ಬೆಂಗಳೂರು: ಕಾಂಗ್ರೆಸ್ ಪಕ್ಷಕ್ಕೆ ರಾಷ್ಟ್ರೀಯ ಅಧ್ಯಕ್ಷರೇ ಇಲ್ಲ. ಹೀಗಾಗಿ ರಾಜ್ಯ ಕಾಂಗ್ರೆಸ್ ನಾಯಕರಾದ ಡಿ.ಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಪಂಜರದ ಗಿಣಿಗಳಾಗಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್(Nalin Kumar Kateel) ಟೀಕಿಸಿದ್ದಾರೆ.
ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ‘ಸಿದ್ದರಾಮಯ್ಯ(Siddaramaiah) ಹಾಗೂ ಡಿ.ಕೆ.ಶಿವಕುಮಾರ್(DK Shivakumar) ಬಣದ ನಡುವೆ ಮುನಿಸಿದೆ’ ಅಂತಾ ಹೇಳಿದ್ದಾರೆ. ‘ಸಿದ್ದರಾಮಯ್ಯ, ಡಿಕೆಶಿ, ಮಲ್ಲಿಕಾರ್ಜುನ್ ಖರ್ಗೆ, ಈಶ್ವರ್ ಖಂಡ್ರೆ ಹೀಗೆ ಅನೇಕ ನಾಯಕರ ತೆಕ್ಕೆಯಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು ಸಿಲುಕಿದ್ದಾರೆ. ಅಸ್ತಿತ್ವಕ್ಕಾಗಿ ಹೆಣಗಾಡುವ ಪರಿಸ್ಥಿತಿ ತಂದುಕೊಂಡಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ನಾಯಕತ್ವದ ಕೊರತೆಯಿದೆ’ ಅಂತಾ ಕುಟುಕಿದ್ದಾರೆ.
ಕಾಂಗ್ರೆಸ್ ಪಕ್ಷಕ್ಕೆ ರಾಷ್ಟ್ರೀಯ ಅಧ್ಯಕ್ಷರೇ ಇಲ್ಲ. ಹೀಗಾಗಿ ರಾಜ್ಯ ಕಾಂಗ್ರೆಸ್ ನಾಯಕರಾದ ಡಿಕೆಶಿ ಹಾಗೂ ಸಿದ್ದರಾಮಯ್ಯ ಪಂಜರದ ಗಿಣಿಗಳಾಗಿದ್ದಾರೆ. ಸಿದ್ದರಾಮಯ್ಯ ಹಾಗೂ ಡಿಕೆಶಿ ಬಣದ ನಡುವೆ ಮುನಿಸಿದೆ.
- ಶ್ರೀ @nalinkateel
1/3#NalinSpeaks
— BJP Karnataka (@BJP4Karnataka) September 1, 2021
‘ಕಾಂಗ್ರೆಸ್(Congress) ಪಕ್ಷದ ಒಳ ಬೇಗುದಿಯಿಂದಾಗಿ ಇತಿಹಾಸದ ಪುಟ ಸೇರುತ್ತಿದೆ. ಕಾಂಗ್ರೆಸ್ ತನ್ನ ಕಾರ್ಯಕರ್ತರ ವಿಶ್ವಾಸ ಕಳೆದುಕೊಂಡಿದೆ. ವರ್ಷ ಕಳೆದರೂ ರಾಜ್ಯ ಪದಾಧಿಕಾರಿಗಳ ನೇಮಕ ಮಾಡಲು ಸಾಧ್ಯವಾಗಿಲ್ಲ. ಪಕ್ಷವನ್ನು ಮುನ್ನಡೆಸಲು ಸಾಧ್ಯವಾಗದವರು ದೇಶ, ರಾಜ್ಯವನ್ನು ಹೇಗೆ ಮುನ್ನಡೆಸಲು ಸಾಧ್ಯ?’ ಎಂದು ನಳೀನ್ ಕುಮಾರ್ ಕಟೀಲ್ ಪ್ರಶ್ನಿಸಿದ್ದಾರೆ.
ಕಾಂಗ್ರೆಸ್ ಪಕ್ಷದ ಒಳ ಬೇಗುದಿಯಿಂದಾಗಿ ಇತಿಹಾಸದ ಪುಟ ಸೇರುತ್ತಿದೆ. ಕಾಂಗ್ರೆಸ್ ತನ್ನ ಕಾರ್ಯಕರ್ತರ ವಿಶ್ವಾಸ ಕಳೆದುಕೊಂಡಿದೆ.
ವರ್ಷ ಕಳೆದರೂ ರಾಜ್ಯ ಪದಾಧಿಕಾರಿಗಳ ನೇಮಕ ಮಾಡಲು ಸಾಧ್ಯವಾಗಿಲ್ಲ. ಪಕ್ಷವನ್ನು ಮುನ್ನಡೆಸಲು ಸಾಧ್ಯವಾಗದವರು ದೇಶ, ರಾಜ್ಯವನ್ನು ಹೇಗೆ ಮುನ್ನಡೆಸಲು ಸಾಧ್ಯ?
- ಶ್ರೀ @nalinkateel
3/3#NalinSpeaks
— BJP Karnataka (@BJP4Karnataka) September 1, 2021
ಇದನ್ನೂ ಓದಿ: ಬಿಜೆಪಿ ಆಡಳಿತದಲ್ಲಿ ಸಾವು ಖಚಿತ, ಶವಸಂಸ್ಕಾರ ಉಚಿತ!: ಕಾಂಗ್ರೆಸ್ ವ್ಯಂಗ್ಯ
ಸಿದ್ದರಾಮಯ್ಯ, ಡಿಕೆಶಿ, ಖರ್ಗೆ, ಈಶ್ವರ್ ಖಂಡ್ರೆ ಹೀಗೆ ಅನೇಕ ನಾಯಕರ ತೆಕ್ಕೆಯಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು ಸಿಲುಕಿದ್ದಾರೆ. ಅಸ್ತಿತ್ವಕ್ಕಾಗಿ ಹೆಣಗಾಡುವ ಪರಿಸ್ಥಿತಿ ತಂದುಕೊಂಡಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ನಾಯಕತ್ವದ ಕೊರತೆಯಿದೆ.
- ಶ್ರೀ @nalinkateel
2/3#NalinSpeaks
— BJP Karnataka (@BJP4Karnataka) September 1, 2021
ದುಡ್ಡಿನ ರಾಜಕಾರಣ ಜೆಡಿಎಸ್ ಸಂಸ್ಕೃತಿ
ಬಿಜೆಪಿ ರಾಜ್ಯ ಘಟಕದ ಉಸ್ತುವಾರಿ ಅರುಣ್‌ಸಿಂಗ್(Arun Singh)ಕರ್ನಾಟಕಕ್ಕೆ ಬರುವುದು ವಸೂಲಿಗಾಗಿ ಎಂದು ಹೇಳಿರುವ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿಯವರಿಗೆ ಕಟೀಲ್ ತಿರುಗೇಟು ನೀಡಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ‘ಜೆಡಿಎಸ್ ಪಕ್ಷದವರು ಕೇವಲ ದುಡ್ಡಿಗಾಗಿ ರಾಜಕಾರಣ ಮಾಡುತ್ತಾರೆ. ಹಣದ ಮೇಲೆಯೇ ರಾಜಕಾರಣ ಮಾಡುವುದು ಜೆಡಿಎಸ್ ಸಂಸ್ಕೃತಿ. ಹೀಗಾಗಿ ಅವರ ಅನುಭವವನ್ನೇ ಹೇಳಿದ್ದಾರೆ. ಹಳದಿ ರೋಗದವರಿಗೆ ನೋಡಿದ್ದೆಲ್ಲ ಹಳದಿಯಾಗಿ ಕಾಣುತ್ತದೆ. ಜೆಡಿಎಸ್ ನವರು ಆಡುವಂತಹ ಮಾತುಗಳನ್ನು ಬಿಜೆಪಿಯವರು ಆಡಲ್ಲ. ಜೆಡಿಎಸ್ನ ಪರಿಸ್ಥಿತಿ ಏನೆಂಬುದು ರಾಜ್ಯದ ಜನರಿಗೆ ಗೊತ್ತಿದೆ’ ಅಂತಾ ಕಟೀಲ್ ಟೀಕಿಸಿದ್ದಾರೆ.
ಕೇಂದ್ರದಲ್ಲಿರುವ ಕರ್ನಾಟಕ ಬಿಜೆಪಿ(Karnataka BJP) ನಾಯಕರಿಗೆ ಎಲುಬು, ನಾಲಿಗೆ ಇಲ್ಲ. ಹೀಗಾಗಿ ರಾಜ್ಯಕ್ಕೆ ಬೇಕಾದ ಏನನ್ನೂ ಅವರು ಕೇಳುವುದಿಲ್ಲವೆಂಬ ಎಚ್ ಡಿಕೆ ಮಾತಿಗೆ ಪ್ರತಿಕ್ರಿಯಿಸಿದ ಕಟೀಲ್, ‘ಜೆಡಿಎಸ್ ನವರು ರಾಜ್ಯ ಮತ್ತು ದೇಶವನ್ನು ಆಳಿದ್ದಾರೆ. ಅವರಿಗೆ ಎಲುಬು, ನಾಲಿಗೆ ಇದ್ದಿದ್ದರೆ ಜೆಡಿಎಸ್ ಗೆ ಈ ಪರಿಸ್ಥಿತಿ ಬರುತ್ತಿರಲಿಲ್ಲವೆಂದು ಕಟೀಲ್ ವ್ಯಂಗ್ಯವಾಡಿದ್ದಾರೆ.
ಇದನ್ನೂ ಓದಿ: 1 ಕೋಟಿ ರೂ. ಮೌಲ್ಯದ ಕಾರಿನಲ್ಲಿ ಮಾಜಿ ಸಿಎಂ ಬಿಎಸ್‍ವೈ ರಾಜ್ಯ ಪ್ರವಾಸ..!
ಬೆಲೆ ಏರಿಕೆ ವಿಚಾರವಾಗಿ ಮಾತನಾಡಿದ ಅವರು, ‘ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬೆಲೆಯಲ್ಲಿ ವ್ಯತ್ಯಾಸವಾದಾಗ ಬೆಲೆ ಏರಿಕೆಯಾಗುತ್ತದೆ. ಬೆಲೆ ಏರಿಕೆಯನ್ನಯನ್ನು ನಿಯಂತ್ರಿಸಲು ನಮ್ಮ ಸರ್ಕಾರ ಪ್ರಯತ್ನ ಮಾಡುತ್ತಿದೆ’ ಎಂದು ಹೇಳಿದ್ದಾರೆ. ನಮ್ಮ ನೆಲ, ಜಲ ಮತ್ತು ಭಾಷೆಗೆ ಕಟಿಬದ್ಧವಾಗಿ ಬಿಜೆಪಿ ಇದೆ ಅಂತಾ ಇದೇ ವೇಳೆ ಕಟೀಲ್ ಹೇಳಿದರು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.