದ ಬಿ.ದಯಾನಂದ್ ಅಂಕಿ ಅಂಶಗಳನ್ನ ನೋಡಿದಾಗ ಅಪರಾಧ ಪ್ರಕರಣಗಳ ಸಂಖ್ಯೆ ಕಡಿಮೆ ಇದೆ.

ಇದನ್ನೂ ಓದಿ: ನೀವು ಊಟದ ನಂತರ ಏಲಕ್ಕಿ ತಿಂತೀರಾ..! ತಪ್ಪದೇ ಈ ವಿಚಾರ ತಿಳಿದುಕೊಳ್ಳಿ

ಲೋಕ ಸ್ಪಂದನ ಯೋಜನೆ ಬಗ್ಗೆ ಜನರಿಂದ ಉತ್ತಮ ಸ್ಪಂದನೆ ಸಿಗುತ್ತಿದೆ. ಡಿಸಿಪಿ, ಎಸಿಪಿಗಳು ಖುದ್ದಾಗಿ ಜನರ ಸಮಸ್ಯೆ ಆಲಿಸುತ್ತಿದ್ದಾರೆ. ಪಾಸ್‌ಪೋರ್ಟ್ ವಿಚಾರಕ್ಕೆ ಐದು ನೂರು ರೂಪಾಯಿ ಲಂಚ ಪಡೆದಿದ್ದ ಪೊಲೀಸ್ ಸಿಬ್ಬಂದಿ ಬಗ್ಗೆ ಲೋಕಸ್ಪಂದನದಲ್ಲಿ ದೂರು ದಾಖಲಾಗಿತ್ತು.

ಆ ಸಿಬ್ಬಂದಿಯನ್ನ ಅಮಾನತ್ತು ಮಾಡಿ ಕ್ರಮ ಕೈಗೊಳ್ಳಲಾಗಿದೆ ಎಂದರು. ಮಾದಕ ಸರಬರಾಜು ಪ್ರಕರಣಗಳ ಕುರಿತು ಮಾತನಾಡುತ್ತಾ, ' ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಅರಿವು ಮೂಡಿಸುತ್ತಿದ್ದೇವೆ. ಕಾಲೇಜು ಬಳಿ ಪೊಲೀಸರಿಂದ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ. ಮಾದಕ ಸರಬರಾಜಲ್ಲಿ ತೊಡಗಿದರೆ ಅಂತವರ ವಿರುದ್ದ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಖಡಕ್ ಎಚ್ಚರಿಕೆ ‌ನೀಡಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News