ಬೆಂಗಳೂರು: ಕೊರೋನಾದಿಂದ ಸತ್ತವರ ಕುಟುಂಬಕ್ಕೆ ಸರ್ಕಾರ 5 ಲಕ್ಷ ಪರಿಹಾರ ನೀಡಬೇಕು. ಸರ್ಕಾರ ಕೂಡಲೇ ಮೃತರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ನೀಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆಗ್ರಹಿಸಿದ್ದಾರೆ.


COMMERCIAL BREAK
SCROLL TO CONTINUE READING

ಈ ಕುರಿತಂತೆ ಕಾಂಗ್ರೆಸ್ ಕಚೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಕೊರೋನಾ ಸಮಯದಲ್ಲಿ ನಾನು (ಡಿ.ಕೆ. ಶಿವಕುಮಾರ್)  ಸಿದ್ದರಾಮಯ್ಯನವರು ಸೇರಿದಂತೆ ಅನೇಕ ನಾಯಕರು ರಾಜ್ಯದಲ್ಲಿ ನಾಲ್ಕುವರೆ ಲಕ್ಷ ಜನ ಸತ್ತಿದ್ದಾರೆ ಎಂದು ಹೇಳಿಕೆ ನೀಡಿದ್ದೆವು. ನನ್ನ ತಾಲೂಕಿನಲ್ಲಿ ಸುಮಾರು 400 ಕ್ಕೂ ಹೆಚ್ಚು ಜನ ಮೃತಪಟ್ಟಿದ್ದಾರೆ. ಆದರೆ ಸರ್ಕಾರ ಮಾತ್ರ ಕೇವಲ 100 ಜನ ಸತ್ತಿದ್ದಾರೆ ಎಂದು ತಿಳಿಸಿತ್ತು. ನಾನು ಸಭೆ ಮಾಡಿ ಚರ್ಚಿಸಿ ಯಾರೆಲ್ಲ ಸತ್ತಿದ್ದಾರೆ ಅವರಿಗೆ ಪರಿಹಾರ ನೀಡುವಂತೆ ಅರ್ಜಿ ಹಾಕಲು ಅವಕಾಶ ನೀಡಿ ಎಂದು ತಿಳಿಸಿದ್ದೆ. ಸುಮಾರು ಮುನ್ನೂರಕ್ಕೂ ಹೆಚ್ಚು ಜನ ಪರಿಹಾರಕ್ಕೆ ಅರ್ಜಿ ಹಾಕಿದ್ದು, ಅದನ್ನು ಮಾನ್ಯ ಮಾಡಿದ್ದಾರೆ. ಆದರೆ ಇದುವರೆಗೂ ಕೊರೋನಾದಿಂದ ಸತ್ತವರಿಗೆ ಸರ್ಕಾರ ಪರಿಹಾರ ನೀಡಿಲ್ಲ. ಅರ್ಹರಿಗೆ ಶೀಘ್ರವೇ ಸರ್ಕಾರದಿಂದ ಪರಿಹಾರ ದೊರೆಯಬೇಕು ಎಂದವರು ಮನವಿ ಮಾಡಿದರು. 


ಇದನ್ನೂ ಓದಿ- ಯತ್ನಾಳ್ ಹೇಳಿಕೆ ಬಗ್ಗೆ ಉನ್ನತ ಮಟ್ಟದ ತನಿಖೆಗೆ ಡಿಕೆ ಶಿವಕುಮಾರ್ ಆಗ್ರಹ


ಚಾಮರಾಜನಗರ ದುರಂತದ ನಂತರ ನಾವು ಸದನದ ಒಳಗೆ ಹಾಗೂ ಹೊರಗೆ ರಾಜ್ಯದಲ್ಲಿ ಸುಮಾರು ನಾಲ್ಕುವರೆ ಲಕ್ಷ ಜನ ಕೊರೊನಾದಿಂದ ಸತ್ತಿದ್ದಾರೆ ಎಂದು ಮಾಹಿತಿ ನೀಡಿದ್ದೆವು. ಆದರೆ ಈಗ ದೇಶದಲ್ಲಿ ಕೊರೊನಾದಿಂದ 47 ಲಕ್ಷ ಜನ ಸತ್ತಿದ್ದಾರೆ ಎಂದು ವಿಶ್ವ ಆರೋಗ್ಯ ಸಂಸ್ಥೆ ವರದಿ ತಿಳಿಸಿದೆ. ಕೊರೋನಾದಿಂದ ಮೃತಪಟ್ಟವರಿಗೆ ಪರಿಹಾರ ನೀಡಬೇಕು ಎಂದು  ಸುಪ್ರೀಂಕೋರ್ಟ್ ಹಾಗೂ ಹೈಕೋರ್ಟ್ ಆದೇಶ ನೀಡಿದೆ. ಇದು ಸರ್ಕಾರದ ಜವಾಬ್ದಾರಿಯೂ ಆಗಿದೆ ಎಂದರು. 


ಕೊರೋನಾ ಸಮಯದಲ್ಲಿ ಬಿಜೆಪಿ ಸರ್ಕಾರ ಚಪ್ಪಾಳೆತಟ್ಟಿ, ಗಂಟೆ ಬಾರಿಸಿ,  ದೀಪಹಚ್ಚಿ ಎಂದಿತು. ಎಲ್ಲಾ ರೀತಿಯಲ್ಲೂ ನಾವು ಅವರಿಗೆ ಸಹಕಾರ ನೀಡಿದ್ದೇವೆ. 
ಕೊರೋನಾದಿಂದ ಸತ್ತವರಿಗೆ ಪರಿಹಾರ ನೀಡುವುದಾಗಿ ಆಗಿನ ಮುಖ್ಯಮಂತ್ರಿ ಯಡಿಯೂರಪ್ಪನವರೇ ಸದನದಲ್ಲಿ ಮಾತು ಕೊಟ್ಟಿದ್ದರು. ಆದರೆ ಇದುವರೆಗೂ ಇವರ ಕುಟುಂಬಕ್ಕೆ ಪರಿಹಾರ ಸಿಕ್ಕಿಲ್ಲ. ಇನ್ನು ಆರೋಗ್ಯ ಸಚಿವರು ಸತ್ತವರ ಲೆಕ್ಕವನ್ನು ಮುಚ್ಚಿಡುತ್ತಿದ್ದಾರೆ ಎಂದವರು ಆರೋಪಿಸಿದರು. 


ಇದನ್ನೂ ಓದಿ- ಮುಂದಿನ 4 ದಿನ ರಾಜ್ಯದಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ


ಈ ಕೂಡಲೇ ಮುಖ್ಯಮಂತ್ರಿಗಳು ಮತ್ತೊಂದು ಸಭೆ ಕರೆದು ಮೃತರ ಕುಟುಂಬಕ್ಕೆ ನ್ಯಾಯ ಒದಗಿಸಿಕೊಡಬೇಕು. ಮುಖ್ಯಮಂತ್ರಿಗಳು ಬೇಕಾದರೆ  ಅವರ ಹಾಗೂ ಮಾಜಿ ಮುಖ್ಯಮಂತ್ರಿಗಳ ಫೋಟೋವನ್ನು ಹಾಕಿಕೊಂಡು ಸತ್ತವರಿಗೆ ಮರಣ ಪ್ರಮಾಣಪತ್ರವನ್ನು ನೀಡಲಿ ಎಂದರು.


ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.