ಡಿ.ಕೆ.ಶಿವಕುಮಾರ್ ಒಬ್ಬಂಟಿಯಲ್ಲ, ಕಾಂಗ್ರೆಸ್ ಪಕ್ಷ ಅವರ ಜತೆಗಿದೆ-ಸಿದ್ದರಾಮಯ್ಯ

ಡಿಕೆಶಿ ಪರ ಟ್ವೀಟ್, ಮೋದಿ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿ

Last Updated : Jun 1, 2018, 11:50 AM IST
ಡಿ.ಕೆ.ಶಿವಕುಮಾರ್ ಒಬ್ಬಂಟಿಯಲ್ಲ, ಕಾಂಗ್ರೆಸ್ ಪಕ್ಷ ಅವರ ಜತೆಗಿದೆ-ಸಿದ್ದರಾಮಯ್ಯ title=

ಬೆಂಗಳೂರು: ರಾಜಕೀಯ ದ್ವೇಷ ಸಾಧನೆಗೆ ನರೇಂದ್ರ ಮೋದಿ ಸರ್ಕಾರ ಕೇಂದ್ರ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡುತ್ತಿರುವುದು‌ ಖಂಡನೀಯ. ಇಂತಹ ಬೆದರಿಕೆಗೆ ಕಾಂಗ್ರೆಸ್ ನಾಯಕರು ಜಗ್ಗುವುದಿಲ್ಲ, ಬಗ್ಗುವುದೂ ಇಲ್ಲ. ಡಿ.ಕೆ.ಶಿವಕುಮಾರ್ ಒಬ್ಬಂಟಿಯಲ್ಲ, ಕಾಂಗ್ರೆಸ್ ಪಕ್ಷ ಅವರ ಜತೆಗಿದೆ ಎಂದು ಡಿಕೆಶಿ ಪರ ಟ್ವೀಟ್ ಮಾಡುವ ಮೂಲಕ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಬುಧವಾರ ಸಿಬಿಐ 11 ಮಂದಿಯ ವಿರುದ್ಧ ಕೋರ್ಟ್‌ನಲ್ಲಿ ಸರ್ಚ್‌ ವಾರೆಂಟ್‌ ಪಡೆದಿತ್ತು. ಈ ಹಿನ್ನಲೆಯಲ್ಲಿ ಡಿ.ಕೆ.ಶಿವಕುಮಾರ್‌ ಅವರ ಕೆಲ ವ್ಯವಹಾರದ ಪಾಲುದಾರರ ನಿವಾಸಗಳ ಮೇಲೆ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ಬಗ್ಗೆ ಡಿಕೆ ಸಹೋದರರು ಗುರುವಾರ ಬೆಳಿಗ್ಗೆ ಸುದ್ದಿಗೋಷ್ಠಿ ನಡೆಸಿ, ಸಿಬಿಐ, ಆದಾಯ ತೆರಿಗೆ ಇಲಾಖೆ ಹಾಗೂ ಇಡಿ ಅಧಿಕಾರಿಗಳೊಂದಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಮತ್ತು ಪ್ರಧಾನಿ ನರೇಂದ್ರ ಮೋದಿ ಸಭೆ ನಡೆಸಿದ್ದಾರೆ. ನಮ್ಮ ವಿರುದ್ಧ ಪ್ರಕರಣ ದಾಖಲಿಸಲು ತಂತ್ರ ರೂಪಿಸಿದ್ದಾರೆ ಎಂದು ಆರೋಪಿಸಿದ್ದರು.

ಗುರುವಾರ ಈ ಬಗ್ಗೆ ಪ್ರತಿಕ್ರಿಯಿಸಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇಂದ್ರ ಸರ್ಕಾರ ಸಿಬಿಐ ಬಳಸಿಕೊಂಡು ನಮ್ಮ ಪಕ್ಷದ ನಾಯಕರನ್ನು ಹೆದರಿಸುತ್ತಿದೆ. ಸಿಬಿಐ ಕಾಂಗ್ರೆಸ್ ನವರನ್ನೇ ಟಾರ್ಗೆಟ್ ಮಾಡ್ತಿದೆ. ದುರುದ್ದೇಶಪೂರ್ವಕವಾಗಿ ದಾಳಿ ನಡೆಸಲಾಗುತ್ತಿದೆ ಎಂದು ಹರಿಹೈದಿದ್ದರು.

Trending News