ಬಿಜೆಪಿ ಷಡ್ಯಂತ್ರಕ್ಕೆ ನ್ಯಾಯಾಲಯ ಮತ್ತು ನನ್ನ ಆಸ್ತಿ ಪಟ್ಟಿ ಉತ್ತರ ಕೊಡುತ್ತೆ : ಡಿಸಿಎಂ ಡಿ.ಕೆ.ಶಿವಕುಮಾರ್

ಶೇ 90 ರಷ್ಟು ತನಿಖೆ ನಡೆಸಿದ್ದೇವೆ ಎಂದು ಸಿಬಿಐ ಹೇಳಿದೆ. ನಾನು, ನನ್ನ ಹೆಂಡತಿ ಹಾಗೂ ಕುಟುಂಬದವರು ನನ್ನ ಆಸ್ತಿ ಯಾವುದು, ನನ್ನ ಹೆಂಡತಿಯ ಆಸ್ತಿ ಯಾವುದು ಎಂದು ಹೇಳಬೇಕು. ನನ್ನನ್ನೇ ಕರೆಸದೆ, ಕೇಳದೆ ಅದು ಹೇಗೆ ಶೇಕಡಾ 90 ರಷ್ಟು ತನಿಖೆ ಮಾಡಿದರೋ ಗೊತ್ತಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ತಿಳಿಸಿದರು.

Written by - Prashobh Devanahalli | Edited by - Krishna N K | Last Updated : Oct 19, 2023, 05:05 PM IST
  • ಡಿಕೆ ಶಿವಕುಮಾರ್‌ ವಿರುದ್ಧ ತನಿಖೆ ನಡೆಸಲು ಸಿಬಿಐಗೆ ಹೈಕೋರ್ಟ್ ಅನುಮತಿ
  • ನ್ಯಾಯಾಲಯ ಮತ್ತು ನನ್ನ ಆಸ್ತಿ ಪಟ್ಟಿ ಎಲ್ಲಾ ಉತ್ತರ ಕೊಡುತ್ತದೆ ಎಂದು ಉಪಮುಖ್ಯಮಂತ್ರಿ
  • ಬಿಜೆಪಿಯವರ ಷಡ್ಯಂತ್ರ ಏನೇ ಇರಬಹುದು ಕಾನೂನು ಚೌಕಟ್ಟಿನಲ್ಲೇ ಹೋರಾಡ್ತೀನಿ ಎಂದ ಡಿಕೆಶಿ
ಬಿಜೆಪಿ ಷಡ್ಯಂತ್ರಕ್ಕೆ ನ್ಯಾಯಾಲಯ ಮತ್ತು ನನ್ನ ಆಸ್ತಿ ಪಟ್ಟಿ ಉತ್ತರ ಕೊಡುತ್ತೆ : ಡಿಸಿಎಂ ಡಿ.ಕೆ.ಶಿವಕುಮಾರ್ title=

ಬೆಂಗಳೂರು : ಬಿಜೆಪಿಯವರ ಷಡ್ಯಂತ್ರ ಏನೇ ಇರಬಹುದು, ನ್ಯಾಯಾಲಯ ಮತ್ತು ನನ್ನ ಆಸ್ತಿ ಪಟ್ಟಿ ಎಲ್ಲಾ ಉತ್ತರ ಕೊಡುತ್ತದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಹೇಳಿದರು‌.

ಅಕ್ರಮ ಆಸ್ತಿ ಗಳಿಕೆ ವಿಚಾರವಾಗಿ ಸಿಬಿಐ ತನಿಖೆ ನಡೆಸಲು ಹೈಕೋರ್ಟ್ ಅನುಮತಿ ನೀಡಿರುವ ಬಗ್ಗೆ ಶಿವಕುಮಾರ್ ಅವರು ಮಾಧ್ಯಮಗಳಿಗೆ ದೇವನಹಳ್ಳಿ ವಿಮಾನ ನಿಲ್ದಾಣದ ಬಳಿ ಪ್ರತಿಕ್ರಿಯೆ ನೀಡಿದರು. ಶೇ 90 ರಷ್ಟು ತನಿಖೆ ನಡೆಸಿದ್ದೇವೆ ಎಂದು ಸಿಬಿಐ ಹೇಳಿದೆ. ನಾನು, ನನ್ನ ಹೆಂಡತಿ ಹಾಗೂ ಕುಟುಂಬದವರು ನನ್ನ ಆಸ್ತಿ ಯಾವುದು, ನನ್ನ ಹೆಂಡತಿಯ ಆಸ್ತಿ ಯಾವುದು ಎಂದು ಹೇಳಬೇಕು. ನನ್ನನ್ನೇ ಕರೆಸದೆ, ಕೇಳದೆ ಅದು ಹೇಗೆ ಶೇಕಡಾ 90 ರಷ್ಟು ತನಿಖೆ ಮಾಡಿದರೋ ಗೊತ್ತಿಲ್ಲ ಎಂದರು.

ಇದನ್ನೂ ಓದಿ:ಜೆಡಿಎಸ್​​ನಿಂದ ಸಿಎಂ ಇಬ್ರಾಹಿಂಗೆ ಗೇಟ್‌ ಪಾಸ್‌..! ಹೈಕೋರ್ಟ್‌ಗೆ ಹೋಗ್ತೀನಿ ಎಂದ ಮಾಜಿ ಅಧ್ಯಕ್ಷ

ನಾವು ನ್ಯಾಯಾಲಯಕ್ಕೆ ಸಿಬಿಐ ದಾಖಲಿಸಿರುವ ಎಫ್‌ಐಆರ್ ಸರಿ ಇಲ್ಲ ಎಂದು ಮೇಲ್ಮನವಿ ಸಲ್ಲಿಸಿದ್ದೆವು. ರಾಜಕೀಯ ಉದ್ದೇಶದಿಂದ ಯಡಿಯೂರಪ್ಪ ಅವರ ಸರ್ಕಾರ ಇದ್ದ ವೇಳೆ ತನಿಖೆಗೆ ಆದೇಶ ನೀಡಿದ್ದರು ಎಂದರು. ಅಲ್ಲದೆ, ನನಗೆ ನ್ಯಾಯಲಯದ ಬಗ್ಗೆ ಗೌರವ, ನಂಬಿಕೆಯಿದೆ. ಅಗತ್ಯ ಸಂದರ್ಭದಲ್ಲಿ ಸೂಕ್ತ ಉತ್ತರ ಕೊಡುತ್ತೇನೆ. ಏನೇ ಪ್ರೇರಣೆ ಇರಬಹುದು, ಆದರೆ ನಾನು ಕಾನೂನು ಚೌಕಟ್ಟಿನಲ್ಲೇ ಹೋರಾಟ ಮಾಡುತ್ತೇನೆ ಎಂದು ತಿಳಿಸಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News