ನವದೆಹಲಿ: ಷರತ್ತುಬದ್ಧ ಜಾಮೀನು ಪಡೆದು ನಿನ್ನೆಯಷ್ಟೇ ತಿಹಾರ್ ಜೈಲಿನಿಂದ ಬಿಡುಗಡೆಯಾಗಿರುವ ಕಾಂಗ್ರೆಸ್ ನಾಯಕ ಡಿ.ಕೆ. ಶಿವಕುಮಾರ್ ಇಂದು ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೆತಿಯಾಗ್ಲಿದ್ದ್ದಾರೆ ಎಂದು ಮೂಲಗಳು ತಿಳಿಸಿವೆ.


COMMERCIAL BREAK
SCROLL TO CONTINUE READING

ಪಿಎಂಎಲ್ ಅಡಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೆ ಒಳಗಾಗಿ 48 ದಿನಗಳ ಕಾಲ ತಿಹಾರ್ ಕೇಂದ್ರ ಕಾರಾಗೃಹದಲ್ಲಿದ್ದ ಕಾಂಗ್ರೆಸ್ ನಾಯಕ ಡಿ.ಕೆ. ಶಿವಕುಮಾರ್ ಅವರಿಗೆ ಬುಧವಾರ ದೆಹಲಿ ಹೈಕೋರ್ಟ್ ಷರತ್ತುಬದ್ಧ ಜಾಮೀನು ನೀಡಿದೆ.


ಸದ್ಯ ದೆಹಲಿಯಲ್ಲೇ ಇರುವ ಡಿಕೆಶಿ ಇಂದು ಬೆಳಿಗ್ಗೆ 11 ಗಂಟೆಗೆ ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿಯವರನ್ನು ಭೇಟಿಯಾಗಲಿದ್ದಾರೆ ಎನ್ನಲಾಗಿದೆ. ಗಮನಾರ್ಹವಾಗಿ ಸೋನಿಯಾ ಗಾಂಧಿಯವರು ನಿನ್ನೆ ತಿಹಾರ್ ಜೈಲಿಗೆ ಭೇಟಿ ನೀಡಿ ಡಿ.ಕೆ. ಶಿವಕುಮಾರ್ ಅವರ ಆರೋಗ್ಯ ವಿಚಾರಿಸಿ ಸುಮಾರು 30 ನಿಮಿಷಗಳ ಕಾಲ ಮಾತುಕತೆ ನಡೆಸಿದ್ದರು.